ಎಚ್‌ಡಿಕೆ, ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ಆಯೋಗಕ್ಕೆ ಐಟಿ ದೂರು

ಬೆಂಗಳೂರು, ಏಪ್ರಿಲ್ 09: ಕರ್ತವ್ಯಕ್ಕೆ ಅಡ್ಡಿಮಾಡಿದ್ದಾರೆಂದು ಆರೋಪಿಸಿ ಐಟಿ ಇಲಾಖೆಯು ರಾಜ್ಯ ಸಿಎಂ ಕುಮಾರಸ್ವಾಮಿ, ಕಾಂಗ್ರೆಸ್‌ನ ಸಿದ್ದರಾಮಯ್ಯ, ಡಿಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿ ಹಲವು ಮುಖಂಡರು, ಸಚಿವರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ರಾಜ್ಯದಲ್ಲಿ ಕೆಲವು ದಿನಗಳ ಹಿಂದಷ್ಟೆ ನಡೆದ ಐಟಿ ದಾಳಿಯನ್ನು, ರಾಜಕೀಯ ಪ್ರೇರಿತ ಎಂದು ಆರೋಪಿಸಿ ಕುಮಾರಸ್ವಾಮಿ, ಸಿದ್ದರಾಮಯ್ಯ, ಡಿಕೆ.ಶಿವಕುಮಾರ್‌, ದಿನೇಶ್ ಗುಂಡೂರಾವ್, ಪರಮೇಶ್ವರ್ ಇನ್ನೂ ಹಲವು ಮುಖಂಡರು ಐಟಿ ಕಚೇರಿ ಎದುರು ಪ್ರತಿಭಟನೆ ಮಾಡಿದ್ದರು, ಇದನ್ನು ಐಟಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಎಂದು ದೂರು ದಾಖಲಿಸಲಾಗಿದೆ.

ಮಾರ್ಚ್ 28 ರಂದು ಸಚಿವ ಪುಟ್ಟರಂಗಶೆಟ್ಟಿ ಸೇರಿದಂತೆ ಹಲವು ಜೆಡಿಎಸ್-ಕಾಂಗ್ರೆಸ್ ಮುಖಂಡರ ಮೇಲೆ ಐಟಿ ದಾಳಿ ನಡೆಸಲಾಗಿತ್ತು, ಇದು ರಾಜಕೀಯ ಪ್ರೇರಿತ ದಾಳಿ ಎಂದು ಅಂದೇ ಸಂಜೆ ವೇಳೆಗೆ ಮೈತ್ರಿ ಮುಖಂಡರು ಐಟಿ ಕಚೇರಿ ಎದುರು ಪ್ರತಿಭಟನೆ ಮಾಡಿದ್ದರು.

IT complaint to EC against coalition leaders for disruption of duty

ಮುಖ್ಯಮಂತ್ರಿ ಕುಮಾರಸ್ವಾಮಿ ಡಾ. ಜಿ.ಪರಮೇಶ್ವರ್, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಆರ್. ಮಹೇಶ್, ರಾಮಲಿಂಗರೆಡ್ಡಿ, ದಿನೇಶ್ ಗುಂಡ್ ರಾವ್, ಇಷ್ಟು ರಾಜಕಾರಣಿಗಳು ನಮ್ಮ ಕೆಲಸಕ್ಕೆ ಅಡ್ಡಿ ಪಡಿಸಿದ್ದಾರೆ. ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೇ ಐಟಿ ಇಲಾಖೆ ಘನತೆಗೆ ಧಕ್ಕೆ ತಂದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇಷ್ಟು ರಾಜಕಾರಣಿಗಳ ವಿರುದ್ಧ ಐಪಿಸಿ 143, 149, 504, 505, 506, 186, 187, 189 ಅಡಿಯಲ್ಲಿ ಕ್ರಮ ಜರುಗಿಸುವಂತೆ ಮನವಿ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+