ಲೋಕಸಭೆ ಚುನಾವಣೆಗೆ ಬಿಜೆಪಿಗೆ ಬೆಂಬಲ ಘೋಷಿಸಿದ ಜನಾರ್ದನ ರೆಡ್ಡಿ..!

ಕೊಪ್ಪಳ, ಜನವರಿ 27: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಮತ್ತೆ ಬಿಜೆಪಿಯತ್ತ ಒಲವವನ್ನು ಶಾಸಕ ಗಾಲಿ ಜನಾರ್ಧನರಡ್ಡಿ ತೋರಿದ್ದಾರೆ. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ ಬಿಜೆಪಿ ಮರುಸೇರ್ಪಡೆ ಬೆನ್ನಲ್ಲಿಯೇ ಜನಾರ್ದನ ರೆಡ್ಡಿ ಮತ್ತೆ ಬಿಜೆಪಿ ಕಡೆ ಒಲವು ತೋರಿದ್ದು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಬಯಸಿದರೆ ಹೊಂದಾಣಿಕೆಗೆ ಸಿದ್ದ ಎಂದು ಘೋಷಿಸಿದ್ದಾರೆ.

ಕುಷ್ಟಗಿಯಲ್ಲಿ ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮತ್ತೆ ನರೇಂದ್ರ ಮೋದಿ ಪ್ರಧಾನಿಯಾಗಬೇಕು. ಬಿಜೆಪಿಯೊಂದಿಗೆ ಹೊಂದಾಣಿಕೆ ಇಲ್ಲದೆ ಲೋಕಸಭೆ ಸ್ಪರ್ಧಿಸಿದರೂ ಮೋದಿ ಪ್ರಧಾನಿಯಾಗಲು ಬೆಂಬಲ ನೀಡುತ್ತೇನೆ. ಆದರೆ ಕೆಆರ್ ಪಿಪಿ ಪಕ್ಷದಿಂದ ಸ್ಪರ್ಧೆ ಮಾಡುತ್ತೇವೆ, ಯಾವುದೇ ಕಾರಣಕ್ಕೆ ಬಿಜೆಪಿ ಸೇರುವುದಿಲ್ಲ. ಬಿಜೆಪಿ ಬೆಂಬಲಿಸುತ್ತೇನೆ.ಯಾವುದೇ ಕಾರಣಕ್ಕೂ ಕಾಂಗ್ರೆಸ್ ಬೆಂಬಲಿಸುವುದಿಲ್ಲ ಎಂದು ಜನಾರ್ದನ ರೆಡ್ಡಿ ಹೇಳಿದ್ದಾರೆ.

Janardhana Reddy Announced His Support oT BJP For The Lok Sabha Elections

ಸಿದ್ದರಾಮಯ್ಯ ಸರಕಾರದಲ್ಲಿ ಅಭಿವೃದ್ಧಿ ಯಾಗುತ್ತಿಲ್ಲ. ಕೇವಲ ಗ್ಯಾರಂಟಿ ಯೋಜನೆಯ ಬಗ್ಗೆ ಚರ್ಚೆ ನಡೆಯುತ್ತಿದೆ. ಅಯೋಧ್ಯೆ ಮಾದರಿಯಲ್ಲಿ ಅಂಜನಾದ್ರಿ ಅಭಿವೃದ್ಧಿ ಯಾಗಲಿದೆ. ಇಲ್ಲಿಯ ದೇವಸ್ಥಾನದ ಮೂಲಸ್ವರೂಪ ಬದಲಾವಣೆ ಮಾಡೋದಿಲ್ಲ. ಆದರೆ ಮೂಲಭೂತ ಸೌಲಭ್ಯಕ್ಕೆ ಒತ್ತು ನೀಡಲಾಗಿದೆ. ಫೆಬ್ರುವರಿ ಅಂತ್ಯಕ್ಕೆ ಆನೇಗೊಂದಿ ಉತ್ಸವ ನಡೆಸಲಾಗುವುದು.ಈ ಕುರಿತು ಜಿಲ್ಲಾಧಿಕಾರಿಗಳಿಂದ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಅವರು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+