ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಂಎಲ್‌ಸಿ ರಘು ಆಚಾರ್ ನಿವಾಸದ ಮೇಲೆ ಐಟಿ ದಾಳಿ

|
Google Oneindia Kannada News

ಬೆಂಗಳೂರು, ಮಾರ್ಚ್ 08 : ಕಾಂಗ್ರೆಸ್ ನಾಯಕ, ವಿಧಾನಪರಿಷತ್ ಸದಸ್ಯ ಜಿ.ರಘು ಆಚಾರ್ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ನಿವಾಸ ಮತ್ತು ಕಚೇರಿಯಲ್ಲಿ ದಾಖಲಾತಿಗಳ ಪರಿಶೀಲನೆ ನಡೆಯುತ್ತಿದೆ.

ಬೆಂಗಳೂರಿನ ಎಚ್‌.ಎಸ್.ಆರ್.ಲೇಔಟ್‌ನಲ್ಲಿರುವ ನಿವಾಸದ ಮೇಲೆ ಗುರುವಾರ ಮಧ್ಯಾಹ್ನ ಐಟಿ ದಾಳಿ ನಡೆಸಲಾಗಿದೆ. 10 ಕ್ಕೂ ಅಧಿಕ ಅಧಿಕಾರಿಗಳು ನಿವಾಸದಲ್ಲಿ ದಾಖಲಾತಿಗಳನ್ನು ಪರಿಶೀಲಿಸುತ್ತಿದ್ದಾರೆ.

ಪರಪ್ಪನ ಅಗ್ರಹಾರಕ್ಕೂ ಕಳುಹಿಸಿ, ಐ ಡೋಂಟ್ ಕೇರ್: ಡಿಕೆಶಿ ಬಹಿರಂಗ ಸವಾಲುಪರಪ್ಪನ ಅಗ್ರಹಾರಕ್ಕೂ ಕಳುಹಿಸಿ, ಐ ಡೋಂಟ್ ಕೇರ್: ಡಿಕೆಶಿ ಬಹಿರಂಗ ಸವಾಲು

ಬೆಳ್ಳಂದೂರಿನ ಸೆಂಟ್ರಲ್ ಮಾಲ್ ಸಮೀಪವಿರುವ ಕಚೇರಿಯ ಮೇಲೆಯೂ ದಾಳಿ ನಡೆಸಲಾಗಿದೆ. ದೆಹಲಿಯಿಂದ ಆಗಮಿಸಿರುವ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಬಿಡದಿಯ ಇನ್ನೋವೇಟಿವ್ ಫಿಲ್ಮ್ ಸಿಟಿ ಮೇಲೆ ಐಟಿ ದಾಳಿಬಿಡದಿಯ ಇನ್ನೋವೇಟಿವ್ ಫಿಲ್ಮ್ ಸಿಟಿ ಮೇಲೆ ಐಟಿ ದಾಳಿ

ರಘು ಆಚಾರ್ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರ ಆಪ್ತರು. ವಿಧಾನಸಭೆ ಚುನಾವಣೆ ಹತ್ತಿರವಿರುವಾಗ ಐಟಿ ದಾಳಿ ನಡೆದಿದೆ. ಇದರು ರಾಜಕೀಯ ಆರೋಪ ಪ್ರತ್ಯಾರೋಪಗಳಿಗೆ ಕಾರಣವಾಗುವ ಸಾಧ್ಯತೆ ಇದೆ.

IT raid on residence & office of Congress MLC Raghu Achar

ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ ಸದಸ್ಯರ ಆಯ್ಕೆಗೆ ನಡೆಯುವ ಚುನಾವಣೆಯಲ್ಲಿ ರಘು ಆಚಾರ್ ಅವರು ಚಿತ್ರದುರ್ಗ ಕ್ಷೇತ್ರದಿಂದ ಪರಿಷತ್ತಿಗೆ ಆಯ್ಕೆಯಾಗಿದ್ದಾರೆ. 2013ರ ಆಗಸ್ಟ್ 22ರಂದು ನಡೆದಿದ್ದ ಚುನಾವಣೆಯಲ್ಲಿ ರಘು ಆಚಾರ್ ಪಕ್ಷೇತರ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದರು. ಬಳಿಕ ಅವರು ಕಾಂಗ್ರೆಸ್ ಪಕ್ಷ ಸೇರಿದ್ದಾರೆ.

English summary
Income Tax Department officials on March 8, 2018 conducted surprise raids on residences and office of Legislative Council member and Congress leader G. Raghu Achar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X