ಕನ್ನಡ ಹೋರಾಟಗಾರರ ಬಂಧನ: ಮಾಜಿ ಸಿಎಂ ಹೇಳಿದ್ದೇನು?
ಬೆಂಗಳೂರು,ಡಿಸೆಂಬರ್29: ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಸೇರಿದಂತೆ ಕನ್ನಡ ಹೋರಾಟಗಾರರನ್ನು ಜೈಲಿಗೆ ಹಾಕಿರುವುದು ದುಃಖವಾಗಿದ್ದು. ಕನ್ನಡ ಹೋರಾಟಗಾರರಿಗೆ ನಾವು ಬೆಂಬಲಿಸಬೇಕು. ಸರ್ಕಾರ ಸರಿಯಾಗಿ ಕಾನೂನು ಅನುಷ್ಠಾನ ಮಾಡದಿರುವುದಕ್ಕೆ ಕನ್ನಡಪರ ಸಂಘಟನೆಗಳು ಹೋರಾಟದ ಹಾದಿ ಹಿಡಿಯಬೇಕಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನಾನು ಸಿಎಂ ಆಗಿದ್ದಾಗ ಸುಮಾರು ಎರಡು ಸಾವಿರ ಕನ್ನಡ ಹೋರಾಟಗಾರರ ಪ್ರಕರಣಗಳನ್ನು ವಾಪಸ್ ಪಡೆದಿದ್ದೇವು. ನಾಮಪಲಕಗಳಲ್ಲಿ ಕಡ್ಡಾಯ ಕನ್ನಡ ಅನುಷ್ಠಾನ ಮಾಡದಿರುವುದರಿಂದ ಈ ಪರಿಸ್ಥಿತಿ ಬಂದಿದೆ. ಆಡಳಿತಗಾರರಿಗೆ ಸೂಕ್ಷ್ಮತೆ ಇರಬೇಕು ಎಂದು ಹೇಳಿದರು.

ನಾವು ಕನ್ನಡದ ಅನುಷ್ಠಾನಕ್ಕಾಗಿ ವಿಧೇಯಕ ಜಾರಿಗೊಳಿಸಿದ್ದೇವು. ಸ್ವಾತಂತ್ರ್ಯ ಬಂದು ಎಪ್ಪತೈದು ವರ್ಷಗಳಾಗಿವೆ. ಕನ್ನಡ ನಾಡಿನಲ್ಲಿ ಕನ್ನಡದ ಅನುಷ್ಟಾನಕ್ಕಾಗಿ ಕಾನೂನು ಮಾಡುವ ಅನಿವಾರ್ಯತೆ ಬಂದಿರುವುದು ಬೇಸರದ ಸಂಗತಿ. ಆದರೆ, ಈಗ ಕಾನೂನೂ ಮಾಡದಿದ್ದರೆ ನಮ್ಮ ಮಕ್ಕಳಿಗೆ ಕಷ್ಟವಾಗಲಿದೆ. ಕಾನೂನು ಅನುಷ್ಠಾನ ಮಾಡದಿದ್ದರೆ ಅದು ದುರ್ದೈವ.
ಕನ್ನಡ ಅನುಷ್ಠಾನ ಆಗದಿದ್ದರಿಂದ ಕನ್ನಡ ಹೋರಾಟಗಾರರು ಪ್ರತಿಭಟನೆ ಮಾಡುತ್ತಿದ್ದಾರೆ. ಯಾವ ನಾಡಿನಲ್ಲಿ ಕಾನೂನು ಅನುಷ್ಠಾನ ಮಾಡುವ ವ್ಯವಸ್ಥೆ ಇರುತ್ತದೆಯೋ ಅಲ್ಲಿ ಈ ರೀತಿಯ ಪ್ರತಿಭಟನೆಗಳು ನಡೆಯುವುದಿಲ್ಲ. ಯಾವ ನಾಡಿನಲ್ಲಿ ಕಾನೂನು ಅನುಷ್ಠಾನ ಮಾಡುವುದಿಲ್ಲವೋ ಈ ರೀತಿಯ ಘಟನೆಗಳು ನಡೆಯುತ್ತವೆ ಎಂದು ಹೇಳಿದರು.
ಕನ್ನಡದ ಉಳಿವಿಗೆ ಕನ್ನಡ ಸಾಹಿತ್ಯ ಪರಿಷತ್ತು ಸಾಕಷ್ಟು ಶ್ರಮ ಹಾಕಿದೆ. ನಾನು ಮುಖ್ಯಮಂತ್ರಿ ಇದ್ದಾಗ ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ವಿಕೃತಗೊಳಿಸುವ ಪ್ರಯತ್ನ ಮಾಡಿದ್ದರು. ಆದರೆ, ನಾನು ಸುವರ್ಣ ಸೌಧದ ಮುಂದೆ ಸಂಗೊಳ್ಳಿ ರಾಯಣ್ಣ, ಕಿತ್ತೂರು ರಾಣಿ ಚೆನ್ನಮ್ಮ, ಅಂಬೇಡ್ಕರ್ ಹಾಗೂ ಗಾಂಧಿ ಅವರ ಪ್ರತಿಮೆ ನಿಲ್ಲಿಸುವ ಕೆಲಸ ಮಾಡಿದ್ದೇನೆ ಎಂದರು.

ಕನ್ನಡ ನಿತ್ಯ ನಿರಂತರವಾಗಿರಬೇಕೆಂದರೆ ಕನ್ನಡಡಿಗರು ಜಾಗೃತರಾಗಿರಬೇಕು. ಜಗತ್ತು ಬದಲಾಗುತ್ತಿದೆ. ಸವಾಲುಗಳನ್ನ ಎದುರಿಸಲು ನಮ್ಮ ಮಕ್ಕಳನ್ನು ಸಿದ್ದಪಡಿಸಬೇಕಿದೆ. ಇಲ್ಲಿ ಐಟಿ ಬಿಟಿ ಯಾಕೆ ಅಭಿವೃದ್ಧಿಯಾಗಿದೆ ಎಂದರೆ. ಇಲ್ಲಿನ ಮಕ್ಕಳು ಜ್ಞಾನವಂತರಿದ್ದಾರೆ. ಸಾಧನೆ ಮಾಡಿದ್ದಾರೆ. ಅದೇ ಕಾರಣಕ್ಕೆ ಐಟಿ ಬಿಟಿಯವರು ಇಲ್ಲಿಗೆ ಬಂದಿದ್ದಾರೆ ಎಂದರು.
ಕುವೆಂಪು ಅವರು ಅಪರೂಪದ ವ್ಯಕ್ತಿತ್ವ ಒಂದು ರೀತಿಯಲ್ಲಿ ಅವರು ಯುಗಪುರುಷರು ಅಂತ ಹೇಳಲು ಬಯಸುತ್ತೇನೆ. ಅವರನ್ನು ಆಳವಾಗಿ ನೋಡಿದಾಗ ಅತ್ಯಂತ ಮಾನವೀಯ ಗುಣಗಳಿರುವ ವ್ಯಕ್ತಿ. ವಿಸ್ತಾರವಾಗಿ ನೋಡಿದಾಗ ವಿಶ್ವ ಮಾನವರಾಗಿ ಕಾಣುತ್ತಾರೆ. ತಮ್ಮ ವಿಚಾರಧಾರೆಗಾಗಿ ಜಗತ್ತನ್ನು ಎದುರು ಹಾಕಿಕೊಳ್ಳುವ ಸ್ವಭಾವ ಅವರದಿತ್ತು. ಅವರು ಯಾವತ್ತೂ ಮುಲಾಜಿಗೆ ಬಿದ್ದು ಸಾಹಿತ್ಯ ರಚನೆ ಮಾಡಿಲ್ಲ.
ಕರ್ನಾಟಕದ ಏಕೀಕರಣ ಆಗಬೇಕು ಎಂದು ಉತ್ತರ ಕರ್ನಾಟಕ ಭಾಗದಲ್ಲಿ ಹೋರಾಟ ನಡೆಯುತ್ತಿದ್ದಾಗ. ದಕ್ಷಿಣ ಭಾಗದಲ್ಲಿ ಆಕ್ಷೇಪ ವ್ಯಕ್ತವಾದಾಗ ಕನ್ನಡದ ಮನಸುಗಳು ಒಂದಾಗಬೇಕು ಎಂದು ಮೊದಲು ನಿಲುವು ತೆಗೆದುಕೊಂಡವರು ಕುವೆಂಪು ಅವರು, ಆ ಕಾಲದಲ್ಲಿ ಏಕೀಕರಣಕ್ಕೆ ಒತ್ತು ಕೊಟ್ಟವರು ಕುವೆಂಪು ಅವರು. ಕುವೆಂಪು ಅವರ ನಿಲುವನ್ನು ಎಲ್ಲರೂ ಒಪ್ಪಿಕೊಂಡರು. ಈಗ ಕನ್ನಡದ ಮನಸುಗಳು ಒಂದಾಗಿವೆ. ಒಂದಾಗುವ ಸಾಹಿತ್ಯವನ್ನೂ ರಚಿಸಿದ್ದಾರೆ. ಅದಕ್ಕಾಗಿ ಕುವೆಂಪು ಬಹಳ ಶ್ರೇಷ್ಟ. ವೈಚಾರಿಕತೆಯನ್ನು ಬಹಳ ಸರಳವಾಗಿ ಯೋಚಿಸುವ ಗುಣ ಕುವೆಂಪು ಅವರಿಗೆ ಇತ್ತು. ಎಲ್ಲವನ್ನೂ ಸ್ವೀಕರಿಸುವ ಗುಣ ಅವರಿಗೆ ಇದ್ದಿದ್ದರಿಂದ ಕುವೆಂಪು ವಿಶ್ವ ಮಾನವರಾಗಲು ಕಾರಣವಾಯಿತು ಎಂದು ಹೇಳಿದರು.
-
ಮಾರ್ಚ್ 20ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಬೆಂಗಳೂರಲ್ಲಿ 'ಹೊಸ ಪಾದಚಾರಿ ನೀತಿ': ನೋಂದಣಿ ಆಗದವರ ವ್ಯಾಪಾರಕ್ಕಿಲ್ಲ ಅವಕಾಶ: ಡಿಕೆ ಶಿವಕುಮಾರ್ -
ಬೆಂಗಳೂರಿಗರಿಗೆ ಬಂಪರ್ ಗಿಫ್ಟ್: ನೀರಿನ ಬಿಲ್ ಮೇಲಿನ ಬಡ್ಡಿ ಶೇ.100ರಷ್ಟು ಮನ್ನಾ; ಡಿಕೆಶಿ ಮಹತ್ವದ ಘೋಷಣೆ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ












Click it and Unblock the Notifications