ಸುರೇಶ್ ಅಂಗಡಿ ಅಕಾಲಿಕ ನಿಧನಕ್ಕೆ ಸಚಿವ ಜಗದೀಶ್ ಶೆಟ್ಟರ್ ತೀವ್ರ ಸಂತಾಪ
ಬೆಂಗಳೂರು ಸೆಪ್ಟೆಂಬರ್ 23: ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ಅಕಾಲಿಕ ನಿಧನಕ್ಕೆ ಅವರ ಆತ್ಮೀಯರಾದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಶ್ರೀ ಜಗದೀಶ್ ಶೆಟ್ಟರ್ ಅವರು ತೀವ್ರ ದುಖಃ ವ್ಯಕ್ತಪಡಿಸಿದ್ದಾರೆ.
ಸತತ ನಾಲ್ಕು ಬಾರಿ ಬೆಳಗಾವಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಸುರೇಶ್ ಅಂಗಡಿಯವರ ಜೊತೆ ನನಗೆ ಆತ್ಮೀಯ ಸ್ನೇಹವಿತ್ತು. ರಾಜಕಾರಣವನ್ನು ಹೊರತುಪಡಿಸಿದ ಅತ್ಮೀಯ ಸಂಬಂಧ ನಮ್ಮದಾಗಿತ್ತು. ಅವರ ಅಕಾಲಿಕ ಅಗಲಿಕೆ ನನಗೆ ವೈಯಕ್ತಿಯಕವಾಗಿ ಬಹಳಷ್ಟು ನೋವನ್ನು ಉಂಟುಮಾಡಿದೆ.
ರಾಜ್ಯದ ಅಭಿವೃದ್ದಿಗೆ ಕೇಂದ್ರ ಸರಕಾರದಿಂದ ಅಗತ್ಯವಿರುವ ಎಲ್ಲಾ ರೀತಿಯ ಕಾರ್ಯಗಳಲ್ಲೂ ಅವರು ಸಹಕಾರ ನೀಡುತ್ತಿದ್ದರು. ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವರಾಗಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದರು. ರಾಜ್ಯಕ್ಕೆ ಅನೇಕ ರೈಲ್ವೇ ಯೋಜನೆಗಳನ್ನು ತರುವಲ್ಲಿ ಹಾಗೂ ಬಾಕಿ ಇರುವ ಯೋಜನೆಗಳ ಅನುಷ್ಠಾನ್ಕಕೆ ವೇಗ ನೀಡಿದ್ದರು. ಸರಳ ಸಜ್ಜನ ಆತ್ಮೀಯ ಸ್ನೇಹಿತರನ್ನು ಕಳೆದುಕೊಂಡಿರುವುದು ಬಹಳ ದುಖಃಕರ ಸಂಗತಿಯಾಗಿದೆ ಎಂದು ಹೇಳಿದ್ದಾರೆ.

ಈ ಅಕಾಲಿಕ ಮರಣದಿಂದ ಅವರ ಕುಟುಂಬಕ್ಕೆ ಹಾಗೂ ಅಪಾರ ಬೆಂಬಲಿಗರಿಗೆ ದುಖಃವನ್ನು ತಡೆದುಕೊಳ್ಳುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.












Click it and Unblock the Notifications