ಬೆಳಗಾವಿಯಿಂದ ಜಗದೀಶ್ ಶೆಟ್ಟರ್ ಸ್ಪರ್ಧೆ ಫಿಕ್ಸ್: ಯಡಿಯೂರಪ್ಪ ಕೊಟ್ಟ ಅಭಯವೇನು?
ಬೆಂಗಳೂರು, ಮಾರ್ಚ್ 16: ಲೋಕಸಮರದ ಕಾವು ದಿನದಿಂದ ದಿನಕ್ಕೆ ಹೆಚ್ಚಾಗಿದೆ. ಆಡಳಿತರೂಢ ಕಾಂಗ್ರೆಸ್ ಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ರುಚಿ ತೋರಿಸಲು ಕಮಲ-ದಳ ನಾಯಕರು ಮೈತ್ರಿಯಾಗಿದ್ದು, ಸದ್ಯ 20 ಕ್ಷೇತ್ರಗಳ ಅಭ್ಯರ್ಥಿಯನ್ನ ಬಿಜೆಪಿ ಹೈಕಮಾಂಡ್ ಘೋಷಿಸಿದೆ. ಉಳಿದ 8 ಕ್ಷೇತ್ರಗಳ ಫೈಕಿ ಬೆಳಗಾವಿ ಅಭ್ಯರ್ಥಿಯನ್ನ ಯಡಿಯೂರಪ್ಪ ಅವರು ಘೋಷಿಸಿದ್ದಾರೆ.
ಹೌದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದ ಹಿನ್ನೆಲೆ ಕಾಂಗ್ರೆಸ್ ಸೇರ್ಪಡೆಯಾಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಇದೀಗ ಮರಳಿ ಬಿಜೆಪಿ ಸೇರ್ಪಡೆಯಾಗಿದ್ದು, ಧಾರವಾರ, ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ಮೇಲೆ ಕಣ್ಣಿಟ್ಟಿದ್ದರು.ಆದರೆ, ಬಿಜೆಪಿ ಹೈಕಮಾಂಡ್ ಮರಳಿ ಕುಂದನಗರ ಬೆಳಗಾವಿಯಲ್ಲಿ ಕಮಲ ಅರಳಿಸಲು ಮುಂದಾಗಿದೆ. ಹೀಗಾಗಿ ಬೆಳಗಾವಿಯ ಹಾಲಿ ಸಂಸದೆಯಾಗಿರುವ ಮಂಗಳ ಅಂಗಡಿ ಅವರ ವಿರುದ್ಧವಾಗಿ ಕ್ಷೇತ್ರದಲ್ಲಿ ಉತ್ತಮ ಅಲೆ ಇಲ್ಲ. ಹೀಗಾಗಿ ಜಗದೀಶ್ ಶೆಟ್ಟರ್ ಅವರನ್ನ ಕಣಕ್ಕಿಳಿಸಲು ಮಾಸ್ಟರ್ ಪ್ಲಾನ್ ಹಾಕಿಕೊಂಡಿದೆ.

ಈಗಾಗಲೇ 28 ಲೋಕಸಭಾ ಕ್ಷೇತ್ರಗಳ ಫೈಕಿ 20 ಕ್ಷೇತ್ರಗಳ ಟಿಕೆಟ್ ಘೋಷಿಸಿರುವ ಬಿಜೆಪಿ ಹೈಕಮಾಂಡ್ ಇನ್ನೂ 8 ಕ್ಷೇತ್ರಗಳ ಟಿಕೆಟ್ ಬಾಕಿ ಉಳಿದಿದೆ. ಈ 8 ಕ್ಷೇತ್ರಗಳಲ್ಲಿ ಜೆಡಿಎಸ್ ಗೆ ಮಂಡ್ಯ, ಹಾಸನ, ಹಾಗೂ ಕೋಲಾರ ಕ್ಷೇತ್ರವ್ನ ಬಿಟ್ಟುಕೊಡಲು ಬಿಜೆಪಿ ವರಿಷ್ಠರು ನಿರ್ಧರಿಸಿದ್ದಾರೆ. ಚಿತ್ರದುರ್ಗ, ಬೆಳಗಾವಿ, ಉತ್ತರ ಕನ್ನಡ, ಚಿಕ್ಕಬಳ್ಳಾಪುರ ರಾಯಚೂರು ಕ್ಷೇತ್ರಗಳಲ್ಲಿ ಯಾರನ್ನ ಅಭ್ಯರ್ಥಿಯನ್ನ ಕಣಕ್ಕಿಳಿಸುವ ಕುರಿತು ಹೆಚ್ಚು ಗೊಂದಲಗಳು ಸೃಷ್ಟಿಯಾಗಿದ್ದು, ಬೆಳಗಾವಿಯಿಂದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನ ಕಣಕ್ಕಿಳಿಸುವುದಾಗಿ ಯಡಿಯೂರಪ್ಪ ಅವರು ಹೇಳಿದ್ದಾರೆ.
ಈ ಕುರಿತು ಮಾಜಿ ಮುಖ್ಯಮಂತ್ರಿಯಾದ ಬಿ ಎಸ್ ಯಡಿಯೂರಪ್ಪ ಅವರು ಮಾತನಾಡಿ, ಜಗದೀಶ್ ಶೆಟ್ಟರ್ ಬೆಳಗಾವಿಯಿಂದ ಸ್ಪರ್ಧೆ ಮಾಡಲು ಇಷ್ಟ ಇರಲಿಲ್ಲ. ನಾನು ಕರೆದು ಮಾತಾಡಿದ್ದೇನೆ. ಕೊನೆಗೆ ಅವರು ಬೆಳಗಾವಿಯಿಂದ ಸ್ಪರ್ಧೆ ಗೆ ಒಪ್ಪಿಕೊಂಡಿದ್ದಾರೆ. ಗೆಲ್ಲುತ್ತಾರೆ ಎಂದು ಹೇಳಿದ್ದಾರೆ. ಈ ಬಗ್ಗೆ ನಾನು ಶಟ್ಟರ್ ಅವರ ಜೊತೆಗೆ ಮಾತನಾಡಿದ್ದೇನೆ, ನೀವು ಸ್ಪರ್ಧೆ ಮಾಡಿದರೇ ಗೆಲ್ಲುವು ನಮ್ಮದೆ ಎಂಬ ಬಗ್ಗೆ ಚರ್ಚೆ ಮಾಡಿದ್ದೇನೆ. ಎಲ್ಲಾರು ಒಟ್ಟಾಗಿ ಕೈ ಜೋಡಿಸೋಣ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಯಡಿಯೂರಪ್ಪ ಅವರು ಅಭಯ ನೀಡಿದ್ದಾರೆ.

ಶೆಟ್ಟರ್ ಅವರನ್ನ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಬಿಜೆಪಿ ಹೈಕಮಾಂಡ್ ಸೂಚನೆ ನೀಡಿದೆ. ಇದರ ಬೆನ್ನಲ್ಲೇ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಅವರು ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದರೆ ಹೇಗೆ ಎನ್ನುವ ಬಗ್ಗೆ ಚರ್ಚೆ ಮಾಡಿದ್ದಾರೆ. ಈ ಬಗ್ಗೆ ಬಿ ಎಸ್ ಯಡಿಯೂರಪ್ಪ ಅವರು ಸಹ ಸ್ಪರ್ಧೆ ಮಾಡಿ ಗೆಲ್ಲುತ್ತೀರಿ ಎಂದು ಹೇಳಿದ್ದು, ಯಡಿಯೂರಪ್ಪ ಅವರು ಕೊಟ್ಟ ಅಭಯದ ಮೇಲೆ ಅಂತಿಮವಾಗಿ ಶೆಟ್ಟರ್ ಬೆಳಗಾವಿಯಿಂದ ಕಣಕ್ಕಿಳಿಯಲು ಸಮ್ಮತಿ ಸೂಚಿಸಿದ್ದಾರೆ.
ಬೆಳಗಾವಿ ಕ್ಷೇತ್ರದಿಂದ ಜಗದೀಶ್ ಶೆಟ್ಟರ್ ಅವರಿಗೆ ಬಿಜೆಪಿ ಟಿಕೆಟ್ ಫಿಕ್ಸ್ ಆಗಿದೆ. ಇತ್ತ ಹಾಲಿ ಬೆಳಗಾವಿ ಸಂಸದೆಯಾಗಿರುವ ಮಂಗಳಾ ಅಂಗಡಿ ಅವರು ಸಹ ಜಗದೀಶ್ ಶೆಟ್ಟರ್ ಅವರಿಗೆ ಹೈಕಮಾಂಡ್ ಟಿಕೆಟ್ ಕೊಡಲು ನಿರ್ಧರಿಸಿದೆ. . ಶೆಟ್ಟರ್ಗೆ ಟಿಕೆಟ್ ಕೊಟ್ಟರೆ ಅವರ ಜತೆ ಪ್ರಚಾರ ಮಾಡುತ್ತೇನೆ ಎಂದು ಮಂಗಳ ಅಂಗಡಿ ಅವರು ಹೇಳಿದ್ದು, ಇಂದು ಅಥವಾ ನಾಳೆ ಬಿಜೆಪಿಯ ಮೂರನೇ ಪಟ್ಟಿ ಪ್ರಕಟವಾಗಲಿದ್ದು, ಬಾಕಿ ಉಳಿದ ಐದು ಕ್ಷೇತ್ರಗಳ ಹೆಸರು ಸಹ ಘೋಷಣೆಯಾಗಲಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications