Get Updates
Get notified of breaking news, exclusive insights, and must-see stories!

ಕಾಂಗ್ರೆಸ್‌ ಹೈಕಮಾಂಡ್‌ಗೆ ಜಮೀರ್ ಅಹ್ಮದ್ ಖಾನ್ ಹೊಸ ರಿಕ್ವೆಸ್ಟ್‌

ರಾಜ್ಯದಲ್ಲಿ ಉಪ ಚುನಾವಣೆ ದಿನಾಂಕ ಸಮೀಪಿಸುತ್ತಿದೆ. ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆ ಕಾವು ಜೋರಾಗಿ ಇದೆ. ಈ ನಡುವೆ ವಸತಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಅವರು ಏಕಾಏಕಿ ಕಾಂಗ್ರೆಸ್‌ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದಾರೆ.

ಕರ್ನಾಟಕದಲ್ಲಿ ಒಂದು ಕಡೆ ಭಾರೀ ಮಳೆಯಾಗುತ್ತಿದ್ದರೆ. ಇನ್ನೊಂದು ಕಡೆ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯದ್ದೇ ಸದ್ದು. ಆಡಳಿತರೂಢ ಕಾಂಗ್ರೆಸ್‌ ಹಾಗೂ ಬಿಜೆಪಿಗೆ ಒಂದೊಂದು ಕಾರಣಕ್ಕೆ ಈ ಮೂರು ಕ್ಷೇತ್ರಗಳ ಉಪ ಚುನಾವಣೆ ಮಹತ್ವದ್ದಾಗಿದೆ. ಈ ಮಧ್ಯೆ ಸದ್ದಿಲ್ಲದೆ ಜಮೀರ್‌ ಅವರು ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಿ ಶಿಗ್ಗಾಂವಿ ವಿಧಾನಸಭೆ ಉಪ ಚುನಾವಣೆಗೆ ಸಂಬಂಧಿಸಿದಂತೆ ರಿಕ್ವೆಸ್ಟ್‌ವೊಂದನ್ನು ಸಲ್ಲಿಸಿದ್ದಾರೆ.

Jameer Ahmed Khan new request to Congress High Command

ಕರ್ನಾಟಕದ ಸಂಡೂರು, ಶಿಗ್ಗಾಂವಿ ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯಲಿದೆ. ಉಪ ಚುನಾವಣೆಯಲ್ಲಿ ವಿರೋಧ ಪಕ್ಷಗಳನ್ನು ಕಟ್ಟಿಹಾಕುವುದು ಹೇಗೆ ಹಾಗೂ ಈ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದಕ್ಕೆ ಕಾಂಗ್ರೆಸ್‌ ಯಾವ ರೀತಿಯ ತಂತ್ರ ಅನುಸರಿಸಬೇಕು ಎನ್ನುವುದು ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಸುದೀರ್ಘವಾಗಿ ಚರ್ಚೆ ಮಾಡುವುದಕ್ಕೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆ ವಾಲಾ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ.

ಇದೇ ಸಂದರ್ಭದಲ್ಲಿ ಸಚಿವ ಜಮೀರ್‌ ಅವರು ರಣದೀಪ್ ಸಿಂಗ್ ಸುರ್ಜೆ ವಾಲಾ ಅವರನ್ನು ಭೇಟಿ ಮಾಡಿದ್ದು, ಶಿಗ್ಗಾಂವಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದಾರೆ. ಕಳೆದ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಮುಸ್ಲಿಂ ಸಮುದಾಯವು ಕಾಂಗ್ರೆಸ್‌ಗೆ ಬೆಂಬಲ ಸೂಚಿಸಿದೆ. ಹೀಗಾಗಿ, ಶಿಗ್ಗಾಂವಿ ವಿಧಾನಸಭೆ ಉಪಚುನಾವಣೆ ಟಿಕೆಟ್ ಅನ್ನು ಮುಸ್ಲಿಂ ಸಮುದಾಯದವರಿಗೇ ನೀಡಬೇಕು ಎಂದು ಮನವಿ ಸಲ್ಲಿಸಿದ್ದಾರೆ.

ರಾಜ್ಯ ನಾಯಕರಿಗೂ ಮನವಿ: ಶಿಗ್ಗಾಂವಿಯಲ್ಲಿ ಮುಸ್ಲಿಂ ಸಮುದಾಯದವರಿಗೆ ಟಿಕೆಟ್‌ ನೀಡುವಂತೆ ಈಗಾಗಲೇ ರಾಜ್ಯ ಕಾಂಗ್ರೆಸ್‌ ನಾಯಕರಿಗೂ ಮನವಿ ಸಲ್ಲಿಸಲಾಗಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಹಾಗು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೂ ಈ ಬಗ್ಗೆ ಜಮೀರ್ ಅಹಮದ್ ಖಾನ್ ಅವರ ನೇತೃತ್ವದಲ್ಲಿ ಮುಸ್ಲಿಂ ಜನಪ್ರತಿನಿಧಿಗಳ ನಿಯೋಗ ಮನವಿ ಸಲ್ಲಿಸಿದೆ.

ಶಿಗ್ಗಾಂವಿಯಲ್ಲಿ ಭರತ್‌ ಬೊಮ್ಮಾಯಿಗೆ ಟಿಕೆಟ್‌: ಶಿಗ್ಗಾಂವಿಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್‌ ಬೊಮ್ಮಾಯಿಗೆ ಟಿಕೆಟ್ ನೀಡಲಾಗಿದೆ. ಇದಕ್ಕೆ ಬಿಜೆಪಿ ಕಾರ್ಯಕರ್ತರಿಂದಲೇ ವಿರೋಧ ವ್ಯಕ್ತವಾಗಿದೆ. ಬೊಮ್ಮಾಯಿ ಅವರು ಈ ಕ್ಷೇತ್ರದಲ್ಲಿ ಹಿಡಿತ ಸಾಧಿಸಿದ್ದಾರೆ. ಇದೀಗ ಅವರ ಮಗನಿಗೆ ಈ ಕ್ಷೇತ್ರವನ್ನು ಬೊಮ್ಮಾಯಿ ಬಿಟ್ಟುಕೊಟ್ಟಿದ್ದಾರೆ. ಆದರೆ, ಕುಟುಂಬ ರಾಜಕೀಯದ ಬಗ್ಗೆ ಬಿಜೆಪಿ ಕಾರ್ಯಕರ್ತರು ಹಾಗೂ ನಾಯಕರಲ್ಲೇ ಅಸಮಾಧಾನ ಇದೆ.

ನವೆಂಬರ್‌ 13ಕ್ಕೆ ಚುನಾವಣೆ: ನವೆಂಬರ್‌ 13ಕ್ಕೆ ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯಲಿದೆ. ನವೆಂಬರ್‌ 23ಕ್ಕೆ ಮೂರು ಕ್ಷೇತ್ರಗಳ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್‌ 25 ಕೊನೆಯ ದಿನವಾಗಿದೆ. ನಾಮಪತ್ರ ಸಲ್ಲಿಕೆಗೆ ಇನ್ನು ಮೂರು ದಿನಗಳು ಮಾತ್ರ ಬಾಕಿ ಉಳಿದಿದ್ದು, ಭಾರೀ ಕುತೂಹಲ ಮೂಡಿಸಿದೆ. ಈ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಹಲವು ಕಾರಣಕ್ಕೆ ಪ್ರಮುಖವಾಗಿದೆ. ಅಲ್ಲದೇ ಚನ್ನಪಟ್ಟಣ ವಿಧಾನಸಭೆ ಚುನಾವಣೆಯು ಹೈವೋಲ್ಟೇಜ್‌ ಕ್ಷೇತ್ರ ಎಂದೇ ಗುರುತಿಸಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+