ಶಂಕರ್ ಪಾಟೀಲ್ ಮುನೇನಕೊಪ್ಪ ಕಾಂಗ್ರೆಸ್ ಸೇರ್ಪಡೆ: ಜಗದೀಶ್ ಶೆಟ್ಟರ್ ಹೇಳಿದ್ದೇನು?
ಹುಬ್ಬಳ್ಳಿ, ಜನವರಿ 09: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲು ಕಂಡ ಬಳಿಕ ರಾಜ್ಯ ಬಿಜೆಪಿ ನಾಯಕರ ನಡುವೆ ಸಾಕಷ್ಟು ಅಸಮಾಧಾನ ಹೆಚ್ಚಾಗಿದೆ. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಆಪ್ತ ಹಾಗೂ ಮಾಜಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಅವರು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎನ್ನುವ ಮಾತುಗಳು ಕೇಳಿ ಬಂದಿವೆ.
ಈ ಕುರಿತು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಮಾತನಾಡಿ, ಶಂಕರ್ ಪಾಟೀಲ್ ಮುನೇನಕೊಪ್ಪ ಜೊತೆಗೆ ನಾನು ಮಾತನಾಡಿಲ್ಲ. ನಾನಾಗಿಯೇ ಯಾರನ್ನು ಕರೆಯುತ್ತಿಲ್ಲ. ಸ್ವಯಂ ಪ್ರೇರಣೆಯಿಂದ ಅನೇಕರು ಪಕ್ಷಕ್ಕೆ ಬಂದಿದ್ದಾರೆ. ಸ್ವಪ್ರೇರಣೆಯಿಂದ ಅನೇಕರು ಕಾಂಗ್ರೆಸ್ಗೆ ಬರುತ್ತಾರೆ ಎಂದು ಸುಳಿವು ನೀಡಿದ್ದಾರೆ ಎನ್ನಲಾಗಿದೆ.

ಇನ್ನೂ 2024 ರ ಲೋಕಸಭಾ ಚುನಾವಣೆಯಲ್ಲಿ ನಾನಂತೂ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ನನಗೆ ಟಿಕೆಟ್ ಕೊಡುವ ಬಗ್ಗೆ ಚರ್ಚೆ ಆಗಿಲ್ಲ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಹೇಳಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದಾರೆ. ಹೀಗಾಗಿ ಅವರಿಗೆ ಲೋಕಸಭಾ ಟಿಕೆಟ್ ನೀಡುವ ಬಗ್ಗೆ ಕಾಂಗ್ರೆಸ್ನಲ್ಲಿ ಚರ್ಚೆಗಳು ನಡೆದಿವೆ ಎನ್ನುವ ಸುದ್ದಿ ಹರಿದಾಡುತ್ತಿವೆ. ಇದರ ಮಧ್ಯೆ ಇದೀಗ ಸ್ವತಃ ಜಗದೀಶ ಶೆಟ್ಟರ್ ಇದಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ.
ಲೋಕಸಭೆ ತಯಾರಿ ಕುರಿತು ಕಾಂಗ್ರೆಸ್ ಸಭೆಗೂ ಮುಂಚೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಹಿನ್ನೆಲೆ ಕಾರ್ಯ ಕರ್ತರನ್ನು ಸೇರಿಸಿ ಮಾರ್ಗದರ್ಶನ ಮಾಡುವ ಸಭೆ ಇದು. ಜ. 10ಕ್ಕೆ ಬೆಂಗಳೂರಿನಲ್ಲಿ ಸಭೆ ಕರೆಯಲಾಗಿದೆ. ಪಕ್ಷದ ರಾಜ್ಯಾಧ್ಯಕ್ಷರು, ಸಿಎಂ ಸಭೆ ನಡೆಸಲಿದ್ದಾರೆ.
ಲೋಕಸಭೆ ಚುನಾವಣೆ ಬಗ್ಗೆ ಸಭೆಯಲ್ಲಿ ಚರ್ಚೆ ಆಗಲಿದೆ. ಟಿಕೆಟ್ ಆಕಾಂಕ್ಷಿಗಳು, ಅಭ್ಯರ್ಥಿಗಳ ಬಗ್ಗೆ ಕೂಡ ಸಭೆಯಲ್ಲಿ ಚರ್ಚೆ ಆಗುತ್ತದೆ ಎಂದು ಹೇಳಿದ್ದಾರೆ.ಪಕ್ಷಕ್ಕೆ ಹೊಸಬರ ಸೇರ್ಪಡೆ ವಿಚಾರವಾಗಿ ಮಾತನಾಡಿದ ಅವರು, ಪಕ್ಷಕ್ಕೆ ತತ್ವ ಸಿದ್ಧಾಂತ ಒಪ್ಪಿ ಯಾರೇ ಬಂದರು ತೆಗೆದುಕೊಳ್ಳಲು ಸಿದ್ಧವಿದ್ದೇವೆ ಎಂದಿದ್ದಾರೆ.ನಾನಾಗಿಯೇ ಯಾರನ್ನು ಕರೆಯುತ್ತಿಲ್ಲ ಎಂದು ಜಗದೀಶ್ ಶೆಟ್ಟರ್ ಹೇಳಿದರು.












Click it and Unblock the Notifications