ʼಪ್ರಧಾನಿ ನರೇಂದ್ರ ಮೋದಿ ತ್ರಿವಿಕ್ರಮ ಸಾಧನೆಗೈಯುವುದು ಖಚಿತʼ
ಬೆಂಗಳೂರು, ಜೂನ್ 02: ದೇಶಾದ್ಯಂತ 2024 ರ ಲೋಕಸಭಾ ಚುನಾವಣೆ ಏಳು ಹಂತದಲ್ಲಿ ನಡೆಯಲಿದೆ ನಡೆದಿದ್ದು, ಲೋಕಸಭೆಯ ಸುದೀರ್ಘ ಮತದಾನದ ಪ್ರಕ್ರಿಯೆ ಜೂನ್ 01 ರಂದು ಮುಕ್ತಾಯಗೊಂಡಿದೆ. ಮತದಾನ ಮುಗಿಯುತ್ತಿದ್ದಂತೆಯೇ ಚುನಾವಣೋತ್ತರ ಸಮೀಕ್ಷೆ ಹೊರಬೀದಿದ್ದು, ಪ್ರಧಾನಿ ನರೇಂದ್ರ ಮೋದಿಯೇ ಮತ್ತೊಮ್ಮೆ ಜಯಗಳಿಸಲಿದ್ದಾರೆ ಎಂದು ಸಮೀಕ್ಷೆ ಹೇಳಿದೆ.
ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಟ್ವೀಟ್ ಮಾಡಿದ್ದು, ಮತಗಟ್ಟೆ ಸಮೀಕ್ಷೆ ನಡೆಸಿದ ಎಲ್ಲಾ ಏಜೆನ್ಸಿಗಳಲ್ಲೂ ಪ್ರಧಾನಿ ನರೇಂದ್ರ ಮೋದಿ ಅವರು ತ್ರಿವಿಕ್ರಮ ಸಾಧನೆಗೈಯುವುದು ಖಾತ್ರಿಯಾಗಿದೆ, ಎನ್.ಡಿ.ಎ ಮೈತ್ರಿಕೂಟ ಹ್ಯಾಟ್ರಿಕ್ ಗೆಲುವಿನೊಂದಿಗೆ ಮತ್ತೊಮ್ಮೆ ಮೋದಿ ಜೀ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತ ಎನ್ನುವ ಸಮೀಕ್ಷಾ ವರದಿ ಬಹಿರಂಗವಾಗಿರುವುದು ಭಾರತವನ್ನು ಗೆಲ್ಲಿಸುವ ಸಂಕಲ್ಪ ತೊಟ್ಟಿದ್ದ ಮತದಾರ ಬಂಧುಗಳ ರಾಷ್ಟ್ರ ವಿಜಯವನ್ನು ಸಂಕೇತಿಸಿದೆ.

ಕರ್ನಾಟಕದಲ್ಲಿ ಕೆಲವು ರಾಜಕೀಯ ಪಂಡಿತರ ಲೆಕ್ಕಾಚಾರಗಳೆಲ್ಲಾ ತಲೆಕೆಳಗಾಗುವಂತೆ ಸಮೀಕ್ಷಾ ವರದಿಗಳು ನಮ್ಮ ನಿರೀಕ್ಷಿತ ಫಲಿತಾಂಶದ ಸೂಚನೆ ಪ್ರಕಟಿಸಿದ್ದು, ಕರ್ನಾಟಕ ರಾಜ್ಯದ ಜನತೆ ಮೋದಿ ಜೀ ಅವರನ್ನು ಬೆಂಬಲಿಸುವ ನಿಟ್ಟಿನಲ್ಲಿ ಸದಾ ಮುಂದೆ ಎನ್ನುವ ವರದಿ ಬಿಜೆಪಿ ಕಾರ್ಯಕರ್ತರ ಪರಿಶ್ರಮದ ಹೋರಾಟಕ್ಕೆ ಸಾರ್ಥಕ ಭಾವ ಮೂಡಿಸಿದೆ.
ಮತಗಟ್ಟೆ ಸಮೀಕ್ಷೆ ನಡೆಸಿದ ಎಲ್ಲಾ ಏಜೆನ್ಸಿಗಳಲ್ಲೂ ಪ್ರಧಾನಿ ಶ್ರೀ @narendramodi ಜೀ ಅವರು ತ್ರಿವಿಕ್ರಮ ಸಾಧನೆಗೈಯುವುದು ಖಾತ್ರಿಯಾಗಿದೆ, ಎನ್.ಡಿ.ಎ ಮೈತ್ರಿಕೂಟ ಹ್ಯಾಟ್ರಿಕ್ ಗೆಲುವಿನೊಂದಿಗೆ ಮತ್ತೊಮ್ಮೆ ಮೋದಿ ಜೀ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತ ಎನ್ನುವ ಸಮೀಕ್ಷಾ ವರದಿ ಬಹಿರಂಗವಾಗಿರುವುದು ಭಾರತವನ್ನು ಗೆಲ್ಲಿಸುವ ಸಂಕಲ್ಪ… pic.twitter.com/qGuggt7QmY
— Vijayendra Yediyurappa (Modi Ka Parivar) (@BYVijayendra) June 1, 2024
ಮತ ಬ್ಯಾಂಕ್ ಆಧಾರಿತ ಯೋಜನೆಗಳಿಗೆ ಮತದಾರ ಬಂಧುಗಳು ಕವಡೆ ಕಾಸಿನ ಕಿಮ್ಮತ್ತು ನೀಡಿಲ್ಲ ಎನ್ನುವುದೂ ಸ್ಪಷ್ಟವಾಗಿದೆ. ಸಮಗ್ರ ಭಾರತದ ಸುರಕ್ಷತೆ ಹಾಗೂ ಅಭಿವೃದ್ಧಿಯ ವಿಷಯದಲ್ಲಿ ಕರ್ನಾಟಕದ ಮತದಾರರು ರಾಜಿಯಾಗುವ ಪ್ರಶ್ನೆಯೇ ಇಲ್ಲ ಎನ್ನುವುದನ್ನು ಈ ಎಕ್ಸಿಟ್ ಪೋಲ್ ವರದಿ ಸಾಕ್ಷೀಕರಿಸಿದೆ.
ಜೂನ್ 4 ರ ಫಲಿತಾಂಶ ಎಲ್ಲ ಸಮೀಕ್ಷೆಗಳನ್ನೂ ಮೀರಿ ಎನ್.ಡಿ.ಎ ಮೈತ್ರಿಕೂಟಕ್ಕೆ ನಮ್ಮ ಸಂಕಲ್ಪದ ಗೆಲುವನ್ನು ತಂದುಕೊಡುತ್ತದೆ ಎಂಬ ಆತ್ಮವಿಶ್ವಾಸ ನಮ್ಮದಾಗಿದೆ. ಈ ನಮ್ಮ ಆತ್ಮವಿಶ್ವಾಸಕ್ಕೆ ಕಾರಣರಾದ ಕರ್ನಾಟಕದ ಸಹೃದಯ ಮತದಾರ ಬಂಧುಗಳಿಗೆ ಹೃದಯತುಂಬಿ ಅಭಿನಂದಿಸುವೆ ಎಂದು ವಿಜಯೇಂದ್ರ ಹೇಳಿದ್ದಾರೆ.












Click it and Unblock the Notifications