ರಾಜ್ಯೋತ್ಸವದಂದು ಕನ್ನಡ ಬಾವುಟ ಹಾರಿಸೋದು ಕಡ್ಡಾಯ! ನಿಯಮ ತಪ್ಪಿದ್ರೆ ಏನಾಗುತ್ತೆ..?

ಕನ್ನಡಿಗರ ಹಬ್ಬ ರಾಜ್ಯೋತ್ಸವಕ್ಕೆ ಇನ್ನೇನು ಕ್ಷಣಗಣನೆ ಶುರುವಾಗಿದೆ. ಪ್ರತಿ ನವೆಂಬರ್‌ ಒಂದರಂದು ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸುವ ಜೊತೆಗೆ ತಿಂಗಳಿಡೀ ಹಬ್ಬದ ರೀತಿಯಲ್ಲೇ ಸಂಭ್ರಮಿಸಲಾಗುತ್ತದೆ. ಈ ಬಾರಿ ರಾಜ್ಯ ಸರ್ಕಾರವು ಕನ್ನಡ ರಾಜ್ಯೋತ್ಸವಕ್ಕೆ ಹೊಸ ನಿಯಮವನ್ನು ಕಡ್ಡಾಯಗೊಳಿಸಿ ಅರ್ಥಪೂರ್ಣ ಆಚರಣೆಗೆ ಕರೆ ಕೊಟ್ಟಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌, ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ಇನ್ನಷ್ಟು ವಿಶೇಷವಾಗಿ ಆಚರಿಸೋಣ. ಈ ನಿಟ್ಟಿನಲ್ಲಿ ಖಾಸಗಿ ಸಂಸ್ಥೆಗಳು, ಐಟಿ ಬಿಟಿ ಕಂಪನಿಗಳು, ಕಾರ್ಖಾನೆಗಳು, ಖಾಸಗಿ ಉದ್ಯಮಗಳು ಕನ್ನಡ ಧ್ವಜವನ್ನು ಹಾರಿಸಬೇಕು ಎಂದು ಹೇಳಿದ್ದಾರೆ.

It Is Mandatory For All Organizations To Fly Kannada Flag On Kannada Rajyotsava

ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ಎಲ್ಲೆಡೆಯೂ ಆಚರಿಸಬೇಕು ಎಂಬ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಖಡಕ್‌ ಸೂಚನೆ ಈ ಹಿಂದೆಯೇ ನೀಡಿದೆ. ಹಾಗಾಗಿ ನವೆಂಬರ್‌ 1ರಂದು ಎಲ್ಲ ಶಾಲಾ, ಕಾಲೇಜುಗಳು, ಕಾರ್ಖಾನೆಗಳು ಮತ್ತು ಐಟಿಬಿಟಿ ಕಂಪನಿಗಳಲ್ಲಿ ಕನ್ನಡ ಬಾವುಟವನ್ನು ಕಡ್ಡಾಯವಾಗಿ ಹಾರಿಸಲೇಬೇಕು ಎಂದು ಡಿ.ಕೆ.ಶಿವಕುಮಾರ್‌ ಕರೆ ನೀಡಿದ್ದಾರೆ.

ನವೆಂಬರ್ 1 ಎಂದರೆ ನಮ್ಮ ಕರ್ನಾಟಕಕ್ಕೆ ಬಹಳ ಹೆಮ್ಮೆಯ ದಿನ. ಅಂದು ನಮ್ಮ ನೆಲದಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸುವ ದಿನ. ಹಾಗಾಗಿ ಎಲ್ಲ ಕಂಪನಿಗಳು ಹಾಗೂ ಶಿಕ್ಷಣ ಸಂಸ್ಥೆಗಳು ಕನ್ನಡದ ಧ್ವಜಾರೋಹಣ ಮಾಡಬೇಕು. ಹೀಗಾಗಿ ಈಗಾಗಲೇ ಈ ಬಗ್ಗೆ ಆದೇಶ ಕೂಡ ಹೊರಡಿಸಲಾಗಿದೆ ಎಂದು ಹೇಳಿದ್ದಾರೆ.

ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಅರ್ಧಕ್ಕಿಂತ ಹೆಚ್ಚು ಮಂದಿ ಹೊರಗಿನವರೇ ಇದ್ದಾರೆ. ಅವರೂ ನಮ್ಮ ಕನ್ನಡವನ್ನು ಕಲಿತುಕೊಳ್ಳಬೇಕು. ರಾಜ್ಯೋತ್ಸವದಂದು ಕನ್ನಡಕ್ಕೆ ಸಂಬಂಧಿಸಿದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕಡ್ಡಾಯವಾಗಿ ಆಯೋಜಿಸಬೇಕು. ನಮ್ಮ ರಾಷ್ಟ್ರಧ್ವಜದ ರೀತಿಯಲ್ಲೇ ಕನ್ನಡದ ಬಾವುಟವನ್ನು ಗೌರವಿಸಬೇಕು. ಈ ಮೂಲಕ ಕನ್ನಡಕ್ಕೆ ಶ್ರದ್ಧೆ ಹಾಗೂ ಗೌರವವನ್ನು ತೋರಬೇಕು ಎಂದು ಹೇಳಿದ್ದಾರೆ.

It Is Mandatory For All Organizations To Fly Kannada Flag On Kannada Rajyotsava

ಈ ಹಿಂದೆಯು ಇದರ ಬಗ್ಗೆ ಮಾಹಿತಿ ನೀಡಿದ್ದ ಡಿಕೆಶಿ, ರಾಜ್ಯಕ್ಕೆ ಜನ ಎಲ್ಲಿಂದಾದರೂ ಬಂದಿರಲಿ, ಈ ನವೆಂಬರ್ 1ರಂದು ಕರ್ನಾಟಕದ ಹೆಮ್ಮೆಯ ಧ್ವಜವನ್ನು ಕಡ್ಡಾಯವಾಗಿ ಹಾರಿಸಲೇಬೇಕು. ನಮಗೆ ಕನ್ನಡ ದಿನಾಚರಣೆ ಮುಖ್ಯ. ಆ ದಿನ ಎಲ್ಲ ಸಂಸ್ಥೆಗಳಲ್ಲಿ, ಖಾಸಗಿ ಕಂಪನಿಗಳು ಈ ನೆಲದ ಕನ್ನಡ ಧ್ವಜವನ್ನು ಹಾರಿಸುವುದು ಕಡ್ಡಾಯ ಎಂದಿದ್ದರು.

ಅಲ್ಲದೆ, ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಕನ್ನಡ ರಾಜ್ಯೋತ್ಸವವನ್ನು ಬಹಳ ಅದ್ಧೂರಿಯಾಗಿ ಆಚರಿಸುತ್ತಾರೆ. ಇದರ ನಡುವೆ ಕನ್ನಡ ರಾಜ್ಯೋತ್ಸವದ ಹೆಸರಿನಲ್ಲಿ ಯಾವ ಸಂಘಟನೆಗಳೂ ಯಾರ ಮೇಲೂ ಒತ್ತಡ ತರಬಾರದು. ರಾಜ್ಯೋತ್ಸವ ಆಚರಣೆ ಬಗ್ಗೆ ರಾಜ್ಯ ಸರ್ಕಾರವೇ ಆದೇಶ ನೀಡುತ್ತಿದೆ. ಅದರ ಅನ್ವಯವೇ ರಾಜ್ಯೋತ್ಸವ ಆಚರಣೆ ನಡೆಯಲಿದೆ ಎಂದು ಕಿವಿಮಾತು ಹೇಳಿದ್ದರು.

ಒಂದು ವೇಳೆ ಸಂಸ್ಥೆಗಳು ಕನ್ನಡ ಬಾವುಟ ಹಾರಿಸದಿದ್ದರೆ, ಅಂತಹ ವ್ಯಕ್ತಿಗಳು ಹಾಗೂ ಸಂಸ್ಥೆಗಳ ವಿರುದ್ಧ ಏನು ಕ್ರಮ ತೆಗೆದುಕೊಳ್ಳಬೇಕು ಎಂಬುದನ್ನು ಸರ್ಕಾರವೇ ನಿರ್ಧರಿಸಲಿದೆ. ಈ ವಿಚಾರವಾಗಿ ಕನ್ನಡ ಸಂಘಟನೆಗಳು ಖಾಸಗಿ ಸಂಸ್ಥೆಗಳಿಗೆ ಧಮ್ಕಿ ಹಾಕುವುದು, ಗಲಾಟೆ ಮಾಡಿ ಹೆದರಿಸುವ ಕೆಲಸಗಳನ್ನು ಮಾಡಬಾರದು ಎಂದು ಡಿ.ಕೆ.ಶಿವಕುಮಾರ್‌ ಮನವಿ ಮಾಡಿದ್ದರು. ಈ ನಿಯಮ ಎಷ್ಟರಮಟ್ಟಿಗೆ ಪಾಲನೆಯಾಗುತ್ತೆ ಎನ್ನುವುದು ರಾಜ್ಯೋತ್ಸವದಂದು ಗೊತ್ತಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+