ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಸುಳಿವು ನೀಡಿದ ಜಗದೀಶ್ ಶೆಟ್ಟರ್ : ಯಾವ ಕ್ಷೇತ್ರದಿಂದ ಕಣಕ್ಕೆ?
ಹುಬ್ಬಳ್ಳಿ, ಫೆಬ್ರವರಿ 10: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ಪಕ್ಷವನ್ನ ಬಿಟ್ಟು ಮರಳಿ ಗೂಡಿಗೆ ಬಂದಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಸುಳಿವು ನೀಡಿದ್ದಾರೆ.
ಹೌದು, 2023 ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧೆ ನಡೆಸಿ ಸೋಲು ಕಂಡ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮರಳಿ ತಮ್ಮ ಅಸ್ತಿತ್ವವನ್ನ ಸಾಭೀತು ಪಡಿಸಿಕೊಳ್ಳುವ ನಿಟ್ಟಿನಲ್ಲಿ ಅಚ್ಚರಿ ಕ್ಷೇತ್ರದ ಮೇಲೆ ಕಣ್ಣೀಟ್ಟಿದ್ದಾರೆ. ವರಿಷ್ಠರು ಚುನಾವಣೆಗೆ ಸ್ಪರ್ಧಿಸು ಎಂದರೆ ಧಾರವಾಡ ಲೋಕಸಭಾ ಕ್ಷೇತ್ರವೂ ಸೇರಿ ರಾಜ್ಯದ ಯಾವ ಕ್ಷೇತ್ರದಲ್ಲಾದರು ಸ್ಪರ್ಧಿಸುತ್ತೇನೆ ಎಂದು ಹೇಳುವ ಮೂಲಕ ಜಗದೀಶ್ ಶೆಟ್ಟರ್ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಮಹತ್ವದ ಸುಳಿವನ್ನು ನೀಡಿದ್ದಾರೆ.

ಇನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಜೊತೆಗೆ ಶೆಟ್ಟರ್ ಸಭೆ ವಿಚಾರಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವ ಕುರಿತು ಸಭೆಯಲ್ಲಿ ಚರ್ಚೆಗಳಾಗಿವೆ. ಪಕ್ಷದ ಸಂಘಟನೆ ಕುರಿತಂತೆ ಸಭೆಯಲ್ಲಿ ಚರ್ಚೆಗಳಾಗಿವೆ ಎಂದ ಅವರು ಧಾರವಾಡ ಲೋಕಸಭೆಗೆ ಸ್ಪರ್ಧಿಸಲು ಪಕ್ಷದ ವರಿಷ್ಠರು ಅನುಮತಿ ಕೊಟ್ಟರೇ ಸ್ಪರ್ಧಿಸುತ್ತೇನೆ, ಅಲ್ಲದೇ ಪಕ್ಷದ ನಾಯಕರ ನಿರ್ಧಾರಕ್ಕೆ ನಾನು ಬದ್ಧನಾಗಿದ್ದು, ವರಿಷ್ಠರು ಚರ್ಚೆ ಮಾಡಿರುವ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ಹಾಗೇನಾದರೂ ಸ್ಪರ್ಧೆ ಮಾಡಲು ಸೂಚನೆ ನೀಡಿದರೇ ಸ್ಪರ್ಧೆ ಮಾಡಲು ಸಿದ್ಧ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಲೋಕಸಭಾ ಸದಸ್ಯ ಡಿ.ಕೆ. ಸುರೇಶರನ್ನ ಗುಂಡಿಕ್ಕಿ ಕೊಲ್ಲಬೇಕು ಎಂಬ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿಕೆ ವಿಚಾರ ಸರಿಯಲ್ಲ. ಯಾರೇ ಆಗಲಿ ಲಕ್ಷ್ಮಣ ರೇಖೆಯನ್ನು ದಾಟಬಾರದು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅಸಮಾಧಾನ ವ್ಯಕ್ತಪಡಿಸಿದರು.
ಗೋಡ್ಸೇ ಗಾಂಧಿಯನ್ನ ಹತ್ಯೆ ಮಾಡಿದ್ದಾರೆ ಎಂದು ಹೇಳುತ್ತಲೇ ಎಪ್ಪತ್ತು ವರ್ಷ ಕಾಂಗ್ರೆಸ್ ನವರು ಸರ್ಕಾರ ನಡೆಸಿಕೊಂಡು ಬಂದಿದ್ದಾರೆ. ಬಿಜೆಪಿಯವರು ಗಾಂಧಿ ಹಂತಕರು ಎಂದು ಹೇಳುವುದು ಸರಿಯಲ್ಲ, ಅದನ್ನೇ ಪದೇ ಪದೇ ಹೇಳಿ ಜನರನ್ನ ಮೂರ್ಖರನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.

ಇನ್ನು ಮಂಡ್ಯ ಕ್ಷೇತ್ರದಲ್ಲಿ ಸುಮಲತಾ ಸ್ಪರ್ಧೆ ವಿಚಾರ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ಪಕ್ಷದ ಹೈಕಮಾಂಡ್ ನಾಯಕರು ತೀರ್ಮಾನ ತೆಗೆದುಕೊಳ್ಳುತ್ತಾರೆ ನೋಡೋಣ ಎಂದರು.
ಸರ್ಕಾರದ 40% ಕಮೀಷನ್ ಬಗ್ಗೆ ಸಿಎಂ ಉತ್ತರ ಕೊಡಬೇಕು: ಟೆಂಗಿನಕಾಯಿ
40% ಕಮಿಷನ್ ಬಗ್ಗೆ ಸಿದ್ದರಾಮಯ್ಯನವರು ಉತ್ತರ ಕೊಡಬೇಕು. ಕೆಂಪ್ಪಣ್ಣನವರು ಮಾಡಿರುವ 40% ಆಪಾದನೆಯ ಬಗ್ಗೆ ಸೂಕ್ತ ತನಿಖೆ ನಡೆಸಿ ಕ್ರಮಗಳನ್ನು ಜರುಗಿಸಬೇಕು ಎಂದು ಹುಬ್ಬಳ್ಳಿಯಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ ಹೇಳಿದರು.
ಈ ಹಿಂದೆ ಬೊಮ್ಮಾಯಿಯವರ ಸರ್ಕಾರದ ಮೇಲೆ ಕೆಂಪಣ್ಣ ಆರೋಪ ಮಾಡಿದಾಗ ಸಿದ್ದರಾಮಯ್ಯ ರೋಷಾವೇಷವಾಗಿ ಮಾತನಾಡಿದ್ದರು. ಈಗ ಸಿದ್ದರಾಮಯ್ಯನವರ ಸರ್ಕಾರದ ವಿರುದ್ಧ ಗುತ್ತಿಗೆದಾರ ಸಂಘದ ರಾಜ್ಯಾಧ್ಯಕ್ಷ ಕೆಂಪಣ್ಣ ಆರೋಪ ಮಾಡಿದ್ದಾರೆ ಎಂದರು.
ಬೊಮ್ಮಾಯಿ ಸರ್ಕಾರ ಇದ್ದಾಗ ಕೆಂಪಣ್ಣ ಆಪಾದನೆ ಮಾಡಿದ್ದರು. ಅವಾಗ ಕಾಂಗ್ರೆಸ್ ರಾಜ್ಯದಲ್ಲಿ ಹೋರಾಟ ಮಾಡಿ ಸರ್ಕಾರದ ಮೇಲೆ ಗೂಬೆ ಕುರಿಸಿದ್ದರು. ಇವತ್ತು ಅದೇ ಕೆಂಪಣ್ಣನವರು ಸಿದ್ದರಾಮಯ್ಯನವರ ಸರ್ಕಾರದಲ್ಲಿ 40% ಕಮಿಷನ್ ದಂಧೆ ನಡೆಯುತ್ತಿದೆ ಎಂದು ಹೇಳಿದ್ದಾರೆ. ಹೀಗಾಗಿ ಸಿದ್ದರಾಮಯ್ಯನವರು ಇದಕ್ಕೆ ಉತ್ತರ ಕೊಡಬೇಕು.
ಸಿದ್ದರಾಮಯ್ಯನವರ ಸರ್ಕಾರದ ಮೇಲೆ 40% ಆಪಾದನೆಯನ್ನ ಕೆಂಪಣ್ಣ ಮಾಡಿದ್ದಾರೆ. ಈ ಬಗ್ಗೆ ಸಂಪೂರ್ಣವಾಗಿ ತನಿಖೆ ಮಾಡುವ ನೈತಿಕ ಹೊಣೆಯನ್ನ ಸಿಎಮ್ ಹೊರಬೇಕಾಗುತ್ತದೆ ಎಂದು ಅವರು ಹೇಳಿದರು.
ಇದರಲ್ಲಿ ಅಧಿಕಾರಿಗಳಿರಲಿ ಇಲ್ಲವೇ ಮಂತ್ರಿಮಂಡಲದ ಯಾರೇ ಸಚಿವರು ಇದ್ದರು ಅವರ ಮೇಲೆ ಶಿಸ್ತು ಕ್ರಮ ಜರುಗಿಸಬೇಕೆಂದು ಟೆಂಗಿನಕಾಯಿ ಆಗ್ರಹಿಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications