ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಖೇಣಿ ಮನೆ ಮೇಲೆ ಐಟಿ ದಾಳಿ
ಬೀದರ್, ಮೇ 11: ಬೀದರ್ ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಅಶೋಕ್ ಖೇಣಿ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಅಕ್ರಮವಾಗಿ ಮನೆಯಲ್ಲಿ ಹಣ ಸಂಗ್ರಹಿಸಿಟ್ಟಿರುವ ಮಾಹಿತಿ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ ಮತ್ತು ಸಿಇಒ ಡಾ. ಸೆಲ್ವಮಣಿ ನೇತೃತ್ವದಲ್ಲಿ ಮನೆ ಮೇಲೆ ದಾಳಿ ನಡೆಸಲಾಗಿದೆ.
ಬೀದರ್ ನಗರದ ರಾಂಪುರೇ ನಗರದಲ್ಲಿರುವ ಅಶೋಕ್ ಖೇಣಿ ಮನೆ ದಾಳಿ ನಡೆಸಲಾಗಿದ್ದು ಹಲವು ಗಂಟೆಗಳಿಂದ ಪರಿಶೀಲನೆ ನಡೆಸುತ್ತಿದ್ದಾರೆ.

ಬೆಂಗಳೂರಿನ ಸದಾಶಿವ ನಗರದಲ್ಲಿರುವ ಖೇಣಿ ಮನೆ ಮೇಲೆಯೂ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು ಕಡತ ಪರಿಶೀಲನೆ ನಡೆಸುತ್ತಿದ್ದಾರೆ.












Click it and Unblock the Notifications