ಎಂಎಲ್‌ಸಿ ರಘು ಆಚಾರ್ ನಿವಾಸದ ಮೇಲೆ ಐಟಿ ದಾಳಿ
ಬೆಂಗಳೂರು, ಮಾರ್ಚ್ 08 : ಕಾಂಗ್ರೆಸ್ ನಾಯಕ, ವಿಧಾನಪರಿಷತ್ ಸದಸ್ಯ ಜಿ.ರಘು ಆಚಾರ್ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ನಿವಾಸ ಮತ್ತು ಕಚೇರಿಯಲ್ಲಿ ದಾಖಲಾತಿಗಳ ಪರಿಶೀಲನೆ ನಡೆಯುತ್ತಿದೆ.
ಬೆಂಗಳೂರಿನ ಎಚ್.ಎಸ್.ಆರ್.ಲೇಔಟ್‌ನಲ್ಲಿರುವ ನಿವಾಸದ ಮೇಲೆ ಗುರುವಾರ ಮಧ್ಯಾಹ್ನ ಐಟಿ ದಾಳಿ ನಡೆಸಲಾಗಿದೆ. 10 ಕ್ಕೂ ಅಧಿಕ ಅಧಿಕಾರಿಗಳು ನಿವಾಸದಲ್ಲಿ ದಾಖಲಾತಿಗಳನ್ನು ಪರಿಶೀಲಿಸುತ್ತಿದ್ದಾರೆ.
ಬೆಳ್ಳಂದೂರಿನ ಸೆಂಟ್ರಲ್ ಮಾಲ್ ಸಮೀಪವಿರುವ ಕಚೇರಿಯ ಮೇಲೆಯೂ ದಾಳಿ ನಡೆಸಲಾಗಿದೆ. ದೆಹಲಿಯಿಂದ ಆಗಮಿಸಿರುವ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ರಘು ಆಚಾರ್ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರ ಆಪ್ತರು. ವಿಧಾನಸಭೆ ಚುನಾವಣೆ ಹತ್ತಿರವಿರುವಾಗ ಐಟಿ ದಾಳಿ ನಡೆದಿದೆ. ಇದರು ರಾಜಕೀಯ ಆರೋಪ ಪ್ರತ್ಯಾರೋಪಗಳಿಗೆ ಕಾರಣವಾಗುವ ಸಾಧ್ಯತೆ ಇದೆ.

ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ ಸದಸ್ಯರ ಆಯ್ಕೆಗೆ ನಡೆಯುವ ಚುನಾವಣೆಯಲ್ಲಿ ರಘು ಆಚಾರ್ ಅವರು ಚಿತ್ರದುರ್ಗ ಕ್ಷೇತ್ರದಿಂದ ಪರಿಷತ್ತಿಗೆ ಆಯ್ಕೆಯಾಗಿದ್ದಾರೆ. 2013ರ ಆಗಸ್ಟ್ 22ರಂದು ನಡೆದಿದ್ದ ಚುನಾವಣೆಯಲ್ಲಿ ರಘು ಆಚಾರ್ ಪಕ್ಷೇತರ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದರು. ಬಳಿಕ ಅವರು ಕಾಂಗ್ರೆಸ್ ಪಕ್ಷ ಸೇರಿದ್ದಾರೆ.












Click it and Unblock the Notifications