Get Updates
Get notified of breaking news, exclusive insights, and must-see stories!

ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದ ಜನಾರ್ದನ ರೆಡ್ಡಿ ನಡೆ!

ಬೆಂಗಳೂರು, ಅಕ್ಟೋಬರ್ 27: ಮಾಜಿ ಸಚಿವ, ಗಂಗಾವತಿ ಕ್ಷೇತ್ರದ ಶಾಸಕ ಜನಾರ್ದನ ರೆಡ್ಡಿ ನಡೆ ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ. ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ ಅವರು ಈ ಬಾರಿಯ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಈ ಕುರಿತು ಜೆ. ರಾಮಣ್ಣ ರಾಷ್ಟ್ರೀಯ ಅಧ್ಯಕ್ಷರು, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಬೆಂಗಳೂರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಬೆಂಗಳೂರು ಕಾರ್ಯಾಲಯದಲ್ಲಿ ದಿನಾಂಕ 26/10/23 ರಂದು ಪಕ್ಷದ ಪದಾಧಿಕಾರಿಗಳು ಸಭೆ ನಡೆಸಲಾಗಿದೆ. ಸಭೆಯಲ್ಲಿ ಪಕ್ಷದ ಬಲವರ್ಧನೆ ಬಗ್ಗೆ ಚರ್ಚಿಸಲಾಗಿದೆ.

Janardhana Reddy Kalyana Rajya Pragathi Paksha Dissolves All Of Its Units

ಸಭೆಯ ನಿರ್ಣಯಗಳು; ಈ ಸಭೆಯಲ್ಲಿ ಕೆಲವು ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು ಎಂದು ಜೆ. ರಾಮಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅದರಂತೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ರಾಜ್ಯ ಘಟಕ, ಜಿಲ್ಲಾ ಘಟಕ, ತಾಲೂಕು ಹಾಗೂ ನಗರ ಘಟಕಗಳನ್ನು ಒಳಗೊಂಡಂತೆ ಎಲ್ಲಾ ಘಟಕಗಳನ್ನು ಅಕ್ಟೋಬರ್ 26ರಿಂದಲೇ ಜಾರಿಗೆ ಬರುವಂತೆ ವಿಸರ್ಜಿಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ.

ರಾಜ್ಯಾದ್ಯಂತ ಪಕ್ಷವನ್ನು ಮತ್ತಷ್ಟು ಬಲಪಡಿಸಲು ಎಲ್ಲಾ ಘಟಕಗಳಿಗೆ ನೂತನವಾಗಿ ಸೂಕ್ತ ಪದಾಧಿಕಾರಿಗಳನ್ನು ಅತಿ ಶೀಘ್ರದಲ್ಲಿ ನೇಮಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಹೊಸ ಪಕ್ಷ ಸ್ಥಾಪನೆ ಮಾಡಿದ್ದ ರೆಡ್ಡಿ; 2022ರ ಡಿಸೆಂಬರ್ 25ರಂದು ಬೆಂಗಳೂರಿನ ಪಾರಿಜಾತ ನಿವಾಸದಲ್ಲಿ ಜನಾರ್ದನ ರೆಡ್ಡಿ ಪತ್ರಿಕಾಗೋಷ್ಠಿ ನಡೆಸಿದ್ದರು. "ನಾನು ಕೆಲಸ ಮಾಡಿದ ಪಕ್ಷದಿಂದ ಸ್ಥಾನಮಾನ ಸಿಗದ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯ ಕಲ್ಯಾಣ ಪ್ರಗತಿ ಪಕ್ಷ ಸ್ಥಾಪನೆ ಮಾಡಿ ಮುಂದೆ ಹೆಜ್ಜೆ ಹಾಕುತ್ತೇನೆ" ಎಂದು ಘೋಷಣೆ ಮಾಡಿದ್ದರು.

2023ರ ವಿಧಾನಸಭೆ ಚುನಾವಣೆಗೆ ಕೊಪ್ಪಳ ಜಿಲ್ಲೆಯ ಗಂಗಾವತಿ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ ಎಂದು ಜನಾರ್ದನ ರೆಡ್ಡಿ ಘೋಷಣೆ ಮಾಡಿದ್ದರು. ಅಲ್ಲದೇ ಜನಾರ್ದನ ರೆಡ್ಡಿ ಪತ್ನಿ ಅರುಣ ಬಳ್ಳಾರಿ ನಗರ ಕ್ಷೇತ್ರದಿಂದ ಕಣಕ್ಕಿಳಿದಿದ್ದರು.

ಜನಾರ್ದನ ರೆಡ್ಡಿ ಚುನಾವಣೆಯಲ್ಲಿ ಗಂಗಾವತಿ ಕ್ಷೇತ್ರದಲ್ಲಿ 66,213 ಮತಗಳನ್ನು ಪಡೆದು ಜಯಗಳಿಸಿದರು. ಪ್ರತಿಸ್ಪರ್ಧಿಯಾದ ಕಾಂಗ್ರೆಸ್‌ನ ಇಕ್ಬಾಲ್ ಅನ್ಸಾರಿ (57,947) ಸೋಲಿಸಿದರು. ಚುನಾವಣೆ ಬಳಿಕ ಜನಾರ್ದನ ರೆಡ್ಡಿ ಪಕ್ಷದ ಎಲ್ಲಾ ಘಟಕಗಳನ್ನು ವಿಸರ್ಜನೆ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

2024ರಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿಗಳು ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡುವ ನಿರೀಕ್ಷೆಯೂ ಇದೆ. ಆದ್ದರಿಂದ ಪಕ್ಷದ ಎಲ್ಲಾ ಘಟಕಗಳನ್ನು ಪುನರ್ ರಚನೆ ಮಾಡಲು ಜನಾರ್ದನ ರೆಡ್ಡಿ ಮುಂದಾಗಿದ್ದಾರೆ.

ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪನೆ ಮಾಡಿದ್ದ ಜನಾರ್ದನ ರೆಡ್ಡಿ, "ಕಾಯಕವೇ ಕೈಲಾಸ ಎಂದು ನಂಬಿದವನು ನಾನು. ಬಸವಣ್ಣನವರು ಹೇಳಿದ ಹಾಗೆ ಯಾವುದೇ ಜಾತಿ, ಮತ ಭೇದ ಇಲ್ಲದ ಹಾಗೆ ಮತ್ತು ಮೇಲು ಕೀಳು ಇಲ್ಲದ ಹಾಗೆ ಕೆಲಸ ಮಾಡಲು ನಿರ್ಧರಿಸಿದ್ದೇನೆ. ನಾನು ಕೆಲಸ ಮಾಡಿದ ಪಕ್ಷದಿಂದ ಸ್ಥಾನಮಾನಗಳು ಸಿಗದ ಕಾರಣ ಇಂದು ವಾಜಪೇಯಿ ಅವರನ್ನು ನೆನಪು ಮಾಡಿಕೊಳ್ಳುತ್ತಾ ಸಾರ್ವಜನಿಕ ಬದುಕಿಗೆ ಬರಬೇಕು ಎಂದು ತೀರ್ಮಾನ ಕೈಗೊಂಡಿದ್ದೇನೆ" ಎಂದು ಹೇಳಿದ್ದರು.

2018ರ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿಯೇ ಜನಾರ್ದನ ರೆಡ್ಡಿ ಬಿಜೆಪಿ ಸೇರುತ್ತಾರೆ. ಚುನಾವಣಾ ಕಣಕ್ಕಿಳಿಯುತ್ತಾರೆ ಎಂಬ ಸುದ್ದಿಗಳು ಹಬ್ಬಿದ್ದವು. ಆದರೆ ಅವರು ಆಗ ಚುನಾವಣಾ ರಾಜಕೀಯದಿಂದ ದೂರ ಉಳಿದಿದ್ದರು.

2023ರ ವಿಧಾನಸಭೆ ಚುನಾವಣೆಗೆ ಜನಾರ್ದನ ರೆಡ್ಡಿ ನೇತೃತ್ವದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿಗಳು ಹಲವು ಕ್ಷೇತ್ರಗಳಲ್ಲಿ ಕಣಕ್ಕಿಳಿದಿದ್ದರು. ಆದರೆ ಗಂಗಾವತಿಯಲ್ಲಿ ಮಾತ್ರ ಪಕ್ಷದ ಅಭ್ಯರ್ಥಿಯಾಗಿದ್ದ ಜನಾರ್ದನ ರೆಡ್ಡಿ ಗೆಲುವು ಸಾಧಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+