ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೆಪಿಸಿಸಿ ಪುನಾರಚನೆ : ದಿನೇಶ್ ಗುಂಡೂರಾವ್ ಹೇಳುವುದೇನು?

|
Google Oneindia Kannada News

ಬೆಂಗಳೂರು, ಜೂನ್ 19 : 'ಕೆಪಿಸಿಸಿ ಮಾತ್ರವಲ್ಲ ಜಿಲ್ಲಾ ಮತ್ತು ಬ್ಲಾಕ್ ಕಾಂಗ್ರೆಸ್‌ನಲ್ಲಿಯೂ ಸಂಪೂರ್ಣ ಬದಲಾವಣೆಯಾಗಲಿದೆ' ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.

ಬುಧವಾರ ಎಐಸಿಸಿ ಕೆಪಿಸಿಸಿ ಅಧ್ಯಕ್ಷರು ಮತ್ತು ಕಾರ್ಯಾಧ್ಯಕ್ಷರನ್ನು ಹೊರತುಪಡಿಸಿ ಉಳಿದ ಎಲ್ಲಾ ಸಮಿತಿಗಳ ಪುನಾರಚನೆಗೆ ಸೂಚನೆ ನೀಡಿದೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮಾಧ್ಯಮಗಳ ಜೊತೆ ಮಾತನಾಡಿದರು.

ಕಾಂಗ್ರೆಸ್‌ನಿಂದ ರೋಷನ್ ಬೇಗ್ ಅಮಾನತು, ಯಾರು ಏನು ಹೇಳಿದರು?ಕಾಂಗ್ರೆಸ್‌ನಿಂದ ರೋಷನ್ ಬೇಗ್ ಅಮಾನತು, ಯಾರು ಏನು ಹೇಳಿದರು?

'ಪಕ್ಷ ಸಂಘಟನೆಯಲ್ಲಿ ಬದಲಾವಣೆ ಮಾಡಬೇಕು ಎಂದು ನಾವು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಮನವಿ ಮಾಡಿದ್ದೆವು. ಚುನಾವಣೆಗಿಂತ ಮೊದಲೇ ಈ ಕುರಿತು ಮನವಿ ಮಾಡಲಾಗಿತ್ತು' ಎಂದು ದಿನೇಶ್ ಗುಂಡೂರಾವ್ ಹೇಳಿದರು.

ಕರ್ನಾಟಕದ ಕಾಂಗ್ರೆಸ್ ನಾಯಕರಿಗೆ ರೋಷನ್ ಬೇಗ್ ಪ್ರಶ್ನೆಗಳುಕರ್ನಾಟಕದ ಕಾಂಗ್ರೆಸ್ ನಾಯಕರಿಗೆ ರೋಷನ್ ಬೇಗ್ ಪ್ರಶ್ನೆಗಳು

It will be a total reorganization of the party says KPCC president

'ಕಾಂಗ್ರೆಸ್ ಅಧ್ಯಕ್ಷರು ಈಗ ಕೆಪಿಸಿಸಿಯಲ್ಲಿ ಬದಲಾವಣೆ ಮಾಡಲು ಒಪ್ಪಿಗೆ ನೀಡಿದ್ದಾರೆ. ನಾವು ಈಗ ಕೆಪಿಸಿಸಿ ಮಾತ್ರವಲ್ಲ ಜಿಲ್ಲಾ ಮತ್ತು ಬ್ಲಾಕ್ ಕಾಂಗ್ರೆಸ್‌ನಲ್ಲಿಯೂ ಬದಲಾವಣೆ ಮಾಡಲಿದ್ದೇವೆ. ಇಡೀ ಪಕ್ಷ ಸಂಘಟನೆಯಲ್ಲಿಯೇ ಬದಲಾವಣೆಯಾಗಲಿದೆ' ಎಂದರು.

ಕೆಪಿಸಿಸಿಯಲ್ಲಿ ಮಹತ್ವದ ಬದಲಾವಣೆಗೆ ಸೂಚನೆಕೆಪಿಸಿಸಿಯಲ್ಲಿ ಮಹತ್ವದ ಬದಲಾವಣೆಗೆ ಸೂಚನೆ

ಪ್ರಾಥಮಿಕ ವಿಚಾರಣೆಯಿಂದ ಅಮಾನತು : 'ಶಿವಾಜಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ರೋಷನ್ ಬೇಗ್ ಅವರನ್ನು ಪ್ರಾಥಮಿಕ ವಿಚಾರಣೆ ಬಳಿಕ ಅಮಾನತು ಮಾಡಲಾಗಿದೆ. ಮುಂದಿನ ಕ್ರಮ ಏನು ಎಂಬುದನ್ನು ಎಐಸಿಸಿ ನಿರ್ಧರಿಸಲಿದೆ' ಎಂದು ದಿನೇಶ್ ಗುಂಡೂರಾವ್ ಹೇಳಿದರು.

English summary
KPCC president Dinesh Gundu Rao said that We made a request to Congress President Rahul Gandhi that we need to organize the committee. It'll be a total reorganization of the party at all levels. ಕೆಪಿಸಿಸಿ ಪುನಾರಚನೆ : ದಿನೇಶ್ ಗುಂಡೂರಾವ್ ಹೇಳುವುದೇನು
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X