Jal Jeevan Mission: ಜಲ ಜೀವನ ಮಿಷನ್ 2.0: ಕೇಂದ್ರ ಸರ್ಕಾರದೊಂದಿಗೆ ಸಿದ್ದರಾಮಯ್ಯ ಮಹತ್ವದ ಸಭೆ, ಅನುದಾನ ವಿಳಂಬ ಆರೋಪ

Jal Jeevan Mission: ಜಲ ಜೀವನ ಮಿಷನ್‌ 2.0ಗೆ ಸಂಬಂಧಿಸಿದಂತೆ ಕೇಂದ್ರ ಜಲ ಶಕ್ತಿ ಸಚಿವರಾದ ಸಿ.ಆರ್‌.ಪಾಟೀಲ್‌ ಅವರೊಂದಿಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಡಿಯೋ ಸಂವಾದ ನಡೆಸಿದ್ದಾರೆ. ಈ ವಿಡಿಯೋ ಸಂವಾದಲ್ಲಿ ಕರ್ನಾಟಕದಲ್ಲಿನ ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಹಲವು ಪ್ರಮುಖ ಚರ್ಚೆಗಳು ನಡೆದಿವೆ.

ದೇಶದಲ್ಲಿಯೇ ಎರಡನೇ ಅತ್ಯಂತ ಹೆಚ್ಚಿನ ಒಣಭೂಮಿ ಹೊಂದಿರುವ ರಾಜ್ಯವಾದ ಕರ್ನಾಟಕದಲ್ಲಿ ನೀರಿನ ಸಮಸ್ಯೆ ಇರುವುದಲ್ಲದೇ, ರಾಜ್ಯದ ಹಲವು ಭಾಗಗಳಲ್ಲಿ ಆರ್ಸೆನಿಕ್ ಹಾಗೂ ಫ್ಲೋರೈಡ್ ಮಿಶ್ರಣದ ಸಮಸ್ಯೆಯಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಂದು ಗ್ರಾಮೀಣ ಕುಟುಂಬಗಳಿಗೆ ಕುಡಿಯಲು ಯೋಗ್ಯವಾದ ನೀರನ್ನು ಒದಗಿಸಲು ಜಲಮೂಲಗಳ ಸುಧಾರಣೆ ಮತ್ತು ಬೃಹತ್ ನೀರಿನ ಸರಬರಾಜು ವ್ಯವಸ್ಥೆಗೆ ಆದ್ಯತೆ ನೀಡಿದ್ದೇವೆ. ಕುಡಿಯುವ ನೀರಿನ ಕಾಮಗಾರಿಗಳಲ್ಲಿ ಕರ್ನಾಟಕ ಯಾವುದೇ ರಾಜಿ ಮಾಡಿಕೊಳ್ಳದೆ ಗುಣಮಟ್ಟವನ್ನು ಕಾಯ್ದುಕೊಂಡಿದೆ. ಈ ಯೋಜನೆಯಡಿ ಪ್ರತಿಯೊಂದು ಕಾಮಗಾರಿಗಳನ್ನು ಮೂರನೇ ಏಜೆನ್ಸಿ ಮೂಲಕ ಪರಿಶೀಲನೆ ನಡೆಸಲಾಗುತ್ತಿದ್ದು, ಪಾರದರ್ಶಕತೆಗೆ ಒತ್ತು ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

Jal Jeevan Mission

ಮುಂದುವರಿದು ನಾವು ಇದುವರೆಗೆ 101.31 ಲಕ್ಷ ಗ್ರಾಮೀಣ ಕುಟುಂಬಗಳ ಪೈಕಿ 88.06 ಮನೆಗಳಿಗೆ ನಳಸಂಪರ್ಕ ಕಲ್ಪಿಸಿದ್ದು, ಶೇ.86.93 ರಷ್ಟು ಪ್ರಗತಿ ಸಾಧಿಸಿದ್ದೇವೆ. ಈಗಾಗಲೇ ಕೈಗೊಳ್ಳಲಾಗಿರುವ 66,344 ಕಾಮಗಾರಿಗಳ ಪೈಕಿ ಸುಮಾರು 48,789 ಕಾಮಗಾರಿಗಳು ಭೌತಿಕವಾಗಿ ಪೂರ್ಣಗೊಂಡಿವೆ. ಇದರಲ್ಲಿ ಗ್ರಾಮಗಳಲ್ಲಿ 28,809 ಕಾಮಗಾರಿಗಳು ಹಾಗೂ 19,980 ಕಾಮಗಾರಿಗಳು ಶಾಲೆ, ಅಂಗನವಾಡಿಗಳಲ್ಲಿ ಕೈಗೊಳ್ಳಲಾಗಿದ್ದು, ಗ್ರಾಮೀಣ ಮಟ್ಟದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಿದ್ದೇವೆ ಎಂದಿದ್ದಾರೆ.

ಆದರೆ ಕಳೆದ ಎರಡು ವರ್ಷಗಳ ಅವಧಿಯಲ್ಲಿ ಕೇಂದ್ರ ಸರ್ಕಾರದ ಅಸಹಕಾರದ ನಡುವೆಯೂ, ಕರ್ನಾಟಕ ರೂ.17,554.63 ಕೋಟಿ ಬಂಡವಾಳ ಹೂಡಿದೆ. ಇದರಲ್ಲಿ ಕೇಂದ್ರದ ಪಾಲಿನ ನಿರೀಕ್ಷೆಯಲ್ಲಿ ಹೂಡಲಾಗಿರುವ ರೂ.8,880.71 ಕೋಟಿಯೂ ಸೇರಿದ್ದು, ಇದು ಯೋಜನೆಗಳನ್ನು ಪೂರ್ಣಗೊಳಿಸುವ ನಿಟ್ಟಿನಲ್ಲಿ ನಮ್ಮ ಬದ್ಧತೆಯನ್ನು ತೋರಿಸುತ್ತದೆ. ಯೋಜನೆ ಅನುಷ್ಠಾನದಲ್ಲಿ ರಾಜ್ಯ ಯಾವುದೇ ರೀತಿಯಲ್ಲಿ ರಾಜಿಯಾಗದೆ, ರಾಷ್ಟ್ರದ ಅಭಿವೃದ್ಧಿಗೆ ಕೊಡುಗೆ ನೀಡುತ್ತಿದ್ದರೂ, ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡಲು ವಿಳಂಬ ಮಾಡುತ್ತಿರುವುದು ದುರದೃಷ್ಟಕರ ಎಂದಿದ್ದಾರೆ.

ಕೇಂದ್ರ ಸರ್ಕಾರ ಆಯವ್ಯಯದಲ್ಲಿ ಅನುದಾನ ಹಂಚಿಕೆ ಮಾಡಿದ್ದರೂ, ಕಳೆದ ಎರಡು ವರ್ಷಗಳಿಂದ ಕರ್ನಾಟಕಕ್ಕೆ ಹಣ ಬಿಡುಗಡೆಯಾಗಿಲ್ಲ. ಆದರೂ ರಾಜ್ಯ ಸರ್ಕಾರವೇ ಕೇಂದ್ರದ ಪಾಲಿನ ಹಣವನ್ನು ಭರಿಸಿ, ಯೋಜನೆ ಅನುಷ್ಠಾನ ಮುಂದುವರೆಯುವಂತೆ ನೋಡಿಕೊಂಡಿದೆ. ಇದೇ ವೇಳೆ ನಾವು ಸದೃಢವಾದ ಸಾಂಸ್ಥಿಕ ಹಾಗೂ ನಿರ್ವಹಣಾ ವ್ಯವಸ್ಥೆಯನ್ನು ರೂಪಿಸಲು ಒತ್ತು ನೀಡಿದ್ದೇವೆ. ಆಪರೇಷನ್ & ಮೈಂಟೆನೆನ್ಸ್‌ ನೀತಿಯನ್ನು ಅನುಷ್ಠಾನಗೊಳಿಸಿದ ಹಾಗೂ ಚಾಲನೆ ನೀಡಿದ ಮೊದಲ ರಾಜ್ಯಗಳ ಪೈಕಿ ಕರ್ನಾಟಕವೂ ಒಂದಾಗಿದೆ. ಗ್ರಾಮೀಣ ಜಲ ನೈರ್ಮಲ್ಯ ಸಮಿತಿಗಳು ಸಕ್ರಿಯವಾಗಿದ್ದು, ಸಮಿತಿಗಳಲ್ಲಿ ಲಿಂಗ ಸಮಾತೋಲವನ್ನು ಕಾಯ್ದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಕಾರ್ಯಾಚರಣೆಗೆಂದೇ ಮೀಸಲಾದ ಪಿಎಂಯು ಅನ್ನು ಸ್ಥಾಪಿಸಲಾಗಿದ್ದು, ಜೀವ ಜಲ ಅಪ್ಲಿಕೇಶನ್, ಜಿ.ಐ.ಎಸ್ ಆಧಾರಿತ ಭೂ ನಿರ್ವಹಣೆ, ಸಮಯೋಚಿತ ನಿರ್ವಹಣಾ ವ್ಯವಸ್ಥೆ ಮುಂತಾದ ಡಿಜಿಟಲ್ ನಾವೀನ್ಯತೆಗಳ ಮೂಲಕ ಆಡಳಿತ ವ್ಯವಸ್ಥೆಯನ್ನು ಸುಧಾರಣೆ ಮಾಡಲಾಗಿದೆ. 1.51 ಲಕ್ಷಕ್ಕೂ ಹೆಚ್ಚು ಮಹಿಳೆಯರಿಗೆ ನೀರಿನ ಗುಣಮಟ್ಟ ಪರೀಕ್ಷೆ ಮಾಡುವ ಬಗ್ಗೆ ತರಬೇತಿ ನೀಡುವ ಮೂಲಕ ಸ್ಥಳೀಯ ನಾಯಕತ್ವಕ್ಕೆ ಮಹತ್ವ ನೀಡಿದೆ.

ಗುಣಮಟ್ಟ ಖಾತ್ರಿಪಡಿಸಲು ಕರ್ನಾಟಕವು ಬ್ಯೂರೋ ವೆರಿಟಾಸ್ ಸಂಸ್ಥೆಯನ್ನು ಸ್ವತಂತ್ರ ಪರಿಶೀಲನೆ, ಮಾದರಿ ಆಧಾರಿತ ತಪಾಸಣೆ, ದಾಖಲೆಗಳ ಪರಿಶೀಲನೆ, ತಾಂತ್ರಿಕ ಪರೀಕ್ಷೆಗಳಿಗಾಗಿ ನೇಮಿಸಿದ್ದು, ತನ್ಮೂಲಕ ಕಾಮಗಾರಿಗಳ ಸುಸ್ಥಿರ ಕಾರ್ಯಶೀಲತೆಯನ್ನು ದೃಢಪಡಿಸಲಾಗುತ್ತಿದೆ. ನೀರಿನ ಉತ್ಕೃಷ್ಟತಾ ಕೇಂದ್ರವನ್ನು ಸ್ಥಾಪಿಸಲಾಗುತ್ತಿದ್ದು, ಇದು ಜ್ಞಾನ ಮತ್ತು ನಿರ್ದೇಶನ ಕೇಂದ್ರ(knowledge and command hub) ವಾಗಿ ಕಾರ್ಯನಿರ್ವಹಿಸಲಿದೆ. 259 ಗ್ರಾಮಗಳಿಗೆ ಈಗಾಗಲೇ 24/7 ನೀರಿನ ಸರಬರಾಜು ಸಾಧಿಸಲಾಗಿದ್ದು, ಈ ಮಿಷನ್‌ಗಿರುವ ಪರಿವರ್ತನಾ ಸಾಮರ್ಥ್ಯವನ್ನು ಇದು ಸಾಬೀತುಪಡಿಸಿದೆ.

ಎಲ್ಲಾ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ಕರ್ನಾಟಕ ಸಂಪೂರ್ಣವಾಗಿ ಬದ್ಧವಾಗಿದೆ. ಮುಂಗಡ ವೆಚ್ಚದ ಮರುಪಾವತಿಗಳು ಸೇರಿದಂತೆ ಬಾಕಿಯಿರುವ ಎಲ್ಲಾ ಅನುದಾನವನ್ನು ಶೀಘ್ರವೇ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರವನ್ನು ನಾವು ಒತ್ತಾಯಿಸುತ್ತೇವೆ. ಎಲ್ಲ ಗ್ರಾಮೀಣ ನಿವಾಸಿಗಳಿಗೆ ಸುರಕ್ಷಿತ ಮತ್ತು ಸುಸ್ಥಿರ ಕುಡಿಯುವ ನೀರನ್ನು ಒದಗಿಸುವ ನಿಟ್ಟಿನಲ್ಲಿ ಕೇಂದ್ರದ ಜೊತೆ ಕೆಲಸ ಮಾಡುವುದನ್ನು ಹೀಗೆಯೇ ಮುಂದುವರಿಸುತ್ತೇವೆ ಎಂಬ ಭರವಸೆಯನ್ನು ನೀಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+