ಶಾಸಕ ಸ್ಥಾನದಿಂದ ಜನಾರ್ದನ ರೆಡ್ಡಿ ಅನರ್ಹ

ಬೆಂಗಳೂರು, ಮೇ 08: ಓಬಳಾಪುರಂ ಮೈನಿಂಗ್ ಕಂಪನಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಗಂಗಾವತಿ ಕ್ಷೇತ್ರದ ಶಾಸಕ ಗಾಲಿ ಜನಾರ್ದನ ರೆಡ್ಡಿ ಅಪರಾಧಿ ಎಂದು ಸಿಬಿಐ ಕೋರ್ಟ್ ತೀರ್ಪು ನೀಡಿದ್ದು, ಇದೀಗ ಮತ್ತೆ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ನ್ಯಾಯಾಲಯ ಏಳು ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಓಬಳಾಪುರಂ ಮೈನಿಂಗ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕನಾಗಿದ್ದ ಬಿ.ವಿ.ಶ್ರೀನಿವಾಸರೆಡ್ಡಿ ಮತ್ತು ಓಬಳಾಪುರಂ ಮೈನಿಂಗ್ ಕಂಪನಿಯ ಮುಖ್ಯಸ್ಥನಾಗಿದ್ದ ಜನಾರ್ದನ ರೆಡ್ಡಿ ಅಪರಾಧಿ ಎಂದು ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು, ನ್ಯಾಯಾಲಯ ಏಳು ವರ್ಷ ಜೈಲು ಶಿಕ್ಷೆ ವಿಧಿಸಿದ ಹಿನ್ನೆಲೆಯಲ್ಲಿ ಶಾಸಕ ಸ್ಥಾನದಿಂದ ಗಾಲಿ ಜನಾರ್ಧನ ರೆಡ್ಡಿಯನ್ನು ಅನರ್ಹಗೊಳಿಸಲಾಗಿದೆ. ಈ ಮೂಲಕ ಸಿಬಿಐ ಸ್ಪೆಷಲ್ ಕೋರ್ಟ್ ನಿಂದ ಶಿಕ್ಷೆಗೆ ಒಳಗಾಗಿರುವಂತ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ.

Janardhana Reddy disqualified from MLA post

ಮಾಜಿ ಸಚಿವ ಹಾಗೂ ಕೊಪ್ಪಳ ಜಿಲ್ಲೆಯ ಗಂಗಾವತಿ ಶಾಸಕರಾಗಿದ್ದಂತ ಜನಾರ್ದನ ರೆಡ್ಡಿ ಅವರನ್ನ ಶಾಸಕ ಸ್ಥಾನದಿಂದ ಮುಂದಿನ 6 ವರ್ಷಗಳ ಅವಧಿಗೆ ಅನರ್ಹಗೊಳಿಸಲಾಗಿದೆ. ಮೇ,6 ರಿಂದ ಅನ್ವಯವಾಗುವಂತೆ ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಸಿಬಿಐ ವಿಶೇಷ ನ್ಯಾಯಾಲಯ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಹಿನ್ನೆಲೆಯಲ್ಲಿ, ವಿಧಾನಸಭೆಯ ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಆದೇಶ ಹೊರಡಿಸಿದ್ದಾರೆ.

ವಿಧಾನಸಭೆ ಕಾರ್ಯದರ್ಶಿಯವರ ಆದೇಶದ ಪ್ರಕಾರ, ಗಾಲಿ ಜನಾರ್ದನ ರೆಡ್ಡಿ ಅವರು ಮುಂದಿನ ಆರು ವರ್ಷಗಳ ಕಾಲ ಶಾಸಕತ್ವಕ್ಕೆ ಅನರ್ಹರಾಗಿದ್ದಾರೆ. ಈ ಆದೇಶದಿಂದ ಸದ್ಯಕ್ಕೆ ವಿಧಾನಸಭೆಯ ಒಂದು ಸ್ಥಾನ ಖಾಲಿಯಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಅವರನ್ನು ಸಿಬಿಐ ನ್ಯಾಯಾಲಯ ದೋಷಿಯೆಂದು ಘೋಷಿಸಿ, ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಈ ಆದೇಶದಿಂದ ಜನಾರ್ದನ ರೆಡ್ಡಿ ಅವರ ರಾಜಕೀಯ ಭವಿಷ್ಯಕ್ಕೆ ಭಾರೀ ಹಿನ್ನಡೆಯಾಗಿದೆ.

ಸಿಬಿಐ ಕೋರ್ಟ್ ತೀರ್ಪು ಪ್ರಕಟವಾದ ತಕ್ಷಣದಿಂದಲೇ ಜಾರಿಗೆ ಬರುವಂತೆ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಮುಂದಿನ ಆರು ವರ್ಷಗಳ ಕಾಲ ಅನರ್ಹಗೊಳಿಸಿ ಕರ್ನಾಟಕ ವಿಧಾನಸಭೆ ಆದೇಶ ಹೊರಡಿಸಿದೆ. ಈ ಅನರ್ಹತೆ ಜನಾರ್ದನ ರೆಡ್ಡಿ ಶಿಕ್ಷೆ ಮುಗಿಸಿ ಬಿಡುಗಡೆಯಾಗುವವರೆಗೆ ಅಥವಾ ಈ ಶಿಕ್ಷೆಗೆ ಕೋರ್ಟ್ ತಡೆ ನೀಡುವವರೆಗೆ ಇರಲಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಇನ್ನೂ ನಿಮಯದ ಪ್ರಕಾರ ಯಾವುದೇ ಶಾಸಕ ಅಥವಾ ಸಂಸದ ಎರಡು ವರ್ಷ ಅಥವಾ ಅದಕ್ಕಿತಂ ಮೇಲ್ಪಟ್ಟು ಶಿಕ್ಷೆಗೆ ಗುರಿಯಾದರೆ ಶಾಸಕ ಸ್ಥಾನ ರದ್ದಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+