• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕಾಂಗ್ರೆಸ್ ಪಕ್ಷಕ್ಕೆ ಜಾಫರ್ ಷರೀಫ್ ಗುಡ್ ಬೈ!

|

ಬೆಂಗಳೂರು, ಮಾ. 26 : ಕಾಂಗ್ರೆಸ್ ಹಿರಿಯ ಮುಖಂಡ ಜಾಫ‌ರ್‌ ಷರೀಫ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಇದರಿಂದಾಗಿ ಕಾಂಗ್ರೆಸ್‌ ಪಕ್ಷದೊಂದಿಗಿನ ದಶಕಗಳ ಸಂಬಂಧವನ್ನು ಕಡಿದುಕೊಂಡಿದ್ದಾರೆ. ಷರೀಫ್ ಅವರು ಯಾವುದೇ ಪಕ್ಷ ಸೇರದೆ, ಅಭ್ಯರ್ಥಿ ಪರವಾಗಿ ಪ್ರಚಾರ ಮಾಡದೆ ತಟಸ್ಥವಾಗಿ ಉಳಿಯಲಿದ್ದಾರೆ ಎಂದು ತಿಳಿದುಬಂದಿದೆ.

ಮೆಕ್ಕಾ ಪ್ರವಾಸದಲ್ಲಿರುವ ಜಾಫರ್ ಷರೀಫ್ ಮಂಗಳವಾರ ಅಲ್ಲಿಂದಲೇ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಪತ್ರವನ್ನು ಕಳುಹಿಸಿದ್ದಾರೆ. ಆದರೆ, ಕಾಂಗ್ರೆಸ್‌ ಹೈಕಮಾಂಡ್‌ ಷರೀಫ್ ಅವರ ರಾಜೀನಾಮೆಯನ್ನು ಇನ್ನೂ ಅಂಗೀಕರಿಸಿಲ್ಲ. ಅವರ ಮನವೊಲಿಸುವ ಪ್ರಯತ್ನ ನಡೆಯುತ್ತಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಟಿಕೆಟ್ ಕೈ ತಪ್ಪಿದ್ದರಿಂದ ಅಸಮಾಧಾನಗೊಂಡಿದ್ದ ಜಾಫರ್ ಷರೀಫ್ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಲಿದ್ದಾರೆ. ಜೆಡಿಎಸ್ ಅಭ್ಯರ್ಥಿಯಾಗಿ ಮೈಸೂರಿನಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಹಬ್ಬಿದ್ದವು. ಆದರೆ, ಭಾನುವಾರ ತಾವು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳುವ ಮೂಲಕ ಷರೀಫ್ ಜೆಡಿಎಸ್ ಸೇರುವ ಸುದ್ದಿಗಳಿಗೆ ತೆರೆ ಎಳೆದಿದ್ದರು. [ಷರೀಫ್ ಪಕ್ಷ ಬಿಡೋಲ್ಲ, ಜೆಡಿಎಸ್ ಲೆಕ್ಕಾ ಉಲ್ಟಾ]

ಆದರೆ, ಮಂಗಳವಾರ ಮೆಕ್ಕಾದಿಂದ ಫ್ಯಾಕ್ಸ್ ಮೂಲಕ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುವ ಮೂಲಕ ಷರೀಫ್ ಎಲ್ಲರಲ್ಲಿ ಅಚ್ಚರಿ ಮೂಡಿಸಿದ್ದಾರೆ. ಕಾಂಗ್ರೆಸ್ ತೊರೆದಿರುವ ಷರೀಫ್ ಜೆಡಿಎಸ್‌ ಸೇರಿದಂತೆ ಯಾವುದೇ ಇತರ ಪಕ್ಷಗಳನ್ನು ಸೇರುವುದಿಲ್ಲ, ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡುವುದಿಲ್ಲ ಎಂದು ತಿಳಿದುಬಂದಿದೆ.

ಮಾ. 19ರಿಂದ ಮೆಕ್ಕಾ ಯಾತ್ರೆಯಲ್ಲಿರುವ ಷರೀಫ್ ಅವರು ಮುಂದಿನ 15 ರಿಂದ 20 ದಿನಗಳ ಕಾಲ ಮೆಕ್ಕಾ ಹಾಗೂ ಮದೀನಾಗಳಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ ಎಂದು ತಿಳಿದುಬಂದಿದೆ. ಬಹುತೇಕ ಚುನಾವಣಾ ಪ್ರಕ್ರಿಯೆ ಕರ್ನಾಟದಲ್ಲಿ ಮುಗಿದ ಬಳಿಕ ಅವರು ವಾಪಸ್ ಬರುವ ಸಾಧ್ಯತೆ ಇದೆ. [ಮೋದಿ ಮಾತನ್ನು ಕನ್ನಡದಲ್ಲಿ ಕೇಳಿ]

ದಶಕಗಳ ಸಂಬಂಧ : ಕಾಂಗ್ರೆಸ್ ಪಕ್ಷದೊಂದಿಗೆ ಜಾಫರ್ ಷರೀಫ್ ಅವರದ್ದು ದಶಕಗಳ ಸಂಬಂಧ ಇಂದಿರಾಗಾಂಧಿ ನಿಕಟವರ್ತಿಯಾಗಿದ್ದ ಷರೀಫ್, ಬೆಂಗಳೂರು ಉತ್ತರದಿಂದ 7 ಬಾರಿ ಹಾಗೂ ಕನಕಪುರ ಕ್ಷೇತ್ರದಿಂದ ಒಮ್ಮೆ ಸಂಸದರಾಗಿ ಆಯ್ಕೆಯಾಗಿದ್ದರು. 1991-95ರ ವರೆಗೆ ಕೇಂದ್ರ ರೈಲ್ವೆ ಖಾತೆ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಈ ಬಾರಿಯ ಚುನಾವಣೆಯಲ್ಲಿ ಅವರು ಬೆಂಗಳೂರು ಸೆಂಟ್ರಲ್ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಟಿಕೆಟ್ ಕೈ ತಪ್ಪಿತ್ತು.

English summary
Elections 2014 : Congress veteran CK Jaffer Sharief, who is upset over denial of ticket to him to contest Lok Sabha polls, has quit the party, snapping his six-decade old association with it. He faxed resignation letter to AICC President Sonia Gandhi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more
X