JDS-BJP Alliance: ಜೆಡಿಎಸ್ ಸೆಕ್ಯೂಲರ್ ಪದ ತೆಗೆಯುವುದು ಸೂಕ್ತ: ಜಮೀರ್ ಅಹಮದ್ ಕಿಡಿ

ಬೆಂಗಳೂರು,ಸೆಪ್ಟೆಂಬರ್‌ 23: ಬಿಜೆಪಿ -ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್ ಪಕ್ಷ ಕ್ಕೆ ಅನುಕೂಲ ಆಗಲಿದ್ದು, ಇದೀಗ ಜೆಡಿಎಸ್ ಬಿಜೆಪಿ ಬಿ ಟೀಮ್ ಎಂಬುದು ಸಾಬೀತಾಗಿದ್ದು, ಜೆಡಿಎಸ್ ಇನ್ಮುಂದೆ ಜಾತ್ಯತೀತ ಪದ ತೆಗೆಯುವುದು ಸೂಕ್ತ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಜಮೀರ್‌ ಅಹಮದ್‌ ಖಾನ್‌ ಅವರು, ಜೆಡಿಎಸ್‌ ವಿರುದ್ದ ವಾಗ್ದಾಳಿ ನಡೆಸಿದ್ದು, ಜೆಡಿಎಸ್ ಇನ್ಮುಂದೆ ಜಾತ್ಯತೀತ ಪದ ತೆಗೆಯುವುದು ಸೂಕ್ತ ಎಂದು ಹೇಳಿದ್ದಾರೆ. ಅಲ್ಲದೇ 2019 ರಲ್ಲಿ ಜೆಡಿಎಸ್ ಜತೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿತ್ತು. ನಾವು ಪ್ರತ್ಯೇಕ ವಾಗಿ ಹೋಗಿದ್ದರೆ ಕನಿಷ್ಠ ಹತ್ತು ಸ್ಥಾನ ಗೆಲ್ಲುತ್ತಿದ್ದೆವು. ಜೆಡಿಎಸ್ ಜತೆ ಹೋಗಿದ್ದಕ್ಕೆ ಒನ್ ಡಿಜಿಟ್ ಗೆ ಇಳಿದೆವು. 2024 ರ ಲೋಕಸಭೆ ಚುನಾವಣೆ ಯಲ್ಲಿ ಬಿಜೆಪಿ ಸ್ಥಿತಿ ಯೂ ಇದೇ ಆಗಲಿದೆ ಎಂದು ವ್ಯಂಗ್ಯವಾಡಿದರು.

Its Better To Remove The Word Secular From Janata Dal, Opines Zameer Ahmed Khan

ಬಿಜೆಪಿ ನಾಯಕರ ಜೊತೆಗೆ ಮೈತ್ರಿ ಮಾತುಕತೆಗೆ ದೆಹಲಿಗೆ ಹೋಗಿದ್ದಾರೆ. ಈ ಮೈತ್ರಿ ಮಾತುಕತೆ ಗೆ ರಾಜ್ಯ ಜೆಡಿಎಸ್ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರನ್ನು ಕರೆದಿಲ್ಲ. ಅವರು ಮುಸ್ಲಿಂ ಸಮುದಾಯಕ್ಕೆ ಸೇರಿದ್ದಾರೆ ಎಂದು ಕರೆದಿಲ್ಲವೇ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಅವರನ್ನ ಪ್ರಶ್ನಿಸಿದ್ದಾರೆ.

ದೇವೇಗೌಡರ ಬಗ್ಗೆ ನನಗೆ ಅಪಾರ ಗೌರವ ಇದೆ. ಹಿಂದೆ ಬಿಜೆಪಿ ಜತೆ ಸೇರಿ ಸರ್ಕಾರ ಮಾಡಿದ್ದಕ್ಕೆ ನನ್ನ ಒಪ್ಪಿಗೆ ಇರಲಿಲ್ಲ ಎಂದು ಹೇಳಿದ್ದ ಮಾಜಿ ಪ್ರಧಾನಿ ದೇವೇಗೌಡರು ಇದೀಗ ಏನು ಹೇಳುತ್ತಾರೆ. ಮೈತ್ರಿ ಬಗ್ಗೆ ಅವರು ಮೌನ ವಹಿಸಿರುವುದು ಯಾಕೆ ಎಂದು ಕೇಳಿದ್ದಾರೆ.

ಜೆಡಿಎಸ್ -ಬಿಜೆಪಿ ಮೈತ್ರಿ ಯಿಂದ ಇದೀಗ ಕಾಂಗ್ರೆಸ್ ಪಕ್ಷ ಒಂದೇ ಜಾತ್ಯತೀತ ಎಂಬುದು ಸಾಬೀತಾಗಿದೆ. ಯಾವುದೇ ಸಿದ್ಧಾಂತ ಇಲ್ಲದ ಮೈತ್ರಿ ಎಂಬುದು ರಾಜ್ಯದ ಜನತೆಗೂ ಸ್ಪಷ್ಟತೆ ಸಿಕ್ಕಿದೆ. ಮೈತ್ರಿಯಿಂದ ಕಾಂಗ್ರೆಸ್ ಗೆ ಲಾಭ ಆಗಲಿದೆ ಎಂದು ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಕುರಿತು ವಾಗ್ದಾಳಿ ನಡೆಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+