J&K Terror Attack: ಸಹಾಯವಾಣಿ ಆರಂಭಿಸಿ ಸರ್ಕಾರ, ಪ್ರವಾಸಿಗರ ವಿವರ ಇಲ್ಲಿ ಹಂಚಿಕೊಳ್ಳಿ..
ಬೆಂಗಳೂರು, ಏಪ್ರಿಲ್ 23: ಕಣಿವೆ ರಾಜ್ಯ ಹಾಗೂ ದೇಶದ ಗಡಿ ಪ್ರದೇಶ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗರು ಇಲ್ಲಿಗೆ ಬಂದಿದ್ದ ಪ್ರವಾಸಿಗರ ಮೇಲೆ ಮಂಗಳವಾರ (ಏಪ್ರಿಲ್ 22) ಗುಂಡಿನ ದಾಳಿ ನಡೆಸಿದ್ದಾರೆ. ಕನ್ನಡಿಗರು ಸೇರಿದಂತೆ 500 ಹೆಚ್ಚು ಮಂದಿ ಪ್ರವಾಸಿಗರ ಪೈಕಿ ಹಲವು ನಾಗರಿಕರ ಮೇಲೆ ದುಷ್ಟ ಬುದ್ಧಿ ಪ್ರದರ್ಶಿಸಿದ್ದಾರೆ. ಘಟನೆಯಲ್ಲಿ 25 ಕ್ಕೂ ಹೆಚ್ಚು ಮಡಿದಿದ್ದು, ಕನ್ನಡಿಗರು ಇಬ್ಬರು ಇದ್ದಾರೆ. ಈ ಸಂಬಂಧ ಅಗತ್ಯ ನೆರವು ನೀಡಲು ಕರ್ನಾಟಕ ರಾಜ್ಯ ಸರ್ಕಾರ ಸಹಾಯವಾಣಿ ಆರಂಭಿಸಿದೆ.
ಕಾಶ್ಮೀರದ ಪಹಲ್‌ಗ್ರಾಮದಲ್ಲಿ ಉಗ್ರರ ದಾಳಿಯಿಂದ ಕನ್ನಡಿಗರಿಬ್ಬರು ಸಾವಿಗೀಡಾಗಿರುವುದು ವಿಷಾದನೀಯ ಸಂಗತಿ. ಆದ್ದರಿಂದ ಜಮ್ಮು-ಕಾಶ್ಮೀರದ ಪ್ರವಾಸಕ್ಕೆ ತೆರಳಿರುವ ಕನ್ನಡಿಗರನ್ನು ರಾಜ್ಯಕ್ಕೆ ಮರಳಿ ತರಲು ರಾಜ್ಯ ಸರ್ಕಾರವು ಪ್ರಯತ್ನಿಸುತ್ತಿದೆ. ಇದರ ಭಾಗವಾಗಿ ಸಹಾಯವಾಣಿ ಆರಂಭಿಸಿದೆ. ಟ್ರಾವೆಲ್ಲರ್ಸ್, ಏಜೆನ್ಸಿಗಳು, ಅಪಾಯದಲ್ಲಿರುವವರು, ಸಹಾಯ ಅಗತ್ಯವಿರುವವರ ಕೂಡಲೇ ಸಂಪರ್ಕಿಸುವಂತೆ ಕೋರಲಾಗಿದೆ.

* ಕರ್ನಾಟಕದಲ್ಲಿ ಪ್ರವಾಸ ನಿರ್ವಹಿಸುತ್ತಿರುವ ಪ್ರವಾಸಿ(Tour Operators & Travel Agents) ಮೂಲಕ ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿರುವ ಪ್ರಯಾಣಿಕರ ವಿವರಗಳನ್ನು ಕೆಳಕಂಡ Helpline (ಸಹಾಯವಾಣಿಗೆ) ನೀಡಬೇಕೆಂದು ರಾಜ್ಯ ಸರ್ಕಾರ ಮನವಿ ಮಾಡಿದೆ.
* ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿರುವ ಪ್ರವಾಸಿಗರ ಸಂಬಂಧಿಕರು ಅಥವಾ ಪರಿಚಯಸ್ಥರು ಪ್ರವಾಸಕ್ಕೆ ತೆರಳಿರುವವರ ವಿವರಗಳನ್ನು ಈ ಕೆಳಕಂಡ Helpline (ಸಹಾಯವಾಣಿಗೆ) ಒದಗಿಸಬೇಕಿದೆ. ಇದರಿಂದ ಸಹಾಯ ಮಾಡಲು, ಮರಳಿ ಕರೆ ತರಲು ಅನುಕೂಲವಾಗಲಿದೆ.
ಸಹಾಯವಾಣಿ ಸಂಖ್ಯೆಗೆ ಸಂಪರ್ಕಿಸಿ
* 080-43344334
* 080-43344335
* 080-43344336
* 080-43344342
ಕರ್ನಾಟಕದಿಂದ ಅಧಿಕಾರಿಗಳ ತಂಡ ಕಾಶ್ಮೀರಕ್ಕೆ..
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಅಲ್ಲಿನ ಕನ್ನಡಿಗರ ರಕ್ಷಣೆಗೆ ಸರ್ಕಾರ ಕ್ರಮ ಕೈಗೊಂಡಿದೆ. ರಾಜ್ಯದ ಅಧಿಕಾರಿಗ ತಂಡವನ್ನು ಸರ್ಕಾರ ಕಾಶ್ಮೀರಕ್ಕೆ ಮಂಗಳವಾರವೇ (ಏಪ್ರಿಲ್ 22) ಕಳುಹಿಸಲಾಗಿದೆ. ಕನ್ನಡಿಗರ ರಕ್ಷಣೆಗೆ ನಮ್ಮ ಕರ್ತವ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇತ್ತ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಸಹ ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಕಾಶ್ಮೀರಕ್ಕೆ ಪ್ರಯಾಣ ಬೆಳೆಸಿದ್ದಾರೆ. ಅಲ್ಲಿನ ಸಂತ್ರಸ್ಥರಿಗೆ, ಮೃತರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ. ಧೈರ್ಯ ತುಂಬಿದ್ದಲ್ಲದೇ ಕನ್ನಡಿಗರನ್ನು ಕರೆತರುವ ಎಲ್ ಪ್ರಯತ್ನ ಮಾಡಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಅಜಿತ್ ದೋವೆಲ್, ವಿದೇಶಾಂಗ ಸಚಿವ ಜೈಶಂಕರ್ ಸೇರಿದಂತೆ ವಿವಿಧ ಹಿರಿಯ ಅಧಿಕಾರಿಗಳು ಸಭೆ ನಡೆಸಿದರು. ವಿದೇಶಿ ಪ್ರವಾಸವನ್ನು ಅರ್ಧದಲ್ಲೇ ಮೊಟಕುಗೊಳಿಸಿದ ಭಾರತಕ್ಕೆ ಮರಳಿದ ಪ್ರಧಾನಿ ಮೋದಿ ನೇತೃತ್ವದಲ್ಲಿ ಸಭೆ ನಡೆಯುತ್ತಿದ್ದ, ಉಗ್ರರ ವಿರುದ್ಧ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.












Click it and Unblock the Notifications