ಗೃಹ ಸಚಿವರ ಸಲಹೆಗಾರರಾಗಿ ಕೆಂಪಯ್ಯ ನೇಮಕ
ಬೆಂಗಳೂರು,ಆ.2: ನಿವೃತ್ತ ಐಪಿಎಸ್ ಅಧಿಕಾರಿ ಕೆಂಪಯ್ಯ ಅವರನ್ನು ಗೃಹ ಸಚಿವ ಕೆ.ಜೆ.ಜಾರ್ಜ್ ಅವರ ಸಲಹೆಗಾರರನ್ನಾಗಿ ಸಿಎಂ ಸಿದ್ದರಾಮಯ್ಯ ನೇಮಕಗೊಳಿಸಿದ್ದಾರೆ.
ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದೆ. ಅವರಿಗೆ ರಾಜ್ಯ ಸಚಿವರಿಗೆ ದೊರೆಯುವ ವೇತನ, ಸಿಬ್ಬಂದಿ ಮತ್ತು ಸೌಲಭ್ಯ ದೊರೆಯಲಿದೆ.
ಕಾಂಗ್ರೆಸ್‌ನಲ್ಲಿ ಅಸಮಾಧಾನ: ಈ ಆದೇಶದ ಪ್ರಕಟಗೊಂಡಲ್ಲೇ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಅಸಮಾಧಾನ ವ್ಯಕ್ತವಾಗಿದೆ. ಇದನ್ನು ವಿರೋಧಿಸಿ ಕೆಲವು ಶಾಸಕರು, ಪಕ್ಷದ ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರಿಗೆ ದೂರು ಸಲ್ಲಿಸಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

ಈ ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆಂತರಿಕ ಭದ್ರತೆ, ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದಂತೆ ಕೆಂಪಯ್ಯ ಅವರನ್ನು ತಮಗೆ ಸಲಹೆಗಾರರನ್ನಾಗಿ ನೇಮಕ ಮಾಡಿಕೊಳ್ಳಲು ಮುಂದಾಗಿದ್ದರು ಹೇಳಲಾಗುತಿತ್ತು. ಆದರೆ ಮಂತ್ರಿಗಳು ಮತ್ತು ಶಾಸಕರ ವಿರೋಧದಿಂದಾಗಿ ಈ ಪ್ರಸ್ತಾವಕ್ಕೆ ತಡೆ ಬಿದ್ದಿತ್ತು.[ಸಿದ್ದರಾಮಯ್ಯ ಸಲಹೆಗಾರರಾಗಿ ಕೆಂಪಯ್ಯ ನೇಮಕ?]
ರಾಜ್ಯದ ಇತಿಹಾಸದಲ್ಲಿ ಇದೇ ಮೊದಲು: ರಾಜ್ಯದ ಇತಿಹಾಸದಲ್ಲಿ ಗೃಹ ಸಚಿವರಿಗೆ ಸಲಹೆಗಾರರೊಬ್ಬರ ನೇಮಕವಾಗಿರುವುದು ಇದೇ ಮೊದಲು. ಈ ಹಿಂದೆ ಡಿಸೋಜಾ ಎಂಬ ನಿವೃತ್ತ ಅಧಿಕಾರಿಯನ್ನು ಬೆಂಗಳೂರಿನ ಭದ್ರತಾ ವ್ಯವಸ್ಥೆ ಕುರಿತು ಸಲಹೆ ನೀಡಲು ಗೃಹ ಸಚಿವ ಕೆ.ಜೆ. ಜಾರ್ಜ್ ನೇಮಿಸಿದ್ದರು. ಡಿಸೋಜಾ ಅವರ ಕಾರ್ಯವ್ಯಾಪ್ತಿ ಬೆಂಗಳೂರಿಗೆ ಮಾತ್ರ ಸಿಮೀತವಾಗಿದ್ದರೆ, ಕೆಂಪಯ್ಯ ಅವರ ಕಾರ್ಯವ್ಯಾಪ್ತಿ ಇಡೀ ರಾಜ್ಯ
ಕೆಂಪಯ್ಯ ಅವರ ಕೆಲಸವೇನು?: ರಾಜ್ಯ ಪೊಲೀಸ್ ವ್ಯವಸ್ಥೆ ಸುಧಾರಣೆ, ವರ್ಗಾವಣೆ, ಆಡಳಿತಾತ್ಮಕ, ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಮಹತ್ವದ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಗೃಹ ಸಚಿವರಿಗೆ ಸಲಹೆ ನೀಡುವುದು.[ಸಿಎಂ ಸಿದ್ದು ಆಪ್ತರಾಗಿರುವ ಕೆಂಪಯ್ಯ]
ಪೊಲೀಸ್ ಅಧಿಕಾರಿಗಳ ವರ್ಗಾವಣೆ ರದ್ದು: ಕೆಂಪಯ್ಯ ಅವರನ್ನು ಗೃಹ ಸಚಿವರಿಗೆ ಸಲಹೆಗಾರರನ್ನಾಗಿ ನೇಮಕ ಮಾಡಿದ ಬೆನ್ನಲ್ಲೇ ಏಳು ಜನ ಪೊಲೀಸ್ ಅಧಿಕಾರಿಗಳ ವರ್ಗ ರದ್ದಾಗಿದೆ.[ಕರ್ನಾಟಕ: ಐಪಿಎಸ್ ಅಧಿಕಾರಿಗಳ ವರ್ಗಾವರ್ಗಿ]
ಸೋನಿಯಾ ನಾರಂಗ್ ಅವರು ರಾಜ್ಯ ಮೀಸಲು ಪೊಲೀಸ್ ಪಡೆಯ 1ನೇ ಬೆಟಾಲಿಯನ್‌ನ ಕಮಾಂಡೆಂಟ್ ಆಗಿ ಹುದ್ದೆಯಲ್ಲೇ ಮುಂದುವರಿಯಲಿದ್ದಾರೆ.
ಗುಲ್ಬರ್ಗ ಪೊಲೀಸ್ ತರಬೇತಿ ಶಾಲೆಯ ಪ್ರಾಂಶುಪಾಲರ ಹುದ್ದೆಗೆ ವರ್ಗವಾಗಿದ್ದ ಬಿ.ಶಿವಕುಮಾರ್ ಅವರನ್ನು ಈ ಹಿಂದೆ ಇದ್ದ ತರಬೇತಿ ವಿಭಾಗದ ಡಿಐಜಿ ಹುದ್ದೆಯಲ್ಲೇ ಮುಂದುವರಿಸಲಾಗಿದೆ.
ಶರತ್‌ಚಂದ್ರ ಅವರು ಪೂರ್ವ ವಲಯದ (ಕಾನೂನು, ಸುವ್ಯವಸ್ಥೆ) ಜಂಟಿ ಪೊಲೀಸ್ ಕಮಿಷನರ್ ಆಗಿ ಮುಂದುವರಿಯಲಿದ್ದಾರೆ. ರವಿಕಾಂತೇಗೌಡ ಅವರನ್ನು ವಿಜಾಪುರ ಎಸ್ಪಿಯಾಗಿ ವರ್ಗಾವಣೆ ಮಾಡಿದ್ದನ್ನು ರದ್ದು ಮಾಡಿದ್ದು, ಅವರಿಗೆ ಯಾವುದೇ ಹುದ್ದೆ ತೋರಿಸಿಲ್ಲ.
ಅಪರಾಧ, ತಾಂತ್ರಿಕ ಸೇವೆ ವಿಭಾಗದ ಎಡಿಜಿಪಿ ಎನ್.ಎಸ್ ಮೇಘರಿಕ್ ಅವರಿಗೆ ಪೊಲೀಸ್ ಆಧುನೀಕರಣ, ಸಂವಹನ, ಸಾಗಣೆ ವಿಭಾಗದ ಹೆಚ್ಚುವರಿ ಹೊಣೆ ವಹಿಸಲಾಗಿದೆ. ಆಂತರಿಕ ಭದ್ರತೆ ವಿಭಾಗದ ಐಜಿಪಿ ಸಿ.ಎಚ್. ಪ್ರತಾಪ್ ರೆಡ್ಡಿ ಅವರಿಗೆ ಅರಣ್ಯ ಘಟಕದ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ.
-
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
ಮಂಗಳೂರಿಗೆ ಬರಲಿದೆ 26,000 ಟನ್ LPG ತೈಲ ಹೊತ್ತ 'ಶಿವಾಲಿಕ್' ಹಡಗು -
ನೈರುತ್ಯ ರೈಲ್ವೆ: 194 ಗೂಡ್ಸ್ ರೈಲು ಮ್ಯಾನೇಜರ್ ಹುದ್ದೆ; ಕನ್ನಡಿಗರಿಗೆ ಅನ್ಯಾಯ, ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದೇನು -
ಮಾರ್ಚ್ 17ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Viral Video : ವೃದ್ಧೆಯನ್ನು ಬೆಚ್ಚಿಬೀಳಿಸಿದ ಯಂತ್ರ; ರಸ್ತೆಯಲ್ಲಿದ್ದ ರೋಬೋಟ್ ಅನ್ನು ವಶಕ್ಕೆ ಪಡೆದ ಪೊಲೀಸರು -
ಮಾರ್ಚ್ 16ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು












Click it and Unblock the Notifications