Jagdish Shettar Resigns: ಟಿಕೆಟ್ ಗಾಗಿ ಬಂಡಾಯ; ಸಂಧಾನ ವಿಫಲ! ಬಿಜೆಪಿಗೆ ರಾಜೀನಾಮೆ ನೀಡಿದ ಜಗದೀಶ್ ಶೆಟ್ಟರ್
ಬೆಂಗಳೂರು,ಏಪ್ರಿಲ್17: ವಿಧಾನಸಭಾ ಚುನಾವಣೆಗೆ ಸಜ್ಜಾಗಿರುವ ರಾಜ್ಯ ಬಿಜೆಪಿಗೆ ಬಂಡಾಯದ ಬಿಸಿ ತಟ್ಟಿದೆ. ಟಿಕೆಟ್ ಗಾಗಿ ಬಿಜೆಪಿ ಪಾಳಯದಲ್ಲಿ ಬಂಡಾಯದ ಬೆಂಕಿ ಜೋರಾಗಿದ್ದು, ಸಾಲು ಸಾಲು ನಾಯಕರು ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಬಿಜೆಪಿಗೆ ಗುಡ್ ಬೈ ಹೇಳಿದ್ದು, ಇದೀಗ ಜಗದೀಶ್ ಶೆಟ್ಟರ್ ಅವರು ಸಹ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.
ಟಿಕೆಟ್ ಗಾಗಿ ಪಟ್ಟು ಹಿಡಿದಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವನ್ನ ಪಕ್ಷದಲ್ಲೇ ಉಳಿಸಿಕೊಳ್ಳಲು ಬಿಜೆಪಿ ನಾಯಕರು ನಡೆಸಿದ ಸಂಧಾನ ಸಭೆ ವಿಫಲಾದ ಕಾರಣ ಬಿಜೆಪಿ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಪಕ್ಷ ತೊರೆದಿದ್ದರು. ಇದೀಗ ಕಾಂಗ್ರೆಸ್ ನಾಯಕರು ನಡೆಸಿದ ಮಾತುಕತೆ ಸಕ್ಸಸ್ ಆಗಿರುವ ಬೆನ್ನಲ್ಲೇ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನ ಲಿಂಗಾಯತ ನಾಯಕರ ಜೊತೆಗೆ ಜಗದೀಶ್ ಶೆಟ್ಟರ್ ಚರ್ಚೆ ನಡೆಸಿದ ಬಳಿಕ ಆಪ್ತ ಸಹಾಯಕರ ಮೂಲಕ ಬಿಜೆಪಿಯ ಪ್ರಾಥಮಿಕ ಸದಸ್ಯ ಸ್ಥಾನಕ್ಕೆ ಜಗದೀಶ್ ಶೆಟ್ಟರ್ ರಾಜೀನಾಮೆ ಪತ್ರವನ್ನ ಸಲ್ಲಿಸಿದ್ದಾರೆ.
ಭಾನುವಾರ ರಾತ್ರಿ ಬಿಜೆಪಿಗೆ ರಾಜಿನಾಮೆ ಘೋಷಿಸಿದ್ದ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಅಧಿಕೃತವಾಗಿ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಶಿರಸಿಗೆ ಆಪ್ತ ಸಹಾಯಕರ ಮೂಲಕ ಸ್ವೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ರಾಜೀನಾಮೆ ಪತ್ರವನ್ನ ಸಲ್ಲಿಸಿದ್ದಾರೆ.
ಇನ್ನೂ ರಾಜೀನಾಮೆ ಸಲ್ಲಿಕೆಗೂ ಮುನ್ನ ಅಮಿತ್ ಶಾ ಅವರು ದೂರವಾಣಿ ಕರೆ ಮಾಡಿ, ಖುದ್ದು ಮನವೊಲಿಕೆಗೆ ಯತ್ನಿಸಲಾಯಿತು. ದೂರವಾಣಿ ಮೂಲಕ ಮಾತನಾಡಿದ ಬಳಿಕವೂ, ಒಪ್ಪದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ರಾಜಿನಾಮೆ ಪತ್ರ ಸಲ್ಲಿಸಿದ್ದಾರೆ.
ಇನ್ನೂ ಜಗದೀಶ್ ಶೆಟ್ಟರ್ ಅವರ ರಾಜೀನಾಮೆ ಕುರಿತು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮಾತನಾಡಿ, ಜಗದೀಶ್ ಶೆಟ್ಟರ್ ಅವರನ್ನು ಕೇಂದ್ರದ ಸಚಿವರನ್ನಾಗಿ ಮಾಡುತ್ತೇವೆ ಎಂದು ಕೇಂದ್ರ ಹೇಳಿದ್ರೂ ಹಠಮಾಡಿ ಕಾಂಗ್ರೆಸ್ ಸೇರಲು ಹೊರಟಿರೋದು ಅಕ್ಷಮ್ಯ ಅಪರಾಧ. ನಾಡಿನ ಜನ ಕ್ಷಮಿಸುವುದಿಲ್ಲ ಎಂದು ಕಿಡಿಕಾರಿದರು. ಪಕ್ಷ ತೊರೆಯುತ್ತಿರೋದು ಯಾಕೆ, ನಾವು ಏನು ಕಡಿಮೆ ಮಾಡಿದ್ದೇವೆ? ಎಂದು ಶೆಟ್ಟರ್ ಅವರನ್ನ ಪ್ರಶ್ನಿಸಿದ್ದಾರೆ. ಶೆಟ್ಟರ್ ಅವರನ್ನು ಮಂತ್ರಿ, ವಿರೋಧ ಪಕ್ಷದ ನಾಯಕ,ಮುಖ್ಯಮಂತ್ರಿಯನ್ನಾಗಿಯೂ ಮಾಡಲಾಯಿತು, ಪಕ್ಷ ಎಲ್ಲ ಗೌರವ ಕೊಟ್ಟಿದೆ ಎಂದು ಶೆಟ್ಟರ್ ವಿರುದ್ದ ಅಸಮಾಧಾನ ಹೊರಹಾಕಿದರು.












Click it and Unblock the Notifications