ಜೆಡಿಎಸ್‌ ಜೊತೆ ಕೈ ಸರ್ಕಾರ: 2018ರ ಸತ್ಯ ಸಂಗತಿ ಬಿಚ್ಚಿಟ್ಟು ಕಿಡಿಕಾರಿದ ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರು, ಅಕ್ಟೋಬರ್‌ 24: 2018ರಲ್ಲಿ ಏನು ನಡೆದಿತ್ತು ಎಂಬುದನ್ನು ನಿಮ್ಮ ತಂದೆಯಿಂದ ಕೇಳಿ ತಿಳಿದುಕೊಳ್ಳಿ ಎಂದೇ ಹೇಳುವ ಮೂಲಕ ಅಧಿಕಾರಕ್ಕಾಗಿ ಜೆಡಿಎಸ್ ಕೇಸರೀಕರಣವಾಗಿದೆ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಹಾಗೂಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ತಿರುಗೇಟು ನೀಡಿದ್ದಾರೆ. ಅಧಿಕಾರಕ್ಕಾಗಿ ನಮ್ಮ ಮನೆ ಬಾಗಿಲಿಗೆ ಬಂದಿದ್ದು ಇದೇ ಕಾಂಗ್ರೆಸ್ಸಿಗರು, ಅದಕ್ಕೂ ಮೊದಲು ನಾನು ಬಿಜೆಪಿ ಜತೆ ಸೇರಿ ಸರ್ಕಾರ ರಚನೆ ಮಾಡಿದ್ದಿದ್ದು ಅವರಿಗೆ ಗೊತ್ತಿರಲಿಲ್ಲವೇ? ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕಿಡಿಕಾರಿದರು.

ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಅವರು, ಜೆಡಿಎಸ್ ಬಗ್ಗೆ ಲಘುವಾಗಿ ಮಾತನಾಡುತ್ತಿರುವ ಸಚಿವ ಪ್ರಿಯಾಂಕ ಖರ್ಗೆ ಅವರನ್ನು ತರಾಟೆಗೆ ತೆಗೆದುಕೊಂಡರಲ್ಲದೆ, ಈ ಕ್ಷುಲ್ಲಕ ರಾಜಕೀಯ ಬಿಟ್ಟು ಕಲಬುರಗಿ ಜಿಲ್ಲೆಯಲ್ಲಿ ಆಗಿರುವ ನೆರೆ ಅನಾಹುತವನ್ನು ಸರಿ ಮಾಡಿ ಎಂದು ಕಿವಿಮಾತು ಹೇಳಿದರು. ಅಧಿಕಾರಕ್ಕಾಗಿ 2018ರಲ್ಲಿ ನಮ್ಮ ಮನೆ ಬಾಗಿಲಿಗೆ ಬಂದಿದ್ದು ಇದೇ ಕಾಂಗ್ರೆಸ್. ಅವತ್ತು ಏನೇನು ನಡೆಯಿತು ಎನ್ನುವುದನ್ನು ಅವರು ತಮ್ಮ ತಂದೆಯನ್ನು ಕೇಳಿ ತಿಳಿದುಕೊಳ್ಳಲಿ. ಬೆಂಗಳೂರಿನಲ್ಲಿ ರಾಜಕೀಯ ಮಾಡುವ ಬದಲು ತಮ್ಮ ಜಿಲ್ಲೆಯಲ್ಲಿ ಏನಾಗಿದೆ ಎಂಬ ಬಗ್ಗೆ ಗಮನ ಹರಿಸಲಿ ಎಂದು ಸಲಹೆ ಮಾಡಿದರು.

It was the Congress that came knocking at our doors for power HD Kumaraswamy

ಕಾಂಗ್ರೆಸ್ ನವರು ಮಾತೆತ್ತಿದರೆ ತಾಜ್ ಹೋಟೆಲ್ ನಲ್ಲಿ ಇದ್ದೆ ಅಂತಾರೆ. ನಾನು ತಾಜ್ ಹೊಟೇಲಿನಲ್ಲಿ ಮಲಗಿದ್ದರೆ ರೈತರ 25 ಸಾವಿರ ಕೋಟಿ ಸಾಲಮನ್ನಾ ಮಾಡೋಕೆ ಆಗುತ್ತಿತ್ತಾ? ಎಂದು ಸಚಿವರು ಖಾರವಾಗಿ ಪ್ರಶ್ನಿಸಿದರು.
ಕಾಂಗ್ರೆಸ್ ಶಾಸಕರಿಗೆ ‌ನಾನು ಸಿಎಂ ಅಗಿದ್ದಾಗ ಅಭಿವೃದ್ದಿಗಾಗಿ 19 ಸಾವಿರ ಕೋಟಿ ಅನುದಾನವನ್ನು ಒಂದೇ ವರ್ಷದಲ್ಲಿ ಕೊಟ್ಟಿದ್ದೆ. ಇವತ್ತು ಸಿದ್ದರಾಮಯ್ಯ ಅವರು ಕುಮಾರಸ್ವಾಮಿ ಇದ್ದಾಗ ಏನ್ ಕೊಟ್ರು ಅಂತ ಚರ್ಚೆ ಮಾಡ್ತಾರೆ. ದಾಖಲೆ, ಅಂಕಿ ಅಂಶಗಳು ಅವರ ಬಳಿಯೇ ಇವೆ. ಮೊದಲು ನೋಡಲಿ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

ಹಿಂದೆ ನಾನು ಆರ್ ಎಸ್ ಎಸ್ ಅನ್ನು ಟೀಕೆ ಮಾಡಿದ್ದೇನೆ. ಇಲ್ಲ ಅಂತ ಹೇಳಲ್ಲ. ಕಾಂಗ್ರೆಸ್ ನವರು ನೀವೇನು ಮಾಡಿದ್ದೀರಾ? ರಾಜ್ಯದಲ್ಲಿ 136 ಸೀಟು ಕೊಟ್ಟಿದ್ದಾರೆ. ಜನರ ಸಮಸ್ಯೆ ಕೇಳ್ತಿಲ್ಲ. ಕಲಬುರ್ಗಿಯಲ್ಲಿ ಜನ ಬೀದಿಯಲ್ಲಿ ಇದ್ದಾರೆ. ರೈತರು ಸಂಕಷ್ಟದಲ್ಲಿ ಇದ್ದಾರೆ ಏನು ಮಾಡಿದ್ದೀರಪ್ಪ? ಎಂದು ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ಪ್ರಿಯಾಂಕ್ ಖರ್ಗೆ ಅವರೇ, ನಿಮ್ಮ ಅಪ್ಪ ಏನು ಹೇಳಿದ್ದರು? ನಮ್ಮ ಹೊಲದಲ್ಲಿ 40 ಎಕರೆ ಬೆಳೆ ನಷ್ಟ ಆಗಿದೆ ಅಂತ ರೈತರು ಹೋಗಿ ಕೇಳಿದರೆ ನಾನು ಎಲ್ಲಿ ಹೋಗಲಿ ಅಂತ ಹೇಳಿದ್ದರು. ನಿಮ್ಮಿಂದ ನಾನು ಯಾವ ರೀತಿ ರಾಜಕೀಯದಲ್ಲಿ ತೊಡಗಿಸಿಕೊಳ್ಳಬೇಕು ಅಂತ ಕಲಿಯಬೇಕಾ? ಪ್ರಿಯಾಂಕ್ ಖರ್ಗೆ ಮಾತಾಡಬೇಕಾದ್ರೆ ಹದ್ದುಬಸ್ತಿನಲ್ಲಿ ಮಾತಾಡಿ. ನನ್ನ ಬಗ್ಗೆ ನಮ್ಮ ಪಕ್ಷದ ಬಗ್ಗೆ ಮಾತನಾಡುವ ನೈತಿಕತೆ ಉಳಿಸಿಕೊಂಡಿಲ್ಲ ನೀವು ಎಂದು ಪ್ರಿಯಾಂಕ ಖರ್ಗೆಗೆ ಸಚಿವರು ಎಚ್ಚರಿಕೆ ನೀಡಿದರು.

ಅಧಿಕಾರಕೋಸ್ಕರ ನಾವು ಯಾರ ಬಳಿಗೂ ಹೋಗೊಲ್ಲ. ಕಾಂಗ್ರೆಸ್ ಅವರು ಅಧಿಕಾರ ಹಿಡಿಯಲು ಬೇಕಾದಾಗ ನಮ್ಮ ಹತ್ತಿರ ಬರುತ್ತಾರೆ. ಯಾರ ಯಾರ ಬೆನ್ನಿಗೆ ಕಾಂಗ್ರೆಸ್ ಚೂರಿ ಹಾಕಿದೆ ಎಂಬುದು ಗೊತ್ತಿದೆ. ಯಾರು ಯಾರನ್ನ ಅಧಿಕಾರದಿಂದ ತೆಗೆದರು‌, ಎಷ್ಟು ಜನರ ರಾಜಕೀಯ ಜೀವನ ಹಾಳು ಮಾಡಿದರು ಎನ್ನುವುದು ನಿಮಗೆ ತಿಳಿದಿಲ್ಲವೇ ಎಂದು ಹೆಚ್‌ ಡಿ ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+