ಬೆಳಗಾವಿ ಉಪ ಚುನಾವಣೆ: ಕಾಂಗ್ರೆಸ್ ಟಿಕೆಟ್ಗಾಗಿ ಶುರುವಾಯ್ತು ಶೀತಲ ಸಮರ!
ಬೆಂಗಳೂರು, ಮಾ. 01: ಸದ್ಯದಲ್ಲಿಯೇ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ದಿನಾಂಕ ಘೋಷಣೆ ಆಗಲಿದೆ. ಉಪ ಚುನಾವಣೆಗೆ ಯಾವುದೇ ಪಕ್ಷಗಳು ಇನ್ನೂ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ. ಈ ಮಧ್ಯೆ ಕಾಂಗ್ರೆಸ್ ಟಿಕೆಟ್ಗಾಗಿ ಎರಡು ಪ್ರಭಾವಿ ಕುಟುಂಬಗಳ ಮಧ್ಯೆ ಕೋಲ್ಡ್ ವಾರ್ ಶುರುವಾಗಿದೆ ಎಂಬ ಮಾಹಿತಿ ಬಂದಿದೆ.
ಬೆಳಗಾವಿ ಲೋಕಸಭಾ ಉಪ ಚುನಾವಣೆ ಟಿಕೆಟ್ಗಾಗಿ ಜಿಲ್ಲಾ ಕಾಂಗ್ರೆಸ್ ನಾಯಕರ ನಡುವೆ ಶೀತಲ ಸಮರವೇರ್ಪಟ್ಟಿದೆ. ಜಿಲ್ಲೆಯ ಎರಡು ಪ್ರಭಾವಿ ರಾಜಕೀಯ ಕುಟುಂಬಗಳಾದ ಜಾರಕಿಹೊಳಿ ಹಾಗೂ ಹುಕ್ಕೇರಿ ಮನೆತನಗಳ ಮಧ್ಯೆ ಪೈಪೋಟಿ ಶುರುವಾಗಿದೆ. ಉಪ ಚುನಾವಣೆ ಟಿಕೆಟ್ಗಾಗಿ ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ ಅವರು ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಆದರೆ ಪ್ರಕಾಶ್ ಹುಕ್ಕೇರಿ ಅವರ ಬೇಡಿಕೆಗೆ ಸತೀಶ್ ಜಾರಕಿಹೊಳಿ ಅಡ್ಡಗಾಲು ಹಾಕಿದ್ದಾರಂತೆ. ಅವರಿಗೆ ಬೆಳಗಾವಿ ಉಪ ಚುನಾವಣೆ ಟಿಕೆಟ್ ಕೊಡುವುದು ಬೇಡ, ಅವರು ಚಿಕ್ಕೋಡಿಯಲ್ಲೇ ಇರಲಿ ಎಂದು ಒತ್ತಡ ಹಾಕಿದ್ದಾರೆ ಎಂದು ತಿಳಿದು ಬಂದಿದೆ.

Recommended Video
ಆ ಮೂಲಕ ಪ್ರಕಾಶ್ ಹುಕ್ಕೇರಿ ಅವರನ್ನು ಚಿಕ್ಕೋಡಿ ಕ್ಷೇತ್ರಕ್ಕೇ ಸೀಮಿತ ಮಾಡಲು ಸತೀಶ್ ಜಾರಕಿಹೊಳಿ ಪ್ಲ್ಯಾನ್ ಮಾಡಿದ್ದಾರೆ. ಪ್ರಕಾಶ್ ಹುಕ್ಕೇರಿ ಬೆಳಗಾವಿ ರಾಜಕಾರಣಕ್ಕೆ ಬಂದರೆ ಭವಿಷ್ಯದಲ್ಲಿ ಕಷ್ಟವಾಗಬಹುದು. ಬೆಳಗಾವಿ ಭಾಗದಲ್ಲಿ ಅಸ್ತಿತ್ವ ಹೋಗುತ್ತದೆ ಎಂಬ ಆತಂಕ ಅವರಿಗಿದೆ ಎನ್ನಲಾಗಿದೆ. ಹೀಗಾಗಿ ಕೆಪಿಸಿಸಿ ಕಾಯಾಧ್ಯಕ್ಷರೂ ಆಗಿರುವ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಪ್ರಕಾಶ್ ಹುಕ್ಕೇರಿ ಅವರ ಮಧ್ಯೆ ಟಿಕೆಟ್ಗಾಗಿ ಪೈಪೋಟಿ ಶುರುವಾಗಿದೆ ಎಂಬ ಮಾಹಿತಿ ಕಾಂಗ್ರೆಸ್ ವಲಯದಿಂದ ಕೇಳಿ ಬಂದಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications