ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇಸ್ರೋ ಅಧ್ಯಕ್ಷ ಕೆ. ಶಿವನ್ ಮುಕುಟಕ್ಕೆ ಮತ್ತೊಂದು ಗರಿ!

|
Google Oneindia Kannada News

ಬೆಂಗಳೂರು, ನ. 22: ಇಸ್ರೋ ಅಧ್ಯಕ್ಷ ಹಾಗೂ ಖ್ಯಾತ ಬಾಹ್ಯಾಕಾಶ ವಿಜ್ಞಾನಿ ಕೆ. ಶಿವನ್ ಅವರು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪ್ರತಿಷ್ಠಿತ ʼಡಾಕ್ಟರ್‌ ಆಫ್‌ ಸೈನ್ಸ್‌ʼ ಗೌರವ ಪದವಿಗೆ ಪಾತ್ರರಾಗಿದ್ದಾರೆ. ಅತ್ಯುತ್ತಮ ವಿಜ್ಞಾನಿಗಳು ಹಾಗೂ ಕೈಗಾರಿಕೋದ್ಯಮಿಗಳನ್ನು ಗುರುತಿಸಿ ಈ ಪದವಿಯನ್ನು ನೀಡಲಾಗುತ್ತದೆ.

ರಾಜಭವನದಲ್ಲಿ ಶನಿವಾರ ನಡೆದ ಸರಳ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜೂಭಾಯಿ ವಾಲ ಅವರು ಶಿವನ್ ಅವರಿಗೆ ಈ ಗೌರವ ಪದವಿಯನ್ನು ಪ್ರದಾನ ಮಾಡಿದರು. ಜೊತೆಗೆ ಇಸ್ರೋ ಅಧ್ಯಕ್ಷರಾಗಿ ಭಾರತೀಯ ಬಾಹ್ಯಾಕಾಶ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆ ಶ್ಲಾಘಿಸಿದರು.

K Sivan Honored With Prestigious Degree Of Science from Visvesvaraya Technical University

Recommended Video

ಡಿಸೆಂಬರ್ ಅಂತ್ಯದವರೆಗೂ ಕರ್ನಾಟಕದಲ್ಲಿ ಶಾಲೆ ಆರಂಭ ಇಲ್ಲ | Oneindia Kannada

ಇದೇ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವ, ಡಿಸಿಎಂ ಡಾ.ಸಿ.ಎನ್. ಅಶ್ವಥ್ ನಾರಾಯಣ ಅವರು ಶಿವನ್ ಅವರನ್ನು ಅಭಿನಂದಿಸಿದರು. ಶಿವನ್‌ ನಾಯಕತ್ವದಲ್ಲಿ ಇಸ್ರೋ ಬಾಹ್ಯಾಕಾಶದಲ್ಲಿ ಅದ್ಭುತಗಳನ್ನೇ ಸೃಷ್ಟಿಸುತ್ತಿದೆ. ನಮ್ಮ ದೇಶ ಕೈಗೊಂಡ ಅನೇಕ ಬಾಹ್ಯಾಕಾಶ ಕಾರ್ಯಕ್ರಮಗಳಲ್ಲಿ ಅವರ ಪಾತ್ರವಿದೆ. ಅವರ ಮುಂದಿನ ಎಲ್ಲ ಯೋಜನೆಗಳು ಯಶಸ್ವಿಯಾಗಲಿ ಎಂದು ಡಿಸಿಎಂ ಹಾರೈಸಿದರು. ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಕರಿಸಿದ್ದಪ್ಪ ಮತ್ತಿತರರು ಈ ಭಾಗವಹಿಸಿದ್ದರು.

English summary
ISRO President K Sivan honored with the prestigious Degree of Science of Visvesvaraya Technical University. Governor Vajubhai Wala conferred the honor to K. Sivan in a simple ceremony on Saturday at the Raj Bhavan. Know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X