ಬಳ್ಳಾರಿ ಬ್ಯಾನರ್ ಘರ್ಷಣೆ; ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲುಗೆ ಪ್ರಾಣಾಪಾಯ ಇದೆ: ಆರ್ ಅಶೋಕ್
ಬೆಂಗಳೂರು: ಮಾಜಿ ಸಚಿವರು ಮತ್ತು ಶಾಸಕರಾದ ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ಅವರಿಗೆ ಪ್ರಾಣಾಪಾಯ ಇದೆ. ಕೂಡಲೇ ಅವರಿಗೆ ಪೊಲೀಸ್ ರಕ್ಷಣೆ ಕೊಡಬೇಕು. ಬಳ್ಳಾರಿ ಅಹಿತಕರ ಘಟನೆಯ ನ್ಯಾಯಾಂಗ ತನಿಖೆ ಮಾಡಬೇಕೆಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಆಗ್ರಹಿಸಿದ್ದಾರೆ.
ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಆರ್ ಅಶೋಕ್ ಅವರು, ಮಾಜಿ ಸಚಿವ ಮತ್ತು ಶಾಸಕ ಜನಾರ್ದನ ರೆಡ್ಡಿ ಬೆಂಬಲಿಗರ ಮನೆಗೆ ಅಕ್ರಮವಾಗಿ ನುಗ್ಗಿದ ಕಾಂಗ್ರೆಸ್ಸಿನವರನ್ನು ಕೂಡಲೇ ಗೂಂಡಾ ಕಾಯ್ದೆಯಡಿ ಬಂಧಿಸಬೇಕು. ಬಳ್ಳಾರಿ ಘಟನಾವಳಿ, ಒಂದು ಸಾವಿಗೆ ಶಾಸಕ ಭರತ್ ರೆಡ್ಡಿಯೇ ಕಾರಣ. ಕೂಡಲೇ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು. ಮಾಜಿ ಸಚಿವ ಮತ್ತು ಶಾಸಕ ಜನಾರ್ದನ ರೆಡ್ಡಿ ಮುಗಿಸಲು ಕಾಂಗ್ರೆಸ್ಸಿನವರು ತೀರ್ಮಾನಿಸಿದ್ದರು ಎಂದು ಆರೋಪಿಸಿದರು.

ಬಳ್ಳಾರಿಯಲ್ಲಿ ಕಾಂಗ್ರೆಸ್ಸಿನ ಗೂಂಡಾಗಳು ಜನಾರ್ಧನ ರೆಡ್ಡಿ ಮತ್ತು ಶ್ರೀರಾಮುಲು ಅವರ ಮೇಲೆ ಗುಂಡಿನ ದಾಳಿ ಮಾಡಿರುವುದು ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದೆ. ಹೊಸ ವರ್ಷಾಚರಣೆ ವೇಳೆ ಮುಖ್ಯಮಂತ್ರಿಗಳು ದುರ್ಘಟನೆ ನಡೆಯದಂತೆ ಪೊಲೀಸರು ನೋಡಲಿದ್ದಾರೆಂದು ಭರವಸೆಯ ಮಾತಾಡಿದ್ದಾರೆ. ಅವರು ಹೇಳಿದ ಒಂದೇ ದಿನಕ್ಕೆ ಬಳ್ಳಾರಿಯಲ್ಲಿ ಗುಂಡುಗಳ ದಾಳಿ (ಫೈರಿಂಗ್) ನಡೆದಿದೆ ಎಂದು ತಿಳಿಸಿದರು. ಇದು ರಾಜ್ಯದ ಕಾನೂನು- ಸುವ್ಯವಸ್ಥೆ ಕುಸಿತಕ್ಕೆ ಕೈಗನ್ನಡಿ ಎಂದರು.
ಒಂದೆಡೆ ಪೊಲೀಸರು ಕಳ್ಳತನ ಮಾಡಿ ಸಿಕ್ಕಿ ಹಾಕಿಕೊಳ್ಳುತ್ತಿದ್ದಾರೆ. ಆಂಧ್ರ ಮಾದರಿಯ ರಕ್ತ ಚರಿತ್ರೆ ಕರ್ನಾಟಕಕ್ಕೂ ಕಾಲಿಟ್ಟಿದೆ ಎಂದು ಕಳವಳ ವ್ಯಕ್ತಪಡಿಸಿದರು. ರಾಜಕೀಯವಾಗಿ ಗುಂಡು ಹಾರಿಸುವ ಸಂಸ್ಕøತಿ ಕರ್ನಾಟಕದಲ್ಲಿ ಇರಲಿಲ್ಲ. ಇವತ್ತು ಅದಕ್ಕೂ ನಾಂದಿ ಹಾಡಿದ್ದಾರೆ. ಜನಾರ್ದನ ರೆಡ್ಡಿ ಕಾಂಪೌಂಡ್ ಒಳಗೆ ಬಂದು ಫ್ಲೆಕ್ಸ್ ಹಾಕಿದ್ದಾರೆ. ಅದಾದ ಬಳಿಕ ಜನಾರ್ದನ ರೆಡ್ಡಿ ಮನೆಯವರು ದೂರು ನೀಡಿದ್ದಾರೆ. ಪೊಲೀಸರು ಬಂದು ತೆರವುಗೊಳಿಸಿದ್ದಾರೆ. ನಂತರ ಶಾಸಕ ಸತೀಶ್ ರೆಡ್ಡಿ ಬೆಂಬಲಿಗರು ಬಂದು ರಸ್ತೆ ಮೇಲೆ ಕಾಲ ಮೇಲೆ ಕಾಲು ಹಾಕಿ ಕುಳಿತು ಗೇಟ್ ನುಗ್ಗಿ ಫ್ಲೆಕ್ಸ್ ಕಟ್ಟಿಸಿದ್ದಾರೆ ಎಂದು ದೂರಿದರು. ಇದರಲ್ಲಿ ಜನಾರ್ದನ ರೆಡ್ಡಿ ತಪ್ಪೇನಿದೆ. ರಕ್ತ ಚರಿತ್ರೆಯಲ್ಲೇ 2026ರ ಪ್ರಾರಂಭವಾಗಿದೆ. ಆಂಧ್ರ ಮಾದರಿಗೆ ಹೋಗುವ ಸಂದೇಶವನ್ನು ಈ ದುರುಳ ಸರಕಾರವು ಕೊಟ್ಟಿದೆ ಎಂದು ಟೀಕಿಸಿದರು. ಈ ಘಟನೆ ಆದಾಗ ಜನಾರ್ದನ ರೆಡ್ಡಿ ಮನೆಯಲ್ಲಿ ಇರಲಿಲ್ಲ ಎಂದರು.
ಜೀವ ಬಲಿ ಪಡೆದ ಮೊದಲ ದಿನ: ಛಲವಾದಿ ನಾರಾಯಣಸ್ವಾಮಿ
ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡಿ, ಜೀವ ಬಲಿ ಪಡೆದ ಹೊಸ ವರ್ಷದ ಮೊದಲ ದಿನವಾಗಿದೆ. ಗೂಂಡಾ ರಾಜ್ಯದ ಸಂದೇಶ ಇದೆಂದು ತಿಳಿಸಿದರು. ಶಾಸಕ ಮತ್ತು ಅವರ ಕಾರ್ಯಕರ್ತರ ವಿರುದ್ಧ ದೂರು ದಾಖಲಿಸಬೇಕಿತ್ತು. ಆದರೆ, ಜನಾರ್ಧನ ರೆಡ್ಡಿ ಮತ್ತು ಶ್ರೀರಾಮುಲು ಅವರ ಮೇಲೆ ದೂರು ದಾಖಲಿಸುವ ಪ್ರಯತ್ನ ನಡೆದಿದೆ. ಅವರು ಯಾವ ರೀತಿ ಇದರಲ್ಲಿ ಭಾಗಿ ಆಗಿದ್ದಾರೆ? ಗುಂಡು ಹಾರಿಸಿದ್ದು ಯಾರು? ಎಂದು ಕೇಳಿದರು.
ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಇದೇವೇಳೆ ಸತೀಶ್ ರೆಡ್ಡಿ ಇಷ್ಟೆಲ್ಲ ಗೂಂಡಾವರ್ತಿ ಮಾಡಿದ್ದು, ಅವರನ್ನು ಬಂಧಿಸಿದ್ದೀರಾ ಎಂದು ಪ್ರಶ್ನಿಸಿದರು. ಸರಕಾರ ಯಾಕೆ ಅವರನ್ನು ಬಂಧಿಸಿಲ್ಲ ಎಂದು ಆಕ್ಷೇಪಿಸಿದರು. ಕಾಂಗ್ರೆಸ್ ನಾಯಕರು ಮತ್ತು ಶಾಸಕರನ್ನು ಬಂಧಿಸಬೇಕೇ ಹೊರತು ಜನಾರ್ಧನ ರೆಡ್ಡಿ ಮತ್ತು ಶ್ರೀರಾಮುಲು ಅವರನ್ನಲ್ಲ ಎಂದು ತಿಳಿಸಿದರು. ಎಲ್ಲ ಕುಚೇಷ್ಟೆಯ ಕಾರ್ಯ ಕಾಂಗ್ರೆಸ್ಸಿನವರಿಂದಲೇ ಹೊರತು ಇದು ನಮ್ಮ ಪಕ್ಷದ ಶಾಸಕರ ಕಡೆಯಿಂದ ಆಗಿಲ್ಲ. ಆದ್ದರಿಂದ ಈ ಗೂಂಡಾವರ್ತನೆಯನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
-
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
Price Hike: ಕೇಂದ್ರದಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಹೇಳಿಕೆ, ದರ ಹೆಚ್ಚಿಸಿದ್ದೇ ಕಾಂಗ್ರೆಸ್; ಡಿಕೆಶಿಗೆ ತಿರುಗೇಟು -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ












Click it and Unblock the Notifications