ಪ್ರಧಾನಿ ಮೋದಿ ಮಹಾತ್ವಾಕಾಂಕ್ಷಿ ಯೋಜನೆ; ಜಲ ಜೀವನ್ ಮಿಷನ್ ಅನುಷ್ಠಾನದಲ್ಲಿ ಹಿಂದೆ ಬಿದ್ದ ರಾಜ್ಯ?
ಬೆಂಗಳೂರು, ಆ. 24: ರಾಜ್ಯದಲ್ಲಿ 2023ರೊಳಗೆ ರಾಜ್ಯದ ಎಲ್ಲ ಮನೆಗಳಿಗೂ ನಲ್ಲಿ ನೀರು ಸರಬರಾಜು ಮಾಡುವ ಮಹತ್ವದ ಜನ ಜೀವನ್ ಮಿಶನ್ ಯೋಜನೆ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ಸೂಚನೆ ಕೊಟ್ಟಿದ್ದಾರೆ. ಕಳೆದ ಎರಡು ತಿಂಗಳುಗಳ ಹಿಂದೆ ರಾಜ್ಯಕ್ಕೆ ಆಗಮಿಸಿದ್ದ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಯೋಜನೆಯ ಅನುಷ್ಠಾನಕ್ಕೆ ಹೆಚ್ಚಿನ ಅನುದಾನ ಕೊಡುವ ಭರವಸೆ ನೀಡಿದ್ದರು.
ಸದ್ಯ ರಾಜ್ಯದಲ್ಲಿ ಶೇಕಡಾ 32ರಷ್ಟು ಮನೆಗಳಿಗೆ ಮಾತ್ರ ನಲ್ಲಿ ಮೂಲಕ ನೀರು ಸರಬರಾಗುತ್ತಿದೆ. ಅದನ್ನು ಶೇಕಡಾ ನೂರರಷ್ಟು ಮಾಡಲು ಕೇಂದ್ರ ಸರ್ಕಾರ ಮಹತ್ವದ ಯೋಜನೆ ಹಾಕಿಕೊಂಡಿದೆ. ಆದರೆ ಇಡೀ ರಾಜ್ಯಾದ್ಯಂತ ಕಳಪೆ ಕಾಮಗಾರಿ ನಡೆದಿರುವ ವರದಿಯಾಗಿದೆ. ಹೀಗಾಗಿ ಸ್ವತಃ ನರೇಂದ್ರ ಮೋದಿ ಅವರು ಕನಸಿನ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿ ಮಾಡುವ ನಿಟ್ಟಿನಲ್ಲಿ ಸಿಎಂ ಬೊಮ್ಮಾಯಿ ಮಹತ್ವದ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ನಿಗದಿನ ಕಾಲದಲ್ಲಿ
ಜಲ ಜೀವನ್ ಮಿಷನ್ ಯೋಜನೆಯನ್ನು ಅನುಷ್ಠಾನಗೊಳಿಸಲು ಯೋಜನೆಯಡಿ ಕೈಗೆತ್ತಿಕೊಂಡಿರುವ ಬಹುಗ್ರಾಮ ಕುಡಿಯುವ ನೀರು ಯೋಜನೆಗಳ ಮೇಲ್ವಿಚಾರಣೆಗೆ ಸಮಿತಿ ರಚನೆ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ನಿರೀಕ್ಷಿತ ಮಟ್ಟದಲ್ಲಿ ಪ್ರಧಾನಿ ಮೋದಿ ಅವರ ಮಹತ್ವಾಕಾಂಕ್ಷಿ ಯೋಜನೆ ರಾಜ್ಯದಲ್ಲಿ ನಿರೀಕ್ಷಿತವ ಮಟ್ದದಲ್ಲಿ ಆಗುತ್ತಿಲ್ಲ. ಹೀಗಾಗಿ ಕಳೆದ ತಿಂಗಳು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಶೇಖಾವತ್ ಅವರೇ ಖುದ್ದಾಗಿ ರಾಜ್ಯಕ್ಕೆ ಬಂದು ಯೋಜನೆ ಗುಣಮಟ್ಟ ಹಾಗೂ ಪ್ರಗತಿ ಪರಿಶೀಲನೆ ಮಾಡಿದ್ದರು.

ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸೂಚನೆ!
ಕೇಂದ್ರ ಸರ್ಕಾರದ ಮಹತ್ವದ ಯೋಜನೆ ಅನುಷ್ಠಾನದಲ್ಲಿ ರಾಜ್ಯ ಹಿಂದೆ ಬಿದ್ದಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿ ಮಹತ್ವದ ಸಭೆ ನಡೆಸಿದ್ದಾರೆ. ಸಭೆಯಲ್ಲಿ, "ಜಲಜೀವನ್ ಮಿಷನ್ ಭಾರತ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಇದನ್ನು ಪರಿಣಾಮಕಾರಿಯಾಗಿ ಹಾಗೂ ತ್ವರಿತವಾಗಿ ಅನುಷ್ಠಾನಗೊಳಿಸಬೇಕು" ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
"ಪ್ರತಿ 15 ದಿನಗಳಿಗೊಮ್ಮೆ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಬೇಕು. ಗ್ರಾಮೀಣಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳು ಕಾಲ ಕಾಲಕ್ಕೆ ಸ್ಥಳ ಪರಿಶೀಲನೆ ನಡೆಸಬೇಕು" ಎಂದು ಸಿಎಂ ಹೇಳಿದ್ದಾರೆ. ಜೊತೆಗೆ ಪ್ರತಿ ತಿಂಗಳು ತಾವು ಖುದ್ದು ಪ್ರಗತಿ ಪರಿಶೀಲನೆ ಮಾಡುವುದಾಗಿ ಸಭೆಯಲ್ಲಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಅಕ್ಟೋಬರ್ ಒಳಗೆ ಡಿಪಿಆರ್ ಆಗಬೇಕು!
ಯಾವ ಗ್ರಾಮಗಳಿಗೆ ಮೇಲ್ಮೈ ಜಲ ಮೂಲ ಇಲ್ಲವೊ ಆ ಗ್ರಾಮಗಳಿಗೆ ನೀರು ಒದಗಿಸಲು ಕ್ರಮಕೈಗೊಳ್ಳಲಾಗುವುದು ಎಂದು ಸಿಎಂ ಭರವಸೆ ನೀಡಿದ್ದಾರೆ. 2022-23ರ ಸಾಲಿಗೆ ಯೋಜನೆ ರೂಪಿಸಿ, ಅನುಮೋದನೆ ನೀಡುವ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಪ್ರಸಕ್ತ ಸಾಲಿನ ಎಲ್ಲ ವಿಸ್ತ್ರತ ಯೋಜನಾ ವರದಿ (ಡಿಪಿಆರ್) ಅನುಮೋದನೆ ಪಡೆಯುವ ಎಲ್ಲ ಪ್ರಕ್ರಿಯೆ ಅಕ್ಟೋಬರ್ ತಿಂಗಳೊಳಗೆ ಪೂರ್ಣಗೊಳ್ಳಬೇಕು. ಬಹುಗ್ರಾಮ ಕುಡಿಯುವ ನೀರು ಯೋಜನೆಗಳ ಅನುಮೋದನೆಯಲ್ಲಿನ ತೊಡಕುಗಳ ನಿವಾರಣೆಗೆ ತಾವೇ ಖುದ್ದು ಕ್ರಮ ವಹಿಸುವ ಭರವಸೆಯನ್ನು ಸಿಎಂ ಬೊಮ್ಮಾಯಿ ನೀಡಿದ್ದಾರೆ.

ನಾಲ್ಕು ಪಟ್ಟು ಅನುದಾನ ಹೆಚ್ಚಿಸಿದ ಕೇಂದ್ರ ಸರ್ಕಾರ!
ಈ ವರ್ಷ (2021-22) ಜಲ ಜೀವನ್ ಮಿಶನ್ ಯೋಜನೆಗೆ ರಾಜ್ಯಕ್ಕೆ 5,009 ಕೋಟಿ ರೂ. ಹಣವನ್ನು ವಿತರಿಸಲಾಗುವುದು ಎಂದ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ತಿಳಿಸಿದ್ದಾರೆ 2020-21 ರಲ್ಲಿ ಇದೇ ಯೋಜನೆಯಡಿ ಕರ್ನಾಟಕಕ್ಕೆ 1,189 ಕೋಟಿ ಹಣವನ್ನು ಮಾತ್ರ ವಿತರಿಸಲಾಗಿತ್ತು. ಆದರೆ ಈಗ ಅದರ ನಾಲ್ಕು ಪಟ್ಟು ಹೆಚ್ಚಿನ ಹಣ ವಿತರಿಸಲು ಕೇಂದ್ರದ ಜಲಶಕ್ತಿ ಇಲಾಖೆ ಒಪ್ಪಿಗೆ ಸೂಚಿಸಿದೆ. 2019 ರಲ್ಲಿ ಈ ಯೋಜನೆ ಪ್ರಾರಂಭವಾದಾಗ, ದೇಶದ ಒಟ್ಟು 19.20 ಕೋಟಿ ಗ್ರಾಮೀಣ ಕುಟುಂಬಗಳಲ್ಲಿ, ಕೇವಲ 3.23 ಕೋಟಿ (ಶೇಕಡಾ 17) ಜನರು ಮಾತ್ರ ನಲ್ಲಿ ನೀರು ಸರಬರಾಜು ಹೊಂದಿದ್ದರು. ಕಳೆದ 22 ತಿಂಗಳುಗಳಲ್ಲಿ, ಕೊವಿಡ್ ಸೋಂಕು ಮತ್ತು ಲಾಕ್‌ಡೌನ್ ಅಡೆತಡೆಗಳ ಹೊರತಾಗಿಯೂ, ಜಲ ಜೀವನ್ ಮಿಷನ್ನ್ನು ತೀವ್ರಗತಿಯಲ್ಲಿ ಜಾರಿಗೆ ತರಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ರಾಜ್ಯ ಸರ್ಕಾರದ ಕಳಪೆ ಸಾಧನೆ?
ರಾಜ್ಯದಲ್ಲಿ 91.19 ಲಕ್ಷ ಮನೆಗಳಲ್ಲಿ, 29.96 ಲಕ್ಷ ಕುಟುಂಬಗಳಿಗೆ (ಶೇಕಡಾ 32.86) ನಲ್ಲಿ ನೀರಿನ ಸಂಪರ್ಕವನ್ನು ಒದಗಿಸಲಾಗಿದೆ. 15 ಆಗಸ್ಟ್ 2019 ರಂದು, ಜಲ ಜೀವನ್ ಮಿಷನ್ ಪ್ರಾರಂಭಿಸುವ ಸಮಯದಲ್ಲಿ, 24.51 ಲಕ್ಷ (26.88) ಕುಟುಂಬಗಳು ಕೊಳವೆ ನೀರು ಸರಬರಾಜು ಹೊಂದಿದ್ದವು. 22 ತಿಂಗಳಲ್ಲಿ ರಾಜ್ಯದಲ್ಲಿ ಕೇವಲ 5.44 ಲಕ್ಷ ಮನೆಗಳಿಗೆ ಮಾತ್ರ ನಲ್ಲಿ ನೀರಿನ ಸಂಪರ್ಕ ನೀಡಲಾಗಿದೆ. 2021-22ರಲ್ಲಿ 25.17 ಲಕ್ಷ ಮನೆಗಳಿಗೆ, 2022-23ರಲ್ಲಿ 17.93 ಲಕ್ಷ ನಲ್ಲಿ ನೀರಿನ ಸಂಪರ್ಕ ಮತ್ತು 2023-24ರಲ್ಲಿ ಉಳಿದ 19.93 ಲಕ್ಷ ನಲ್ಲಿ ನೀರಿನ ಸಂಪರ್ಕಗಳನ್ನು ಒದಗಿಸಲು ರಾಜ್ಯವು ಯೋಜನೆ ರೂಪಿಸಿದೆ.
ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ವಂದಿತಾ ಶರ್ಮ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಎಲ್. ಕೆ. ಅತೀಕ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications