ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೋವಿಡ್ ಪರೀಕ್ಷೆಗೆ ಮಾದರಿ ಕೊಟ್ಟಿದ್ದರೂ ಐಸೋಲೇಷನ್ ಕಡ್ಡಾಯ

|
Google Oneindia Kannada News

ಬೆಂಗಳೂರು, ಜುಲೈ 13 : ಕೊರೊನಾ ವೈರಸ್ ಸೋಂಕಿನ ಪರೀಕ್ಷೆಗೆ ಮಾದರಿ ಕೊಟ್ಟಿರುವ ಜನರು ಸಹ ಐಸೋಲೇಷನ್‌ನಲ್ಲಿ ಇರುವುದು ಕಡ್ಡಾಯ ಎಂದು ಆರೋಗ್ಯ ಇಲಾಖೆ ಹೇಳಿದೆ. ಉಲ್ಲಂಘನೆ ಮಾಡಿದರೆ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ.

ಆರೋಗ್ಯ ಇಲಾಖೆ ಸೋವಾರ ಈ ಕುರಿತು ಆದೇಶ ಹೊರಡಿಸಿದೆ. ಕೊರೊನಾ ವೈರಸ್ ಸೋಂಕಿನ ಪರೀಕ್ಷೆಗೆ ಮಾದರಿ ಕೊಟ್ಟಿದ್ದಲ್ಲಿ ಫಲಿತಾಂಶ ಬರುವವರೆಗೂ ಆ ವ್ಯಕ್ತಿಗಳು ಐಸೋಲೇಷನ್‌ನಲ್ಲಿರುವುದು ಕಡ್ಡಾಯವಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಒಂದೇ ದಿನ ದೇಶದಲ್ಲಿ 500 ಸಾವು, 28701 ಕೊರೊನಾ ಕೇಸ್ ಪತ್ತೆಒಂದೇ ದಿನ ದೇಶದಲ್ಲಿ 500 ಸಾವು, 28701 ಕೊರೊನಾ ಕೇಸ್ ಪತ್ತೆ

ಒಂದು ವೇಳೆ ಮಾದರಿ ಕೊಟ್ಟಿರುವ ವ್ಯಕ್ತಿ ಫಲಿತಾಂಶ ಬರುವುದಕ್ಕೂ ಮೊದಲು ಸಾರ್ವಜನಿಕ ಸ್ಥಳದಲ್ಲಿ ಸಂಚಾರ ನಡೆಸುವುದು, ಕಚೇರಿಗೆ ಹೋಗುವುದು, ಅನಗತ್ಯವಾಗಿ ತಿರುಗಾಡುವುದನ್ನು ಮಾಡುವಂತಿಲ್ಲ ಎಂದು ಆರೋಗ್ಯ ಇಲಾಖೆ ಹೇಳಿದೆ.

ವಿಡಿಯೋ ಮಾಡಿ ಹರಿಬಿಟ್ಟ ಕೊರೊನಾ ಸೋಂಕಿತ: ಸ್ಪಷ್ಟನೆ ನೀಡಿದ ಕ್ರಿಮ್ಸ್ವಿಡಿಯೋ ಮಾಡಿ ಹರಿಬಿಟ್ಟ ಕೊರೊನಾ ಸೋಂಕಿತ: ಸ್ಪಷ್ಟನೆ ನೀಡಿದ ಕ್ರಿಮ್ಸ್

Isolation Mandatory For Who Provided Sample For COVID Test

ಮಾದರಿ ಕೊಟ್ಟು ಫಲಿತಾಂಶ ಬರುವುದಕ್ಕೂ ಮೊದಲು ವ್ಯಕ್ತಿ ಐಸೋಲೇಷನ್ ನಿಮಯಗಳನ್ನು ಮೀರಿ ಸಂಚಾರ ನಡೆಸಿದರೆ ಸಾಂಕ್ರಾಮಿಕ ರೋಗಗಳ ಕಾಯಿದೆ 1897ರ ಅನ್ವಯ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮಗಳನ್ನಯ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.

ಕೊರೊನಾ ಬಿಕ್ಕಟ್ಟಿನಿಂದಾಗಿ ಸರ್ಕಾರಿ ಉದ್ಯೋಗಕ್ಕೆ ಹೆಚ್ಚಿದ ಆದ್ಯತೆ:ಸಮೀಕ್ಷೆಕೊರೊನಾ ಬಿಕ್ಕಟ್ಟಿನಿಂದಾಗಿ ಸರ್ಕಾರಿ ಉದ್ಯೋಗಕ್ಕೆ ಹೆಚ್ಚಿದ ಆದ್ಯತೆ:ಸಮೀಕ್ಷೆ

ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣ ಹೆಚ್ಚಾಗುತ್ತಿರುವುದರಿಂದ ಕರ್ನಾಟಕ ಸರ್ಕಾರ ಸೋಂಕು ಹರಡುವಿಕೆ ತಡೆಯಲು ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ. ಮಂಗಳವಾರ ರಾತ್ರಿ 8 ಗಂಟೆಯಿಂದ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ ಡೌನ್ ಜಾರಿಗೊಳಿಸಲಾಗುತ್ತಿದೆ.

English summary
Isolation/Quarantine mandatory for the persons who have provided sample for COVID 19 testing said Karnataka health department.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X