ಅಲೋಕ್ ಕುಮಾರ್‌ರನ್ನು ಕಾಶ್ಮೀರಕ್ಕೆ ಕಳುಹಿಸಿ : ಜನಾರ್ದನ ರೆಡ್ಡಿ

Recommended Video

      ಅಲೋಕ್ ಕುಮಾರ್‌ರನ್ನು ಕಾಶ್ಮೀರಕ್ಕೆ ಕಳುಹಿಸಿ : ಜನಾರ್ದನ ರೆಡ್ಡಿ..! | Oneindia Kannada

      ಬೆಂಗಳೂರು, ನವೆಂಬರ್ 14 : 'ಸಿಸಿಬಿಯ ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್, ಡಿಸಿಪಿ ಗಿರೀಶ್ ಅವರಂತಹ ಅಧಿಕಾರಿಗಳನ್ನು ಜಮ್ಮು ಮತ್ತು ಕಾಶ್ಮೀರಕ್ಕೆ ಕಳುಹಿಸಬೇಕು' ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ವ್ಯಂಗ್ಯವಾಡಿದರು.

      ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಜನಾರ್ದನ ರೆಡ್ಡಿ ಅವರಿಗೆ ಬುಧವಾರ 1ನೇ ಎಸಿಎಂಎಂ ನ್ಯಾಯಾಲಯ ಜಾಮೀನು ನೀಡಿತ್ತು. ರಾತ್ರಿ 8.10ರ ವೇಳೆಗೆ ಅವರು ಜೈಲಿನಿಂದ ಹೊರಬಂದರು. ಮಾಧ್ಯಮಗಳ ಜೊತೆ ಮಾತನಾಡಿದರು.

      'ನನ್ನನ್ನು ಈ ಪ್ರಕರಣದಲ್ಲಿ ಸಿಲುಕಿಸಿ ತೇಜೋವಧೆ ಮಾಡಲಾಗಿದೆ ಎಂದು ಆರೋಪಿಸಿದ ಜನಾರ್ದನ ರೆಡ್ಡಿ ಅವರು ಸಿಸಿಬಿ ಮೇಲೆ ಎಷ್ಟು ರಾಜಕೀಯ ಒತ್ತಡವಿದೆ ಎಂಬುದು ನನಗೆ ತಿಳಿದಿದೆ' ಎಂದು ಹೇಳಿದರು. ಸಿಸಿಬಿ ಅಧಿಕಾರಿಗಳ ವಿರುದ್ಧ ವಾಗ್ದಾಳಿ ನಡೆಸಿದರು.....

      Janardhana Reddy verbal attack on Alok Kumar

      ಜನಾರ್ದನ ರೆಡ್ಡಿ ಹೇಳಿದ್ದೇನು?

      * ಅಲೋಕ್ ಕುಮಾರ್ ಮತ್ತು ಡಿಸಿಪಿ ಗಿರೀಶ್ ಕರ್ನಾಟಕದ ನಂಬರ್ 1 ಅಧಿಕಾರಿಗಳು. ಇಂತಹ ಅಧಿಕಾರಿಗಳ ಅವಶ್ಯಕತೆ ಕರ್ನಾಟಕ ರಾಜ್ಯಕ್ಕಿಲ್ಲಲ್ಲ.

      * ರಾಜ್ಯದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಲ್ಲಿ ನಾನು ಮನವಿ ಮಾಡುತ್ತೇನೆ. ಅಲೋಕ್ ಕುಮಾರ್, ಗಿರೀಶ್ ಅವರಂತಹ ಅಧಿಕಾರಿಗಳನ್ನು ಜಮ್ಮ ಮತ್ತು ಕಾಶ್ಮೀರಕ್ಕೆ ಕಳುಹಿಸಿ

      * ರಾಜಕಾರಣಿಗಳ ಮಾತನ್ನು ತಪ್ಪದೇ ಕೇಳುವ ಇಂತಹ ಅಧಿಕಾರಿಗಳನ್ನು ಜಮ್ಮು ಮತ್ತು ಕಾಶ್ಮೀರಕ್ಕೆ ಕಳುಹಿಸಿದರೆ ಎಚ್.ಡಿ.ಕುಮಾರಸ್ವಾಮಿ ಅವರನ್ನು ದೇಶವೇ ಕೊಂಡಾಡುತ್ತದೆ.

      * ನನ್ನನ್ನು ಬಂಧನ ಮಾಡುವಂತಹ ಸಂದರ್ಭವೇ ಇರಲಿಲ್ಲ. ಆದರೂ ರಾಜಕೀಯ ಒತ್ತಡದಿಂದ ಬಂಧಿಸಿ ಪ್ರಕರಣದಲ್ಲಿ ಸಿಲುಕಿಸಲಾಯಿತು.

      * ಈ ಪ್ರಕರಣದಲ್ಲಿ ನನ್ನ ಪಾತ್ರ ಏನೂ ಇಲ್ಲ. ನ್ಯಾಯಮೂರ್ತಿಗಳು ಸಹ ಇದನ್ನು ಹೇಳಿದಾಗ ಪೊಲೀಸ್ ಅಧಿಕಾರಿಗಳು ತಲೆ ತಗ್ಗಿಸಿ ನಿಂತಿದ್ದರು.

      * ಸಿಸಿಬಿಯ ಅಧಿಕಾರಿಗಳ ಮೇಲೆ ರಾಜಕೀಯ ಒತ್ತಡವಿದೆ. ನಾನು ಬೆಂಗಳೂರು ಬಿಟ್ಟು ಎಲ್ಲೂ ಹೋಗಿಲ್ಲ. ನನ್ನ ತೇಜೋವಧೆ ಮಾಡಲು ಎಲ್ಲರೂ ಸೇರಿ ಪ್ರಯತ್ನ ನಡೆಸಿದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+