ಜ.5 ರಿಂದ ಜೆ.ಪಿ.ನಡ್ಡಾ ರಾಜ್ಯ ಪ್ರವಾಸ: ನಿರ್ಮಲ್‍ಕುಮಾರ್ ಸುರಾನ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಜ.5 ಮತ್ತು 6ರಂದು ಕರ್ನಾಟಕ ರಾಜ್ಯ ಪ್ರವಾಸ ಮಾಡಲಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್‍ ಕುಮಾರ್ ಸುರಾನ ಅವರು ತಿಳಿಸಿದ್ದಾರೆ.

ಜನವರಿ 5 ರಂದು ಮಧ್ಯಾಹ್ನ ಅವರು ತುಮಕೂರಿನಲ್ಲಿ ತುಮಕೂರು ಮತ್ತು ಮಧುಗಿರಿಯ ಶಕ್ತಿ ಕೇಂದ್ರಗಳ ಪ್ರಮುಖರ ಸಭೆಯಲ್ಲಿ ಭಾಗವಹಿಸುವರು. ಬಳಿಕ ಸಿದ್ಧಗಂಗಾ ಮಠಕ್ಕೆ ಭೇಟಿ ಕೊಡಲಿದ್ದಾರೆ. ಸಂಜೆ ಜೆ.ಪಿ.ನಡ್ಡಾ ಅವರು ಚಿತ್ರದುರ್ಗದಲ್ಲಿ ವೀರ ಮದಕರಿ ನಾಯಕ, ಒನಕೆ ಓಬವ್ವ ಮತ್ತು ಡಾ. ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವರು. ಎಸ್‍ಸಿ, ಎಸ್‍ಟಿ, ಒಬಿಸಿ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಳ್ಳುವರು. ನಂತರ ಶ್ರೀ ಮಾದಾರ ಚೆನ್ನಯ್ಯ ಮಠ, ಸಿರಿಗೆರೆ ಶ್ರೀ ತರಳಬಾಳು ಮಠಕ್ಕೆ ಭೇಟಿ ಬಳಿಕ ದಾವಣಗೆರೆ ವಿಭಾಗದ ಸಂಸದರು, ಶಾಸಕರು, ಎಂಎಲ್‍ಸಿಗಳು ಮತ್ತು ಜಿಲ್ಲಾ ಅಧ್ಯಕ್ಷರ ಸಭೆಯಲ್ಲಿ ಭಾಗವಹಿಸುವರು.

ಜನವರಿ 6 ರಂದು ಬೆಳಿಗ್ಗೆ ಜೆ.ಪಿ.ನಡ್ಡಾ ಅವರು ಹರಿಹರದ ಶ್ರೀ ಪಂಚಮಸಾಲಿ ಮಠ, ಬೆಳ್ಳುಡಿಯ ಶ್ರೀ ಕನಕಗುರುಪೀಠ, ರಾಜನಹಳ್ಳಿಯ ಶ್ರೀ ವಾಲ್ಮೀಕಿ ಗುರು ಪೀಠಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ದಾವಣಗೆರೆ ದಕ್ಷಿಣದ ಬೂತ್ ವಿಜಯ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಜನವರಿ 6 ರಂದು ಸಂಜೆ ನಡ್ಡಾ ಅವರು ತುಮಕೂರು ಜಿಲ್ಲೆಯ ಸಿರಾದಲ್ಲಿ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುವರು ಎಂದು ನಿರ್ಮಲ್‍ಕುಮಾರ್ ಸುರಾಣ ಅವರು ತಿಳಿಸಿದ್ದಾರೆ.

J P Nadda To Visit Karnataka On January 5 And 6

ಇನ್ನೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರು ಜನವರಿ 4ರಂದು ಬೆಂಗಳೂರಿಗೆ ಆಗಮಿಸಲಿದ್ದು, ಜನವರಿ 4ರಂದು ಸಂಜೆ ಬೆಂಗಳೂರು ವಿಮಾನನಿಲ್ದಾಣಕ್ಕೆ ಆಗಮಿಸುವ ಅವರು ಬಳಿಕ ರಾಜ್ಯ ಬಿಜೆಪಿ ಕಚೇರಿಗೆ ಭೇಟಿ ಕೊಡಲಿದ್ದಾರೆ. ನಂತರ ಪೂರ್ವನಿಗದಿತ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಕುಮಾರಕೃಪ ಗೆಸ್ಟ್ ಹೌಸಿಗೆ ವಾಸ್ತವ್ಯ ಮಾಡಲಿದ್ದಾರೆ.

ಜನವರಿ 5 ರಂದು ತುಮಕೂರಿನಲ್ಲಿ ತುಮಕೂರು ಮತ್ತು ಮಧುಗಿರಿಯ ಶಕ್ತಿ ಕೇಂದ್ರಗಳ ಪ್ರಮುಖರ ಸಭೆಯಲ್ಲಿ ಭಾಗವಹಿಸುವರು. ಸಂಜೆ ಚಿತ್ರದುರ್ಗದಲ್ಲಿ ಎಸ್‍ಸಿ, ಎಸ್‍ಟಿ, ಒಬಿಸಿ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಳ್ಳುವರು. ಬಳಿಕ ದಾವಣಗೆರೆ ವಿಭಾಗದ ಸಂಸದರು, ಶಾಸಕರು, ಎಂಎಲ್‍ಸಿಗಳು ಮತ್ತು ಜಿಲ್ಲಾ ಅಧ್ಯಕ್ಷರ ಸಭೆಯಲ್ಲಿ ಭಾಗವಹಿಸುವರು.

J P Nadda To Visit Karnataka On January 5 And 6

ಜನವರಿ 6 ರಂದು ಅವರು ದಾವಣಗೆರೆ ದಕ್ಷಿಣದ ಬೂತ್ ವಿಜಯ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಸಂಜೆ ಅವರು ತುಮಕೂರು ಜಿಲ್ಲೆಯ ಸಿರಾದಲ್ಲಿ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುವರು. ಬಳಿಕ ಬೆಂಗಳೂರಿನಿಂದ ವಿಮಾನದಲ್ಲಿ ದೆಹಲಿಗೆ ತೆರಳಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+