ಐಟಿ ಇಲಾಖೆಯಿಂದ ಡಿಕೆ ಶಿವಕುಮಾರ್ ಗೆ ಸಮನ್ಸ್
ಬೆಂಗಳೂರು, ಆಗಸ್ಟ್ 06: ಇಂಧನ ಸಚಿವ ಡಿ.ಕೆ. ಶಿವಕುಮಾರ್ ಮನೆ ಮೇಲೆ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆಯಿಂದ ಭಾನುವಾರದಂದು ಸಮನ್ಸ್ ಜಾರಿ ಮಾಡಲಾಗಿದೆ.
ಡಿ.ಕೆ. ಶಿವಕುಮಾರ್, ಮಾವ ತಿಮ್ಮಯ್ಯ, ಸೋದರಿ ಪದ್ಮಾ, ಆಪ್ತ ಜ್ಯೋತಿಷಿ ದ್ವಾರಕಾನಾಥ್ ಮತ್ತು ಉದ್ಯಮಿ ಸಚಿನ್ ನಾರಾಯಣ್ ಅವರಿಗೆ ಖುದ್ದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ, ಐಟಿ ಅಧಿಕಾರಿಗಳು ಸಮನ್ಸ್ ಜಾರಿ ಮಾಡಿದ್ದಾರೆ.

ದಾಳಿ ವೇಳೆ ಸಿಕ್ಕ ದಾಖಲೆಗಳ ಬಗ್ಗೆ ಡಿಕೆಶಿ ಮತ್ತು ಇತರೆ ಆರೋಪಿಗಳಿಂದ ವಿವರಣೆ ಪಡೆಯಲು ಸಮನ್ಸ್ ಜಾರಿ ಮಾಡಲಾಗಿದೆ. ವಿಚಾರಣೆಗೆ ಹಾಜರಾಗಲು ಡಿಕೆಶಿ ಎರಡು ದಿನ ಕಾಲಾವಕಾಶ ಕೇಳಿದ್ದಾರೆ ಎಂದು ತಿಳಿದು ಬಂದಿದೆ. ವಿಚಾರಣೆ ನಂತರ ಡಿ.ಕೆ. ಶಿವಕುಮಾರ್ ಬೇನಾಮಿ ಆಸ್ತಿ ಮಾಡಿರುವುದು ಸಾಬೀತಾದರೆ ತನಿಖೆ ನಡೆಸುವಂತೆ ಜಾರಿ ನಿರ್ದೇಶನಾಲಯಕ್ಕೆ ಶಿಫಾರಸು ಮಾಡುವ ಸಾಧ್ಯತೆ ಇದೆ.












Click it and Unblock the Notifications