ಪ್ರೀತಿಯ ತಮ್ಮನ 'ಪೈಲ್ವಾನ್' ಸಿನಿಮಾಗೆ ರೆಡ್ಡಿ ಶುಭ ಹಾರೈಕೆ
Recommended Video
ಬೆಂಗಳೂರು, ಸೆಪ್ಟೆಂಬರ್ 12 : ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಸಿನಿಮಾ ಇಂದು ಬಿಡುಗಡೆಯಾಗುತ್ತಿದೆ. ಮಾಜಿ ಸಚಿವ ಜನಾರ್ದನ ರೆಡ್ಡಿ ಸುದೀಪ್ ಮತ್ತು ಚಿತ್ರತಂಡಕ್ಕೆ ಶುಭಾಶಯ ಕೋರಿದ್ದಾರೆ.
ಮಾಜಿ ಸಚಿವ ಜನಾರ್ದನ ರೆಡ್ಡಿ ತಮ್ಮ ಫೇಸ್ ಬುಕ್ ಪುಟದಲ್ಲಿ "ಕನ್ನಡದ ಹೆಮ್ಮೆಯ ಪೈಲ್ವಾನ್ ಚಿತ್ರ ಯಶಸ್ಸು ಕಾಣಲಿ" ಎಂದು ಶುಭ ಹಾರೈಸಿದ್ದಾರೆ. ಮೂರು ಸಾವಿರಕ್ಕೂ ಹೆಚ್ಚು ಚಿತ್ರ ಮಂದಿರಗಳಲ್ಲಿ ತೆರೆ ಕಾಣಲಿರುವ ಈ ಚಿತ್ರ ಕನ್ನಡ ಚಿತ್ರರಂಗದಲ್ಲಿ ಒಂದು ದಾಖಲೆಯಾಗಲಿದೆ ಎಂದು ಬಣ್ಣಿಸಿದ್ದಾರೆ.
"ನನ್ನ ಪ್ರೀತಿಯ ತಮ್ಮ, ಕೋಟ್ಯಂತರ ಅಭಿಮಾನಿಗಳ ಹೃದಯ ಗೆದ್ದಿರುವ ಸಾಮ್ರಾಟ ಕೆಚ್ಚೆದೆಯ ಹೆಮ್ಮೆಯ ಕಿಚ್ಚನ ಅತ್ಯಂತ ಸಾಹಸದಿಂದ ಬಹುಭಾಷೆಗಳಲ್ಲಿ ನಿರ್ಮಾಣವಾಗಿರುವ ಪೈಲ್ವಾನ್ ಚಿತ್ರ ವಿಶ್ವದಾದ್ಯಂತ ವಿಜಯ ಸಾಧಿಸಲಿ ಎಂದು ತುಂಬು ಹೃದಯದಿಂದ ಹಾರೈಸುತ್ತೇನೆ" ಎಂದು ಹೇಳಿದ್ದಾರೆ.

"ಸ್ಯಾಂಡಲ್‌ವುಡ್‌ನಲ್ಲಿ ಹೆಮ್ಮೆಯ ಮೇರು ನಟ ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರ ಸೆಪ್ಟೆಂಬರ್ ಹನ್ನೆರಡರಂದು ತೆರೆ ಕಾಣಲಿದ್ದು, ಕನ್ನಡ , ತೆಲುಗು, ಹಿಂದಿ ಸೇರಿದಂತೆ 5 ಭಾಷೆಗಳಲ್ಲಿ ನಿರ್ಮಾಣವಾಗಿರುವ ಪೈಲ್ವಾನ್ ಚಿತ್ರ, ಇಡೀ ದೇಶದಲ್ಲಿ ಮಾತ್ರವಲ್ಲದೆ ವಿಶ್ವದಾದ್ಯಂತ ಗಮನ ಸೆಳೆದಿದೆ" ಎಂದು ಬರೆದಿದ್ದಾರೆ.
"ಮೂರು ಸಾವಿರಕ್ಕೂ ಹೆಚ್ಚು ಚಲನಚಿತ್ರ ಮಂದಿರಗಳಲ್ಲಿ ತೆರೆ ಕಾಣಲಿರುವ ಈ ಚಿತ್ರ ಕನ್ನಡ ಚಿತ್ರರಂಗದಲ್ಲಿ ಒಂದು ದಾಖಲೆಯಾಗಲಿದೆ. ಈಗಾಗಲೇ ಬಾಲಿವುಡ್ ಮೇರು ನಟ ಅಮಿತಾಬ್ ಬಚ್ಚನ್ , ಸಲ್ಮಾನ್ ಖಾನ್, ಇನ್ನೋರ್ವ ಮೆಗಾ ಸ್ಟಾರ್ ಚಿರಂಜೀವಿ ಅವರೊಂದಿಗೆ ಅಭಿನಯಿಸಿರುವ ಸುದೀಪ್ ಚಿತ್ರ ಪ್ರೇಮಿಗಳ ಹೃದಯದಲ್ಲಿ ತನ್ನದೇ ಆದ ಸ್ಥಾನವನ್ನು ಪಡೆದುಕೊಂಡಿದ್ದಾರೆ" ಎಂದು ಜನಾರ್ದನ ರೆಡ್ಡಿ ಹೇಳಿದ್ದಾರೆ.

"ಬಿಡುಗಡೆಯಾಗಿರುವ ಟೀಸರ್, ಟ್ರೈಲರ್ ಹಾಗೂ ಹಾಡುಗಳ ಮೂಲಕ ಜನಮನ ಗೆದ್ದಿರುವ ಪೈಲ್ವಾನ್ ವಿಜಯಿಯಾಗಲಿ ಎಂದು ಹಾರೈಸುತ್ತೇನೆ. ಶ್ರಮ ವಹಿಸಿದ ಎಲ್ಲ ಸಿಬ್ಬಂದಿ ವರ್ಗದವರಿಗೆ ನನ್ನ ಶುಭಾಶಯಗಳು" ಎಂದು ಪೋಸ್ಟ್ ಹಾಕಿದ್ದಾರೆ.












Click it and Unblock the Notifications