ಆಪರೇಷನ್‌ ಹಸ್ತ ಕುರಿತು ರಾಜ್ಯ ರಾಜಕಾರಣದಲ್ಲಿ ಗುಸು ಗುಸು ಚರ್ಚೆ: ಡಿ ಕೆ ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು, ಆಗಸ್ಟ್‌ 16: 2024 ಲೋಕಸಭಾ ಚುನಾವಣೆಗೆ ರಾಜ್ಯ ಕಾಂಗ್ರೆಸ್‌ ಭರ್ಜರಿ ತಯಾರಿ ನಡೆಸುತ್ತಿದ್ದು, ಕನಿಷ್ಠ 20 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಗುರಿ ಹೊಂದಿದ್ದು, ರಾಜ್ಯ ರಾಜಕಾರಣದಲ್ಲಿ ಆಪರೇಷನ್ ಹಸ್ತದ ಸುದ್ದಿ ಜೋರಾಗಿದೆ. ಈ ಕುರಿತು ಗೃಹ ಸಚಿವ ಡಾ ಜಿ ಪರಮೇಶ್ವರ್‌ ಬಹಿರಂಗ ಹೇಳಿಕೆ ನೀಡಿದ್ದು, ಈ ಬಗ್ಗೆ ಡಿ ಕೆ ಶಿವಕುಮಾರ್‌ ಮಾತನಾಡಿದ್ದಾರೆ.

ಈ ಕುರಿತು ಸದಾಶಿವನಗರದಲ್ಲಿ ಮಾಧ್ಯಮಗಳ ಜೊತೆಗೆ ಡಿ ಕೆ ಶಿವಕುಮಾರ್‌ ಮಾತನಾಡಿ, ನಮ್ಮ ಮುಂದಿನ ಗುರಿ ಲೋಕಸಭಾ ಚುನಾವಣೆ. ಯಾವುದೇ ಕಾರಣಕ್ಕೂ ದ್ವೇಷ ಸಾಧಿಸಬೇಡಿ, ಪಕ್ಷದ ಮತಗಳಿಕೆ ಪ್ರಮಾಣ ಹೆಚ್ಚು ಮಾಡಿ ಎಂದು ನಮ್ಮ ಪಕ್ಷದ ಕಾರ್ಯಕರ್ತರಿಗೆ ಸೂಚನೆ ನೀಡಿದ್ದೇವೆ ಎಂದು ಹೇಳಿದ್ದಾರೆ.

it-is-up-to-the-local-leaders

ಸ್ಥಳೀಯವಾಗಿ ಒಮ್ಮೊಮ್ಮೆ ಅನುಕೂಲಸಿಂಧು ರಾಜಕಾರಣ ಮಾಡಿಕೊಳ್ಳಬೇಕಾಗುತ್ತದೆ. ಯಾರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕು ಎನ್ನುವುದು ಸ್ಥಳೀಯ ನಾಯಕರಿಗೆ ಬಿಟ್ಟ ವಿಚಾರ. ದೊಡ್ಡ, ದೊಡ್ಡ ನಾಯಕರನ್ನು ಸೇರಿಸಿಕೊಳ್ಳುತ್ತಿಲ್ಲ, ಅನ್ಯಪಕ್ಷಗಳ ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿ ಕಾಂಗ್ರೆಸ್ ಸೇರ್ಪಡೆಗೆ ಒಲವು ತೋರಿದ್ದಾರೆ ಎಂದು ತಿಳಿಸಿದರು.

ಯಾರ್ಯಾರು ಏನೆಲ್ಲಾ ಹೇಳಬೇಕೋ ಹೇಳಲಿ. ಅವರದ್ದು ಏನಿದೆಯೋ ಅದೆಲ್ಲವೂ ಮೊದಲು ಹೊರಗಡೆ ಬರಲಿ. ಅವರ ಮಾತುಗಳೆಲ್ಲ ಮುಗಿಯಲಿ. ಆನಂತರ ನಮ್ಮ ಬಳಿ ಇರುವುದನ್ನು ಬಯಲು ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ನಮ್ಮ ಬಳಿ ಇರುವ ಮಾಹಿತಿ ಬಹಿರಂಗ ಪಡಿಸಲು ಸಾಕಷ್ಟು ಸಮಯವಿದೆ. ನಮ್ಮ ಬಗ್ಗೆ ತುಂಬಾ ಚರ್ಚೆ ನಡೆಸುತ್ತಿರುವವರಿಗೆ ಉತ್ತರ ನೀಡುವ ಕಾಲ ಸಮೀಪಿಸಿದೆ, ಉತ್ತರ ನೀಡೋಣ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+