Janardhana Reddy: ನನ್ನ ಹತ್ಯೆಗೆ ಆ ಮೂವರಿಂದ ಸಂಚು ನಡೆದಿದೆ: ಜನಾರ್ದನ ರೆಡ್ಡಿ ಗಂಭೀರ ಆರೋಪ
ಬಳ್ಳಾರಿ: ಬಳ್ಳಾರಿ ನಗರದಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಸಂಬಂಧ ಬ್ಯಾನರ್ ಅಳವಡಿಕೆ ವೇಳೆ ಶುರುವಾದ ಘರ್ಷಣೆ ಕಾಂಗ್ರೆಸ್ ಕಾರ್ಯಕರ್ತನ ಬಲಿತೆಗೆದುಕೊಂಡಿದೆ. ಜನವರಿ 3ರಂದು ನಡೆಯಲಿರುವ ಕಾರ್ಯಕ್ರಮಕ್ಕೆ ಶಾಸಕ ಜನಾರ್ದನ ರೆಡ್ಡಿ ಅವರ ಮನೆ ಮುಂದೆ ಬ್ಯಾನರ್ ಕಟ್ಟುತ್ತಿದ್ದಾಗ ಎರಡು ಗುಂಪುಗಳ ನಡುವೆ ಗಲಾಟೆ ಸಂಭವಿಸಿದ್ದು, ಈ ಘರ್ಷಣೆಯು ಕಲ್ಲು ತೂರಾಟ, ದೊಣ್ಣೆ ಮತ್ತು ಖಾರದ ಪುಡಿ ಎರಚಾಟ ಸೇರಿದಂತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈ ಘಟನೆ ಕುರಿತು ಮಾಜಿ ಸಚಿವ ಹಾಗೂ ಶಾಸಕರಾದ ಜನಾರ್ದನ ರೆಡ್ಡಿ ಅವರು ಗಂಭೀರ ಆರೋಪ ಮಾಡಿದ್ದಾರೆ.
ಬ್ಯಾನರ್ ವಿಚಾರಕ್ಕೆ ಸಂಬಂಧಿಸಿ ನಡೆದ ಗಲಾಟೆ ಸಂಬಂಧಿಸಿದಂತೆ ಶಾಸಕ ಜನಾರ್ದನ ರೆಡ್ಡಿ ಅವರು ಮಾತನಾಡಿ, ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹಾಗೂ ಆಪ್ತ ಸತೀಶ್ ರೆಡ್ಡಿ ಹಾಗೂ ಭರತ್ ರೆಡ್ಡಿ ತಂದೆ ನಾರಾ ಸೂರ್ಯನಾರಾಣರೆಡ್ಡಿಯಿಂದ ನನ್ನ ಹತ್ಯೆಗೆ ಸಂಚು ನಡೆದಿದೆ ಎಂದು ಮಾಜಿ ಸಚಿವ ಗಾಲಿ ಜನಾರ್ಧನ್ ರೆಡ್ಡಿ ಗಂಭೀರ ಆರೋಪ ಮಾಡಿದ್ದಾರೆ. ಬ್ಯಾನರ್ ಗಲಾಟೆ ನೆಪದಲ್ಲಿ ನಮ್ಮ ನಿವಾಸದ ಮುಂದೆ ಗನ್ ಮ್ಯಾನ್‌ಗಳಿಂದ ಗುಂಡಿನ ದಾಳಿಯಾಗಿದೆ. ನಾನು ಗಂಗಾವತಿಯಿಂದ ಕಾರಿನಲ್ಲಿ ಬಂದು ಇಳಿಯುತ್ತಿದ್ದಂತೆ ಗುಂಡಿನ ದಾಳಿ ಆರಂಭಿಸಿದ್ದಾರೆ. ಗನ್ ಮ್ಯಾನ್‌ಗಳು ನಾಲ್ಕಾರು ರೌಂಡ್ ಪೈರ್ ಮಾಡಿದ್ದಾರೆ. ಪುತ್ಥಳಿ ಪ್ರತಿಷ್ಟಾಪನೆ ಹೆಸರಲ್ಲಿಊರಿಗೆ ಬೆಂಕಿ ಹಚ್ಚಲು ಹೊರಟಿದ್ದಾರೆ. ಕೊಲೆಗೆಡುಕರನ್ನ ಹಿಂದಿಟ್ಟುಕೊಂಡು ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಜನಾರ್ದನ ರೆಡ್ಡಿ ಅವರು ಆರೋಪಿಸಿದ್ದಾರೆ.

ಅಷ್ಟಕ್ಕೂ ಆಗಿದ್ದೇನು?
ಬಳ್ಳಾರಿ ನಗರದಲ್ಲಿ ಬ್ಯಾನರ್ ಅಳವಡಿಕೆ ವಿಚಾರಕ್ಕೆ ಗಲಾಟೆಯಿಂದ ಮಾಜಿ ಸಚಿವ, ಶಾಸಕ ಜನಾರ್ದನ ರೆಡ್ಡಿ ಬೆಂಬಲಿಗರು ಹಾಗೂ ಶಾಸಕ ಭರತ್ ರೆಡ್ಡಿ ಬೆಂಬಲಿಗರ ನಡುವೆ ಕಲ್ಲು ತೂರಾಟವಾಗಿದೆ. ಎರಡೂ ಕಡೆಯಿಂದ ಕಲ್ಲು ತೂರಾಟ ನಡೆದಿದ್ದು, ಕೈಯಲ್ಲಿ ಕಲ್ಲು, ಕಟ್ಟಿಗೆ ಹಿಡಿದು ಗಲಾಟೆಯಾಗಿದೆ. ಗಲಾಟೆ ಜೋರಾಗುತ್ತಿದ್ದಂತೆ ಶಾಸಕ ಭರತ್ ರೆಡ್ಡಿ ಬೆಂಬಲಿಗ ಸತೀಶ ರೆಡ್ಡಿ ಖಾಸಗಿ ಗನ್ ಮ್ಯಾನ್‌ಗಳು ಏರ್ ಫೈರ್ ನಡೆಸಿದ್ದಾರೆ. ಇದರಿಂದಾಗಿ ಭರತ್ ರೆಡ್ಡಿ ಬೆಂಬಲಿಗ ಸತೀಶ ರೆಡ್ಡಿಗೆ ಗಂಭೀರ ಗಾಯವಾಗಿದೆ.
ಇನ್ನೂ ಬ್ಯಾನರ್ ವಿಚಾರದಲ್ಲಿ ಆಗ ಗಲಾಟೆಯನ್ನ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಈ ವೇಳೆ ಲಾಠಿ ಚಾರ್ಜ್‌ನಿಂದಲೂ ಪರಿಸ್ಥಿತಿ ನಿಯಂತ್ರಣಕ್ಕೆ ಬಾರದಿದ್ದಾಗ ಐದಾರು ಬಾರಿ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಈ ಗಲಾಟೆ ವೇಳೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ನಿಧನರಾಗಿದ್ದಾರೆ. ನಂತರ ಪೊಲೀಸರ ಮೇಲೆ ಕಲ್ಲು ತೂರಾಟ ನಡೆದಿದೆ. ವಾತಾವರಣ ತಿಳಿಗೊಳಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.
ಬ್ಯಾನರ್ ವಿಚಾರದ ಗಲಾಟೆಯ ವೇಳೆ ಕಲ್ಲು ತೂರಾಟ ಬೆನ್ನಲ್ಲೇ ಮಾಜಿ ಸಚಿವ ಹಾಗೂ ಶಾಸಕ ಜನಾರ್ದನ ರೆಡ್ಡಿ ಮನೆಗೆ ಮಾಜಿ ಸಚಿವ ಶ್ರೀರಾಮುಲು ಆಗಮಿಸಿದ್ದಾರೆ. ಅಲ್ಲದೇ ಬಿಜೆಪಿ ಕಾರ್ಯಕರ್ತರು ಕೂಡ ಆಗಮಿಸಿದ್ದರು. ಇದರಿಂದ ಸ್ಥಳದಲ್ಲಿ ಮತ್ತಷ್ಟು ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ನೂರಾರು ಪೊಲೀಸರು ನಿಯೋಜನೆಗೊಂಡಿದ್ದರು. ಎಸ್ಪಿ ಪ್ರವೀಣ್‌ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದರು. ನಂತರ ಘಟನಾ ಸ್ಥಳಕ್ಕೆ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಆಗಮಿಸಿದ್ದರು. ಈ ವೇಳೆ ಏಕವಚನದಲ್ಲಿ ಜನಾರ್ದನ ರೆಡ್ಡಿ ವಿರುದ್ಧ ವಾಗ್ದಾಳಿ ನಡೆಸಿದರು.












Click it and Unblock the Notifications