ಯಡಿಯೂರಪ್ಪ ಹುಟ್ಟುಹಬ್ಬ: ನೆನಪಿನ ಅಂಗಳಕ್ಕೆ ಜಾರಿದ ಜನಾರ್ದನ ರೆಡ್ಡಿ
ಬೆಂಗಳೂರು, ಫೆಬ್ರವರಿ 27; ಕರ್ನಾಟಕ ಬಿಜೆಪಿಯ ಹಿರಿಯ ನಾಯಕ, ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹುಟ್ಟು ಹಬ್ಬದ ಹಿನ್ನಲೆಯಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಶುಭಾಶಯಗಳನ್ನು ಕೋರಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾದ ದಿನಗಳನ್ನು ನೆನಪು ಮಾಡಿಕೊಂಡು ನೆನಪಿನ ಅಂಗಳಕ್ಕೆ ಜಾರಿದ್ದಾರೆ.
ಫೆಬ್ರವರಿ 27ರಂದು ಬಿ. ಎಸ್. ಯಡಿಯೂರಪ್ಪ ಹುಟ್ಟುಹಬ್ಬ. ಅವರ 81ನೇ ಹುಟ್ಟು ಹಬ್ಬದ ಹಿನ್ನಲೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ನಾಯಕರು ಶುಭಾಶಯಗಳನ್ನು ಕೋರುತ್ತಿದ್ದಾರೆ. ಸದ್ಯ ಚುನಾವಣಾ ರಾಜಕೀಯದಿಂದ ವಿಶ್ರಾಂತಿ ಪಡೆದಿರುವ ಯಡಿಯೂರಪ್ಪ ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ.

ಜನಾರ್ದನ ರೆಡ್ಡಿ ಶುಭಾಶಯ: ಮಾಜಿ ಸಚಿವ, ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಮತ್ತು ಗಂಗಾವತಿ ಕ್ಷೇತ್ರದ ಶಾಸಕ ಜನಾರ್ದನ ರೆಡ್ಡಿ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪಗೆ ಹುಟ್ಟು ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಈ ಕುರಿತು ಅವರು ಫೇಸ್‌ಬುಕ್ ಪೋಸ್ಟ್ ಹಾಕಿದ್ದಾರೆ.
"ಬಡವರ ಬಂಧು, ರೈತ ನಾಯಕ, ನಮ್ಮೆಲ್ಲರ ನೆಚ್ಚಿನ ಆತ್ಮೀಯರಾದ ಮಾಜಿ ಮುಖ್ಯಮಂತ್ರಿಗಳಾದ ಬಿ. ಎಸ್. ಯಡಿಯೂರಪ್ಪನವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು" ಎಂದು ಹೇಳಿದ್ದಾರೆ.
"ಈ ನಾಡು ಕಂಡ ಅಪ್ರತಿಮ ಜನ ನಾಯಕ, ನೇಗಿಲ ಯೋಗಿ, ರೈತರ ಕಣ್ಮಣಿ, ಬಿಜೆಪಿ ಪಕ್ಷದ ಕಟ್ಟಾಳು, ಹುಟ್ಟು ಹೋರಾಟಗಾರರು ಹಾಗೂ ಈ ನಾಡಿನ ಮಾಜಿ ಮುಖ್ಯಮಂತ್ರಿಗಳಾಗಿದ್ದ ಬಿ. ಎಸ್. ಯಡಿಯೂರಪ್ಪನವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರುತ್ತೇನೆ"
"ರಾಜ್ಯ ಬಿಜೆಪಿ ಅಧ್ಯಕ್ಷರಾಗಿ, ವಿರೋಧ ಪಕ್ಷದ ನಾಯಕರಾಗಿ, ಉಪ ಮುಖ್ಯಮಂತ್ರಿಯಾಗಿ, ನಾಲ್ಕು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸುವ ಮೂಲಕ ಯಡಿಯೂರಪ್ಪನವರು ರಾಜ್ಯದ ಜನ ಮೆಚ್ಚಿದ ಜನನಾಯಕರಾಗಿದ್ದಾರೆ. ಅಲ್ಲದೆ ರಾಜ್ಯ ರಾಜಕೀಯ ಇತಿಹಾಸದಲ್ಲಿ ದೃಢ ತೀರ್ಮಾನಗಳ ಮೂಲಕ ತಮ್ಮದೇ ಆದ ಛಾಪು ಮೂಡಿಸಿದ ಮಹಾನ್ ನಾಯಕರು ನಮ್ಮ ಮಾಜಿ ಮುಖ್ಯಮಂತ್ರಿಗಳಾದ ಬಿ. ಎಸ್. ಯಡಿಯೂರಪ್ಪನವರು" ಎಂದು ಬಣ್ಣಿಸಿದ್ದಾರೆ.
"ಬಿ. ಎಸ್. ಯಡಿಯೂರಪ್ಪನವರೊಂದಿಗೆ ನನ್ನದು ವಿಶೇಷವಾದ ಬಾಂಧವ್ಯವಿದೆ. 2008ರಲ್ಲಿ ದಕ್ಷಿಣ ಭಾರತದಲ್ಲಿ ಮೊಟ್ಟ ಮೊದಲ ಬಾರಿಗೆ ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಲು ನಾನು ಅವರೊಂದಿಗೆ ರಾಜ್ಯದ ನೂರಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಪ್ರಚಾರವನ್ನು ಕೈಗೊಂಡು, ಬಿಜೆಪಿ ಪಕ್ಷವು ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಅಳಿಲು ಸೇವೆಯನ್ನು ಸಲ್ಲಿಸುವ ಮೂಲಕ ಬಿ. ಎಸ್. ಯಡಿಯೂರಪ್ಪನವರ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಾಗ, ಪಕ್ಷದ ಲಕ್ಷಾಂತರ ಕಾರ್ಯಕರ್ತರು, ಅಭಿಮಾನಿಗಳೊಂದಿಗೆ ನಾನು ಸಂತೋಷಪಟ್ಟು ಸಂಭ್ರಮಿಸಿದ್ದೆ" ಎಂದು ಹಿಂದಿನ ದಿನಗಳ ನೆನೆಪು ಮಾಡಿಕೊಂಡಿದ್ದಾರೆ.
"ಅಂದು ನಾನು ಯಡಿಯೂರಪ್ಪನವರ ಸಚಿವ ಸಂಪುಟದ ಸದಸ್ಯನಾಗಿ ರಾಜ್ಯದಾದ್ಯಂತ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಅವರು ನೀಡಿರುವ ಸಹಕಾರವನ್ನು ನಾನೆಂದಿಗೂ ಮರೆಯಲು ಸಾಧ್ಯವಿಲ್ಲ. ಅದೇ ರೀತಿಯಲ್ಲಿ ಅಲವು ಬಾರಿ ಚುನಾವಣಾ ಪ್ರಚಾರದ ವೇಳೆ ನಾನು ಯಡಿಯೂರಪ್ಪನವರೊಂದಿಗೆ ವೇದಿಕೆ ಹಂಚಿಕೊಂಡಿರುವುದು ಹಾಗೂ ಅನೇಕ ಬಾರಿ ನಮ್ಮ ಕುಟುಂಬದ ಕಾರ್ಯಕ್ರಮಗಳಲ್ಲಿ ಅವರು ಪಾಲ್ಗೊಂಡಿರುವುದು ನನ್ನ ಅದೃಷ್ಟವೆಂದೆ ಭಾವಿಸುತ್ತೇನೆ" ಎಂದು ಜನಾರ್ದನ ರೆಡ್ಡಿ ಹೇಳಿದ್ದಾರೆ.
"ನಮ್ಮ ನಾಡಿನ ನೆಚ್ಚಿನ ಮುಖ್ಯಮಂತ್ರಿಗಳಾಗಿದ್ದ BS Yediyurappaನವರು ಸಂತೋಷದಿಂದ ಬಾಳಲಿ, ಆ ದೇವರು ಅವರಿಗೆ ಆರೋಗ್ಯ, ಶ್ರೇಯಸ್ಸು ದಯಪಾಲಿಸಲಿ ಎಂದು ಪ್ರಾರ್ಥಿಸುತ್ತಾ, ಅವರಿಗೆ ಮತ್ತೊಮ್ಮೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರುತ್ತೇನೆ" ಎಂದು ಪೋಸ್ಟ್ ಹಾಕಿದ್ದಾರೆ.
2018ರ ವಿಧಾನಸಭೆ ಚುನಾವಣೆ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಿತು. ಈ ಸರ್ಕಾರ ಬಹುಮತ ಕಳೆದುಕೊಂಡು ಪತನಗೊಂಡ ಬಳಿಕ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿತು. ಬಿ. ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾದರು.
2021ರ ಜುಲೈ 26ರಂದು ಯಡಿಯೂರಪ್ಪ ವಯಸ್ಸಿನ ಕಾರಣಕ್ಕೆ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದರು. ಬಳಿಕ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದರು. ಸದ್ಯ ಅವರ ಪುತ್ರ ಬಿ. ವೈ. ವಿಜಯೇಂದ್ರ ಶಿಕಾರಿಪುರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.
-
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ












Click it and Unblock the Notifications