ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮತಾಂತರ ನಿಷೇಧ ಮಸೂದೆ ಪ್ರತಿ ಹರಿದು ಹಾಕಿದ್ದು ನನ್ನ ಹಕ್ಕು: ಡಿ.ಕೆ. ಶಿವಕುಮಾರ್

|
Google Oneindia Kannada News

ಬೆಳಗಾವಿ, ಡಿ.21: ಮತಾಂತರ ನಿಷೇಧ ಮಸೂದೆಯನ್ನು ನಾನು ಹರಿದು ಹಾಕಿದ್ದು, ಇದು ನನ್ನ ಹಕ್ಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆ ಪ್ರಹಸನದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಮಸೂದೆ ಸಂವಿಧಾನಕ್ಕೆ ವಿರುದ್ಧವಾದುದ್ದು. ನನ್ನ ಹಕ್ಕನ್ನು ನಾನು ಚಲಾಯಿಸಿದ್ದೇನೆ. ಅವರು ಏನು ಮಾಡುತ್ತಾರೋ ಮಾಡಲಿ ಎಂದು ಸವಾಲು ಹಾಕಿದರು.

ಕಳ್ಳನಂತೆ ವರ್ತಿಸಿದ ಬಿಜೆಪಿ ಸರ್ಕಾರ

'ಬಿಜೆಪಿ ಸರ್ಕಾರ ಕಳ್ಳರಂತೆ ವರ್ತಿಸುತ್ತಿದೆ. ಸದನದಲ್ಲಿ ಸಮಯಾವಕಾಶ ಇದ್ದರೂ ಕಾಯಲಿಲ್ಲ. ಕಂದಾಯ ಸಚಿವರು ಉತ್ತರ ನೀಡುವ ಸಂದರ್ಭದಲ್ಲಿ ಅವರ ಮಾತು ಮುಗಿಸಿ, ನಂತರ ನಮ್ಮ ಸಮ್ಮುಖದಲ್ಲೇ ಮಂಡನೆ ಮಾಡಬಹುದಿತ್ತು. ನಾವು ಕೂಡ ಪ್ರಸ್ತಾವನೆ ಸಂದರ್ಭದಲ್ಲೇ ಇದನ್ನು ಆಕ್ಷೇಪಿಸಲು ಸಿದ್ಧರಿದ್ದೆವು. ಸರ್ಕಾರ ಮಸೂದೆ ಮಂಡಿಸಿ ನಂತರ ಮತಕ್ಕೆ ಹಾಕಲು ಅವಕಾಶ ಮಾಡಿ ಕೊಡಬೇಕಿತ್ತು. ಬಹುಮತದ ಆಧಾರದ ಮೇಲೆ ತೀರ್ಮಾನ ಕೈಗೊಳ್ಳಬಹುದಿತ್ತು. ಆದರೆ ಸ್ಪೀಕರ್ ಅವರು ರಾಜಕೀಯ ಪಕ್ಷದ ಸದಸ್ಯರಂತೆ ನಡೆದುಕೊಂಡಿದ್ದಾರೆ. ಅವರು ಕಾನೂನಿನ ಪ್ರಕಾರವಾಗಿ ನಡೆದುಕೊಂಡಿಲ್ಲ' ಎಂದು ಅವರು ಹೇಳಿದರು.

Its My Right to Rips Copy of Anti-Conversion bill: DK Shivakumar

'ಮದುವೆಯು ನಂಬಿಕೆ, ಪರಸ್ಪರ ಒಪ್ಪಿಗೆ ಹಾಗೂ ಪ್ರೀತಿಯ ಸಂಬಂಧದ ಆಧಾರದ ಮೇಲೆ ನಡೆಯುತ್ತದೆ. ಮದುವೆಯನ್ನು ಬಲವಂತವಾಗಿ ಮಾಡಲು ಸಾಧ್ಯವಿಲ್ಲ. ಇಂತಹ ಮದುವೆಯನ್ನು ಅವರು ಅಸಿಂಧು ಮಾಡಲು ಹೇಗೆ ಸಾಧ್ಯ? ಸಂವಿಧಾನದ 21 ನೇ ಪರಿಚ್ಛೇದ ಏನು ಹೇಳುತ್ತದೆ? ಅನೇಕ ಪ್ರಕರಣಗಳಲ್ಲಿ ನ್ಯಾಯಾಲಯದ ತೀರ್ಪು ಏನು? ಮತಾಂತರ ವಿಚಾರದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳಿದ್ದೇನು? ಇದು ಕೇವಲ ಕ್ರೈಸ್ತರಿಗೆ ಮಾತ್ರ ಸೀಮಿತವಾದುದಲ್ಲ. ಎಲ್ಲ ಧರ್ಮಕ್ಕೆ ಸಂಬಂಧಿಸಿದ್ದು, ಒಂದು ವರ್ಗವನ್ನು ಗುರಿಯಾಗಿಸಲು ಹಾಗೂ ಶೋಷಣೆ ಮಾಡಲು ಈ ಮಸೂದೆ ತರಲಾಗಿದೆ ಎಂದು ಅಭಿಪ್ರಾಯಪಟ್ಟರು.

Breaking: ಮತಾಂತರ ನಿಷೇಧ ಕಾಯ್ದೆ ಮಂಡಿಸಿದ ಸಚಿವ ಆರಗ ಜ್ಞಾನೇಂದ್ರBreaking: ಮತಾಂತರ ನಿಷೇಧ ಕಾಯ್ದೆ ಮಂಡಿಸಿದ ಸಚಿವ ಆರಗ ಜ್ಞಾನೇಂದ್ರ

ಕ್ರೈಸ್ತ ಶಿಕ್ಷಣ ಸಂಸ್ಥೆಗಳಲ್ಲಿ ಓದುತ್ತಿಲ್ಲವೇ?

ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಮತಾಂತರಗೊಂಡಾಗ ದೊಡ್ಡ ಪ್ರಮಾಣದಲ್ಲಿ ಸಾಮೂಹಿಕ ಮತಾಂತರ ನಡೆಯಿತು. ಇದು ಭಾರತದ ಇತಿಹಾಸ. ರಾಜ್ಯದಲ್ಲಿ ಅನೇಕ ವೈದ್ಯಕೀಯ, ಇಂಜಿನಿಯರಿಂಗ್, ಪದವಿ ಕಾಲೇಜು ಹಾಗೂ ಶಾಲೆಗಳು ಇವೆ. ಆಸ್ಪತ್ರೆಗಳು, ಧಾರ್ಮಿಕ ಸಂಸ್ಥೆಗಳಿವೆ. ಆದರೂ ಸಚಿವರ ಮಕ್ಕಳು ಕ್ರೈಸ್ತ ಸಮುದಾಯದ ಶಿಕ್ಷಣ ಸಂಸ್ಥೆಗಳಲ್ಲೆ ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಲು ಮುಂದಾಗುತ್ತಾರೆ. ಈಗಲೂ ಕೇಂದ್ರದ ಹಲವು ಸಚಿವರ ಮಕ್ಕಳು ಕ್ರೈಸ್ತ ಶಿಕ್ಷಣ ಸಂಸ್ಥೆಗಳಲ್ಲಿ ಓದುತ್ತಿದ್ದಾರೆ. ಈ ಮಸೂದೆ ರಾಜ್ಯದಲ್ಲಿ ಮುಂದೆ ಬರಬಹುದಾದ ಬಂಡವಾಳ ಹೂಡಿಕೆ ಮೇಲೂ ಕೆಟ್ಟ ಪರಿಣಾಮ ಬೀರಲಿದೆ. ವಿದೇಶಿ ಬಂಡವಾಳ ಹೂಡಿಕೆದಾರರು ರಾಜ್ಯಕ್ಕೆ ಬರಲು ಹಿಂದೇಟು ಹಾಕುತ್ತಾರೆ. ಹೀಗಾಗಿ ಕಾಂಗ್ರೆಸ್ ಪಕ್ಷ ಇದರ ವಿರುದ್ಧ ಹೋರಾಡುತ್ತದೆ. ನಾವು ಜನರ ಮುಂದೆ ಹೋಗುತ್ತೇವೆ, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗ ಈ ಮಸೂದೆಯನ್ನು ಹಿಂಪಡೆಯಲಿದೆ' ಎಂದರು.

ಚಿತ್ರದುರ್ಗದಲ್ಲಿ ಒಂದೇ ಒಂದು ಬಲವಂತದ ಮತಾಂತರ ಆಗಿಲ್ಲ ಎಂದು ವರದಿ ನೀಡಿರುವ ತಹಶೀಲ್ದಾರರನ್ನು ವರ್ಗಾವಣೆ ಮಾಡಿರುವ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, 'ಬಿಜೆಪಿ ಶಾಸಕರೊಬ್ಬರು ಹುಚ್ಚರಂತೆ ಮಾತನಾಡುತ್ತಿದ್ದಾರೆ. ಅವರ ತಾಯಿ ವಿಚಾರದಲ್ಲಿ ಏನಾಗಿದೆಯೋ ಅದು ಅವರ ವೈಯಕ್ತಿಕ ವಿಚಾರ. ಆದರೆ ಚಿತ್ರದುರ್ಗ ತಹಶೀಲ್ದಾರ್ ಅವರು ವರದಿ ನೀಡಿದಾಗ ವರ್ಗಾವಣೆ ಮಾಡಿರುವುದೇಕೆ? ಕೇವಲ ಇದೊಂದೇ ಅಲ್ಲ, ಶಿಕ್ಷೆ, ಸಾಕ್ಷ್ಯಾಧಾರ ಸೇರಿದಂತೆ ಅನೇಕ ವಿಚಾರಗಳು ಇದರಲ್ಲಿ ಅಡಗಿವೆ' ಎಂದರು.

ಮತಾಂತರ ಆಗುವ ಮುನ್ನ ಅಥವಾ ನಂತರ ಅವರು ಜಿಲ್ಲಾ ಮ್ಯಾಜಿಸ್ಟ್ರೇಟ್ ಮುಂದೆ ಹೋಗಬೇಕು ಎಂಬ ಅಂಶವಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, 'ಮತಾಂತರ ಆಗಲು ಮ್ಯಾಜಿಸ್ಟ್ರೇಟ್ ಮುಂದೆ ಅರ್ಜಿ ಹಾಕಬೇಕಂತೆ. ಇದು ಈ ದೇಶದಲ್ಲಿ ಸಾಧ್ಯವೇ? ಈ ದೇಶದ ಅನೇಕ ಹಿಂದೂ ಧಾರ್ಮಿಕ ಸಂಸ್ಥೆಗಳಲ್ಲಿ ವಿದೇಶದಿಂದ ಬಂದ ಅನೇಕರು ಭಜನೆ ಮಾಡುತ್ತಾರೆ. ಇದನ್ನು ತಡೆಯಲು ಸಾಧ್ಯವೇ? ಇದು ಬಲವಂತದಿಂದ ಮಾಡಲಾಗುತ್ತಿದೆಯೇ?' ಎಂದರು.

Recommended Video

South Africa ನೆಲದಲ್ಲಿ ಮೊದಲ ಬಾರಿಗೆ ಗೆದ್ದರೆ Kohliಗೆ ನೆಮ್ಮದಿ | Oneindia Kannada

English summary
I have Rips copy of Anti-Conversion bill. This is my right. Let them do what they do. The bill is against the constitution: DK Shivakumar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X