ರಾಜ್ಯದಲ್ಲಿ ನಡೆದ ಐಟಿ ದಾಳಿಯಲ್ಲಿ ಈ ವರೆಗೆ ಸಿಕ್ಕ ಹಣ 1.66 ಕೋಟಿ!

ಬೆಂಗಳೂರು, ಮಾರ್ಚ್ 28: ಇಂದು ರಾಜ್ಯದಾದ್ಯಂತ ನಡೆದಿರುವ ಐಟಿ ದಾಳಿಯಲ್ಲಿ ಈವರೆಗೆ 1.66 ಕೋಟಿ ರೂಪಾಯಿ ಹಣವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಐಟಿ ಅಧಿಕಾರಿಗಳು ಸುದ್ದಿ ಮಾಧ್ಯಮಗಳೊಂದಿಗೆ ಈ ವಿಷಯ ಹಂಚಿಕೊಂಡಿದ್ದು, 24 ಸ್ಥಳಗಳಲ್ಲಿ ದಾಳಿ ಮಾಡಲಾಗಿದ್ದು, 13 ಕಾಂಟ್ರಾಕ್ಟರ್‌ಗಳು, 4 ಎಂಜಿನಿಯರ್‌ ಅವರುಗಳ ತನಿಖೆ ಮಾಡಲಾಗಿದೆ ಎಂದು ಹೇಳಲಾಗಿದೆ.

ಬೆಳಿಗ್ಗೆಯಿಂದ ಇಲ್ಲಿಯವರೆಗೆ ಮಾಡಿದ ತನಿಖೆಯಲ್ಲಿ ಈವರೆಗೆ 1.66 ಕೋಟಿ ನಗದು ವಶಪಡಿಸಿಕೊಳ್ಳಲಾಗಿದೆ, ತನಿಖೆ ಇನ್ನೂ ಪ್ರಗತಿಯಲ್ಲಿದೆ ಎಂದು ಐಟಿ ಅಧಿಕಾರಿಗಳು ಹೇಳಿದ್ದಾರೆ.

IT department seized Rs 1.66 crore cash in Karnataka raids

ಸಚಿವ ಪುಟ್ಟರಾಜು ಸೇರಿದಂತೆ ಇನ್ನೂ ಹಲವು ಪ್ರಮುಖ ಜೆಡಿಎಸ್-ಕಾಂಗ್ರೆಸ್ ಮುಖಂಡರು, ಶಾಸಕ-ಸಚಿವರ ಆಪ್ತರ ಮೇಲೆ ಐಟಿ ದಾಳಿ ನಡೆದಿದೆ. ಕನಕಪುರ ತಾಲ್ಲೂಕು ಕಚೇರಿಗೆ ಹೋಗಿ ಡಿ.ಕೆ.ಸುರೇಶ್, ಡಿ.ಕೆ.ಶಿವಕುಮಾರ್ ಅವರ ಆಸ್ತಿಗಳ ಕುರಿತು ಸಹ ತನಿಖೆ ನಡೆಸಲಾಗಿದೆ.

ಇಂದು ನಡೆದಿರುವ ಐಟಿ ದಾಳಿಯು ಜೆಡಿಎಸ್-ಕಾಂಗ್ರೆಸ್ ಮುಖಂಡರನ್ನು ಕೆರಳಿಸಿದ್ದು, ಕುಮಾರಸ್ವಾಮಿ, ಸಿದ್ದರಾಮಯ್ಯ, ಪರಮೇಶ್ವರ್, ದಿನೇಶ್ ಗುಂಡೂರಾವ್, ಡಿ.ಕೆ.ಶಿವಕುಮಾರ್ ಅವರುಗಳು ಇಂದು ಭಾರಿ ಪ್ರತಿಭಟನೆಯನ್ನು ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+