Get Updates
Get notified of breaking news, exclusive insights, and must-see stories!

Lok Sabha Election 2024: ಮಂಗಳ ಅಂಗಡಿಗೆ ಕೈ ತಪ್ಪಿದ ಟಿಕೆಟ್ : ಮಾಜಿ ಸಿಎಂ ಗೆ ಮಣೆ ಹಾಕಿದ ಬಿಜೆಪಿ ಹೈಕಮಾಂಡ್?

ಬೆಳಗಾವಿ, ಮಾರ್ಚ್‌ 01: ಬೆಳಗಾವಿ ಲೋಕಸಭಾ ಕ್ಷೇತ್ರ ರಾಜಕೀಯ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿದೆ. ಇತ್ತ ಕಾಂಗ್ರೆಸ್‌ ಗೆ ಅಭ್ಯರ್ಥಿ ಆಯ್ಕೆ ಕಸರತ್ತಿಗೆ ಮುಂದಾಗಿದ್ದು, ಕಂದನಗರಿ ಬೆಳಗಾವಿಯನ್ನ ವಶಪಡಿಸಿಕೊಳ್ಳಲು ಬಿಜೆಪಿ ಭರ್ಜರಿ ಸಿದ್ದತೆ ನಡೆಸಿದ್ದು, ಹಾಲಿ ಸಂಸದೆಯಾದ ಮಂಗಳ ಅಂಗಡಿ ಅವರಿಗೆ ಈ ಬಾರೀ ಟಿಕೆಟ್‌ ಕೈ ತಪ್ಪಲಿದೆ.

ಬೆಳಗಾವಿ ಲೋಕಸಭಾ ಕ್ಷೇತ್ರ ಹಾಲಿ ಸಂಸದೆಯಾಗಿರುವ ಮಂಗಳಾ ಅಂಗಡಿ ಅವರಿಗೆ ಈ ಬಾರೀ ಗೆಲ್ಲುವುಸು ಅನುಮಾನ ಎನ್ನುವ ಮಾತುಗಳು ಕೇಳಿ ಬಂದಿದ್ದು, ಕಾಂಗ್ರೆಸ್‌ ಸೂಕ್ತ ಅಭ್ಯರ್ಥಿಯ ಹುಡುಕಾಟದಲ್ಲಿದೆ. ಮಂಗಳ ಅಂಗಡಿ ಅವರಿಗೆ ಟಿಕೆಟ್‌ ನೀಡಿದರೇ ಕಾಂಗ್ರೆಸ್‌ ನಿಂದ ಸಚಿವ ಸತೀಶ್‌ ಜಾರಕಿಹೊಳಿ ಅವರಿನ್ನ ಕಣಕ್ಕಿಳಿಸಲು ಕಾಂಗ್ರೆಸ್‌ ನಾಯಕರು ಚಿಂತನೆ ನಡೆಸಿದರು. ಇತ್ತ ಸತೀಶ್‌ ಜಾರಕಿಹೊಳಿ ಕಾಂಗ್ರೆಸ್‌ ನಿಂದ ಕಣಕ್ಕಿಳಿದರೇ ಗೆಲುವವು ಕಾಂಗ್ರೆಸ್‌ ಗೆ ಎನ್ನುವ ಚರ್ಚೆ ನಡೆದಿದ್ದು, ಅಂತಿಮವಾಗಿ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರನ್ನ ಕಣಕ್ಕಿಳಸಿಲು ಬಿಜೆಪಿ ಹೈಕಮಾಂಡ್‌ ಮುಂದಾಗಿದೆ.

Jagadish Shettar to Get Belagavi Lok Sabha Ticket From BJP instead of Mangala Suresh Angadi

ಕಾಂಗ್ರೆಸ್‌ ತೊರೆದು ಬಿಜೆಪಿ ಸೇರ್ಪಡೆಯಾದ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಇದೀಗ ಫುಲ್‌ ಆಕ್ಟಿವ್‌ ಆಗಿದ್ದಾರೆ. ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಬೆಳಗಾವಿ ಲೋಕಸಭೆಗೆ ಬಿಜೆಪಿಯ ಒಮ್ಮತದ ಅಭ್ಯರ್ಥಿಯಾಗಿ ಜಗದೀಶ್‌ ಶೆಟ್ಟರ್‌ ಅವರು ಹೊರಹೊಮ್ಮಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿವೆ. ಲಿಂಗಾಯತ ಸಮುದಾಯದ ಹಿರಿಯ ನಾಯಕರಾಗಿರುವ ಜಗದೀಶ್‌ ಶೆಟ್ಟರ್‌ ಅವರನ್ನ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸುವ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ನಾಯಕರು ಹೈಕಮಾಂಡ್‌ ನಾಯಕರ ಮುಂದೆ ಬೇಡಿಕೆ ಇಟ್ಟಿದ್ರು. ಇದೀಗ ಬಿಜೆಪಿ ಹೈಕಮಾಂಡ್‌ ಮಾಜಿ ಸಿಎಂ ಶೆಟ್ಟರ್‌ ಗೆ ಮಣೆ ಹಾಕಿದೆ ಎನ್ನಲಾಗಿದೆ.

ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಟಿಕೆಟ್‌ ಕೈ ತಪ್ಪಿದ ಹಿನ್ನಲೆ 2023 ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ನಿಂದ ಸ್ಪರ್ಧೆ ನಡೆಸಿ ಸೋಲು ಕಂಡ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಮರಳಿ ತಮ್ಮ ಅಸ್ತಿತ್ವವನ್ನ ಸಾಭೀತು ಪಡಿಸಿಕೊಳ್ಳುವ ನಿಟ್ಟಿನಲ್ಲಿ ಅಚ್ಚರಿ ಕ್ಷೇತ್ರದ ಮೇಲೆ ಕಣ್ಣೀಟ್ಟಿದ್ದಾರೆ. ವರಿಷ್ಠರು ಚುನಾವಣೆಗೆ ಸ್ಪರ್ಧಿಸು ಎಂದರೆ ಧಾರವಾಡ ಲೋಕಸಭಾ ಕ್ಷೇತ್ರವೂ ಸೇರಿ ರಾಜ್ಯದ ಯಾವ ಕ್ಷೇತ್ರದಲ್ಲಾದರು ಸ್ಪರ್ಧಿಸುತ್ತೇನೆ ಎಂದು ಹೇಳುವ ಮೂಲಕ ಜಗದೀಶ್‌ ಶೆಟ್ಟರ್‌ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಮಹತ್ವದ ಸುಳಿವನ್ನು ನೀಡಿದ್ದರು. ಇದೀಗ ಬಿಜೆಪಿ ಹೈಕಮಾಂಡ್‌ ಮಣೆ ಹಾಕಿದ್ದು, ಹಲವು ಸಭೆಗಳನ್ನ ಜಗದೀಶ್‌ ಶೆಟ್ಟರ್‌ ನಡೆಸಿದ್ದಾರೆ ಎನ್ನಲಾಗಿದೆ.

ಇನ್ನು ಕೆಲ ದಿನಗಳ ಹಿಂದೆಯಷ್ಟೇ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಜೊತೆಗೆ ಜಗದೀಶ್‌ ಶೆಟ್ಟರ್‌ ಸಭೆ ನಡೆಸಿದ್ದು, ಮುಂದಿನ ಚುನಾವಣೆ ತಯಾರಿ ಕುರಿತು ಹಾಗೂ ಸ್ಥಳೀಯ ನಾಯಕರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಧಾರವಾಡ ಲೋಕಸಭೆಗೆ ಸ್ಪರ್ಧಿಸಲು ಪಕ್ಷದ ವರಿಷ್ಠರು ಅನುಮತಿ ಕೊಟ್ಟರೇ ಸ್ಪರ್ಧಿಸುತ್ತೇನೆ, ಅಲ್ಲದೇ ಪಕ್ಷದ ನಾಯಕರ ನಿರ್ಧಾರಕ್ಕೆ ನಾನು ಬದ್ಧನಾಗಿದ್ದು, ವರಿಷ್ಠರು ಚರ್ಚೆ ಮಾಡಿರುವ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ಹಾಗೇನಾದರೂ ಸ್ಪರ್ಧೆ ಮಾಡಲು ಸೂಚನೆ ನೀಡಿದರೇ ಸ್ಪರ್ಧೆ ಮಾಡಲು ಸಿದ್ಧ ಎಂದು ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+