Jagadish Shettar: ಲೋಕಸಭೆ ಚುನಾವಣೆಯ ಸ್ಪರ್ಧೆ ವಿಚಾರವಾಗಿ ಜಗದೀಶ್ ಶೆಟ್ಟರ್ ಹೇಳಿದ್ದೇನು?
ಹುಬ್ಬಳ್ಳಿ, ಮೇ 31: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸೋಲು ಅನುಭವಿಸಿದ್ದು, ಇದೀಗ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ನಡೆಸುವ ವಿಚಾರ ಕಾಂಗ್ರೆಸ್ ಪಾಳಯದಲ್ಲಿ ಚರ್ಚೆಯಾಗುತ್ತಿದೆ.
ಬುಧವಾರ ಹುಬ್ಬಳ್ಳಿಯಲ್ಲಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಭೇಟಿಯ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಜಗದೀಶ್ ಶೆಟ್ಟರ್, ಲೋಕಸಭೆ ಚುನಾವಣೆಯಲ್ಲಿ ನಾನು ಅಭ್ಯರ್ಥಿ ಅನ್ನೋ ಬಗ್ಗೆ ಯಾವುದೂ ಚರ್ಚೆ ಮಾಡಿಲ್ಲ ಮುಂಬರುವ ತಾಲೂಕು ಹಾಗೂ ಜಿಲ್ಲಾ ಪಂಚಾಯತಿ ಚುನಾವಣೆ ತಯಾರಿ ಬಗ್ಗೆ ಚರ್ಚೆ ಮಾಡಿದ್ಧೇವೆ. ಪಕ್ಷ ಸಂಘಟನೆ ಹಾಗೂ ಚುನಾವಣಾ ತಯಾರಿ ಬಗ್ಗೆ ಹಲವು ಚರ್ಚೆ ನಡೆಸಲಾಯಿತು ಎಂದರು.

ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಉತ್ತರ ಕರ್ನಾಟಕ ಭಾಗದ ಸಂಘಟನೆ ಬಗ್ಗೆ ಖುಷಿ ಆಯಿತು ತಮ್ಮ ಸಂಘಟನೆ ಕುರಿತು ಸಂತೋಷ ವ್ಯಕ್ತಪಡಿಸಿದರು. ಡಿ.ಕೆ ಶಿವಕುಮಾರ ಅವರ ಜೊತೆ ಔಪಚಾರಿಕವಾದ ಮಾತುಕತೆಯಾಗಿದ್ದು ಯಾವುದೇ ಮಹತ್ವದ ಚರ್ಚೆ ನಡೆದಿಲ್ಲ ಎಂದ ಅವರು, ಇನ್ನೂ ಮುಂಬರುವ ಚುನಾವಣೆ ಕುರಿತು ಚರ್ಚೆ ಮಾಡಿದ್ದೇವೆ ಎಂದರು.
ಪಕ್ಷವನ್ನ ಇನ್ನೂ ಹೆಚ್ಚಿನ ರೀತಿಯಲ್ಲಿ ಬಲಪಡಿಸುವ ನಿಟ್ಟಿನಲ್ಲಿ ಚರ್ಚೆ ಮಾಡಿದ್ದೇವೆ. ಸೌಹಾರ್ದತೆಯಿಂದ ನಾವು ಚರ್ಚೆ ಮಾಡಿದ್ದೇವೆ ಇನ್ನು ಚುನಾವಣಾ ತಯಾರಿ ಬಗ್ಗೆ ಕೆಲ ಮಾತುಕತೆ ನಡೆಸಿದ್ದೇವೆ ಎಂದರು. ಇದೇ ಸಂದರ್ಭದಲ್ಲಿ ಸಹ ಕೆಲವು ಸಲಹೆ ಸೂಚನೆಗಳನ್ನ ನೀಡಿದ್ದಾರೆ. ಪಕ್ಷ ನನ್ನ ಜೊತೆಗಿದೆ ಅನ್ನೋ ಭರವಸೆಯನ್ನ ನೀಡಿದ್ದರು ಎಂದರು.
ಕಾಂಗ್ರೆಸ್ ಪಕ್ಷ ಜಗದೀಶ್ ಶೆಟ್ಟರ್ ಅವರ ಜೊತೆಗಿದೆ: ಡಿ ಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ಅವರು ನಮ್ಮ ಪಕ್ಷಕ್ಕೆ ಶಕ್ತಿ ತುಂಬಿತ್ತು ಅದನ್ನು ಸ್ಮರಿಸಿ ಅವರನ್ನು ಭೇಟಿ ಮಾಡಲು ಬಂದಿದ್ದೇನೆ. ಪಕ್ಷ ಎಲ್ಲ ನಾಯಕರಿಗೂ ನ್ಯಾಯ ಒದಗಿಸಲಿದ್ದು ಎಲ್ಲರೂ ಧೈರ್ಯವಾಗಿರಬೇಕು. ಪಕ್ಷ ಸಂಘಟನೆ ವಿಚಾರದಲ್ಲಿ ಗಮನಹರಿಸಿ ಕೆಲಸ ಮಾಡಬೇಕು ಎಂದು ನನಗೆ ವರಿಷ್ಠರ ಸಂದೇಶವಿದೆ. ಅವರ ಆದೇಶದ ಮೇರೆಗೆ ಪಕ್ಷದ ಅಧ್ಯಕ್ಷನಾಗಿ ನಾನು ನಮ್ಮ ನಾಯಕರ ಭೇಟಿಗೆ ಬಂದಿದ್ದೇನೆ ಎಂದು ಡಿ ಕೆ ಶಿವಕುಮಾರ್ ಹೇಳಿದರು.

ಈ ಭಾಗದಲ್ಲಿ ಕಾರ್ಯಕರ್ತರು ಉತ್ಸಾಹದಲ್ಲಿದ್ದು ಮುಂದಿನ ದಿನಗಳಲ್ಲಿ ಎಲ್ಲರೂ ಒಟ್ಟಾಗಿ ಕೆಲಸ ಮಾಡಲಿದ್ದಾರೆ. ನಮ್ಮ ಸರ್ಕಾರ ಕೊಟ್ಟ ಮಾತು ಉಳಿಸಿಕೊಳ್ಳಲಿದೆ. ಮುಖ್ಯಮಂತ್ರಿಗಳು ಇಂದು ಮಧ್ಯಾಹ್ನ ಸಭೆ ಮಾಡುತ್ತಿದ್ದು, ನಾಳೆ ಸಚಿವ ಸಂಪುಟ ಸಭೆ ಇದೆ ನಂತರ ಸರ್ಕಾರದ ತೀರ್ಮಾನವನ್ನು ಪ್ರಕಟಿಸಲಾಗುವುದು.
ಶೆಟ್ಟರ್ ಅವರಿಗೆ ಯಾವ ಸ್ಥಾನಮಾನ ನೀಡಲಾಗುವುದು ಎಂಬ ಪ್ರಶ್ನೆಗೆ, "ಕಾಂಗ್ರೆಸ್ ಪಕ್ಷ ಅವರ ಜೊತೆಗಿದೆ. ಅವರಿಗೆ ಯಾವ ಸ್ಥಾನಮಾನ ನೀಡಲಾಗುವುದು ಎಂದು ಈಗಲೇ ವಿವರವಾಗಿ ಹೇಳುವುದಿಲ್ಲ. ನಾವು ಏನೇ ಮಾಡಿದರೂ ನಿಮಗೆ ಮಾಹಿತಿ ನೀಡಿ ಮಾಡುತ್ತೇವೆ.












Click it and Unblock the Notifications