ಐಟಿ ದಾಳಿ : ಡಿ.ಕೆ.ಶಿವಕುಮಾರ್‌ಗೆ ಹೈಕೋರ್ಟ್ ನೋಟಿಸ್
ಬೆಂಗಳೂರು, ಜೂನ್ 28 : ಆದಾಯ ತೆರಿಗೆ ಇಲಾಖೆ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಡಿ.ಕೆ.ಶಿವಕುಮಾರ್‌ಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಪ್ರಕರಣದ ವಿಚಾರಣೆಯನ್ನು ಮುಂದೂಡಲಾಗಿದೆ.
ಶುಕ್ರವಾರ ಕರ್ನಾಟಕ ಹೈಕೋರ್ಟ್ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ನೋಟಿಸ್ ಜಾರಿಗೊಳಿಸಿದೆ. ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಐಟಿ ಇಲಾಖೆ ಹೈಕೋರ್ಟ್‌ಗೆ ಅರ್ಜಿಯನ್ನು ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ಇಂದು ನಡೆಯಿತು.
ಬೆಂಗಳೂರು ಹೊರವಲಯದ ಈಗಲ್ಟನ್ ರೆಸಾರ್ಟ್ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ಆಗ ಡಿ.ಕೆ.ಶಿವಕುಮಾರ್ ಅವರು ಡೈರಿಯ ಚೀಟಿಗಳನ್ನು ಹರಿದು ಹಾಕಿದ್ದಾರೆ ಎಂಬದು ಆರೋಪವಾಗಿದೆ.

ಡಿ.ಕೆ.ಶಿವಕುಮಾರ್ ವಿರುದ್ಧ ಆದಾಯ ತೆರಿಗೆ ಇಲಾಖೆ 3 ಪ್ರತ್ಯೇಕ ಪ್ರಕರಣ ದಾಖಲು ಮಾಡಿಕೊಂಡಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ಡಿ.ಕೆ.ಶಿವಕುಮಾರ್ ಇದನ್ನು ಪ್ರಶ್ನಿಸಿದ್ದರು. ಸಚಿವರನ್ನು ಆರೋಪ ಮುಕ್ತಗೊಳಿಸಿ ನ್ಯಾಯಾಲಯ ಆದೇಶ ನೀಡಿತ್ತು.
ನ್ಯಾಯಾಲಯದ ಆದೇಶ ಪ್ರಶ್ನಿಸಿ ಆದಾಯ ತೆರಿಗೆ ಇಲಾಖೆ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿತ್ತು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಡಿ.ಕೆ.ಶಿವಕುಮಾರ್ ಅವರಿಗೆ ನೋಟಿಸ್ ನೀಡಿತ್ತು.
2017ರ ಆಗಸ್ಟ್‌ನಲ್ಲಿ ಈಗಲ್ಟನ್ ರೆಸಾರ್ಟ್ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿಯ ವೇಳೆ ಡಿ.ಕೆ.ಶಿವಕುಮಾರ್ ಮತ್ತು ಡಿ.ಕೆ.ಸುರೇಶ್ ಅವರು ರೆಸಾರ್ಟ್‌ನಲ್ಲಿದ್ದರು. ರೆಸಾರ್ಟ್‌ನಲ್ಲಿ ಗುಜರಾತ್‌ನ 40ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು ಸಹ ಇದ್ದರು.












Click it and Unblock the Notifications