ನಾನು ನರೇಂದ್ರ ಮೋದಿ ಅವರಷ್ಟು ಪ್ರಬುದ್ಧನಲ್ಲ
ಬೆಂಗಳೂರು, ಆ.21 : "ನಾನು ನರೇಂದ್ರ ಮೋದಿ ಅವರಷ್ಟು ಪ್ರಬುದ್ಧನಲ್ಲ. ಆದ್ದರಿಂದಲೇ ರಾಜಕೀಯವಾಗಿ ಹಲವು ತಪ್ಪು ನಿರ್ಧಾರಗಳನ್ನು ತೆಗೆದುಕೊಂಡಿದ್ದೆ, ಸಂಘ ಪರಿವಾರದ ಗರಡಿಯಲ್ಲಿ ಬೆಳೆದ ನಾನು ಹಣ ಮತ್ತು ಅಧಿಕಾರದ ಆಸೆಯಿಂದ ಬಿಜೆಪಿಸ ಸೇರುತ್ತಿಲ್ಲ" ಎಂದು ನಿವೃತ್ತ ಪೊಲೀಸ್ ಅಧಿಕಾರಿ ಶಂಕರ ಮಹಾದೇವ ಬಿದರಿ ಹೇಳಿದ್ದಾರೆ.
ಬುಧವಾರ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಬೆಂಬಲಿಗರೊಂದಿಗೆ ಶಂಕರ ಬಿದರಿ ಅವರು ಬಿಜೆಪಿಗೆ ಸೇರ್ಪಡೆಯಾದರು. ನಂತರ ಮಾತನಾಡಿದ ಅವರು, ನಾನು ಹಿಂದೆ ಸೇರಿದ್ದ ಪಕ್ಷದ ನಾಯಕರು ನನ್ನನ್ನು ಸಂಘ ಪರಿವಾರದವನು ಎಂಬ ಅನುಮಾನದಿಂದ ನೋಡಿದರು. ನನ್ನನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಿಲ್ಲ. ಆದ್ದರಿಂದ ಪಕ್ಷವನ್ನು ಬಿಡಬೇಕಾಯಿತು ಎಂದು ತಿಳಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ, ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಸಿ.ಟಿ.ರವಿ ಮುಂತಾದ ನಾಯಕರು ಶಂಕರ ಬಿದರಿ ಅವರಿಗೆ ಪಕ್ಷದ ಬಾವುಟ ನೀಡುವ ಮೂಲಕ ಅವರನ್ನು ಬಿಜೆಪಿಗೆ ಬರಮಾಡಿಕೊಂಡರು. ಚಿತ್ರಗಳಲ್ಲಿ ನೋಡಿ ಬಿದರಿ ಬಿಜೆಪಿ ಸೇರ್ಪಡೆ

ಬಿಜೆಪಿಗೆ ಶಂಕರ ಬಿದರಿ ಸೇರ್ಪಡೆ
ನಿವೃತ್ತ ಪೊಲೀಸ್ ಮಹಾನಿರ್ದೇಶಕ ಮತ್ತು ಸರ್ವ ಜನಶಕ್ತಿ ಪಕ್ಷದ ಸಂಸ್ಥಾಪಕ ಶಂಕರ ಬಿದರಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ, ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಮಾಜಿ ಸಚಿವ ಸಿ.ಟಿ.ರವಿ ಮುಂತಾದ ನಾಯಕರು ಶಂಕರ ಬಿದರಿ ಅವರಿಗೆ ಪಕ್ಷದ ಬಾವುಟ ನೀಡುವ ಮೂಲಕ ಅವರನ್ನು ಬಿಜೆಪಿಗೆ ಬರಮಾಡಿಕೊಂಡರು.

ನರೇಂದ್ರ ಮೋದಿ ವಿಚಾರಧಾರೆ ಮೆಚ್ಚಿದ್ದೇನೆ
ಹಿಂದೆ ಸೇರಿದ್ದ ಪಕ್ಷದ ನಾಯಕರು ನನ್ನನ್ನು ಸಂಘ ಪರಿವಾರದವನು ಎಂಬ ಅನುಮಾನದಿಂದ ನೋಡಿದರು. ನನ್ನನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಿಲ್ಲ. ಆದ್ದರಿಂದ ಪಕ್ಷವನ್ನು ಬಿಡಬೇಕಾಯಿತು ಎಂದು ಹೇಳಿದರ ಶಂಕರಬಿದರಿ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ವಿಚಾರಧಾರೆಯನ್ನು ಮೆಚ್ಚಿ ಬಿಜೆಪಿ ಸೇರುತ್ತಿದ್ದೇನೆ ಎಂದು ತಿಳಿಸಿದರು.

ನಾನು ಸಂಘಪರಿವಾರದವನು
12 ವಯಸ್ಸಿನಲ್ಲೇ ನಾನು ಸಂಘ ಪರಿವಾರದ ಶಾಖೆಗೆ ಹೋಗುತ್ತಿದ್ದೆ. ಸಂಘದ ಸಹವಾಸ ನನ್ನಲ್ಲಿ ದೇಶಭಕ್ತಿಯನ್ನು ಬೆಳೆಸಿತು. ಶಿಸ್ತನ್ನು ಕಲಿಸಿತು ಎಂದು ಹೇಳಿದ ಶಂಕರ ಬಿದರಿ ನಾನು ಸಂಘಪರಿವಾರದವನು, ಹಣ ಮತ್ತು ಅಧಿಕಾರದ ಆಸೆಯಿಂದ ಬಿಜೆಪಿ ಸೇರುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

ಮೋದಿಯಂತೆ ಪ್ರಬುದ್ಧನಲ್ಲ
ನಾನು ನರೇಂದ್ರ ಮೋದಿ ಅವರಷ್ಟು ಪ್ರಬುದ್ಧನಲ್ಲ. ಆದ್ದರಿಂದ ರಾಜಕೀಯವಾಗಿ ಹಲವು ತಪ್ಪು ನಿರ್ಧಾರಗಳನ್ನು ತೆಗೆದುಕೊಂಡಿದ್ದೆ. ಈಗ ತಪ್ಪುಗಳ ಅರಿವಾಗಿದೆ. ಬಿಜೆಪಿ ಗಂಗಾನದಿ ಇದ್ದಂತೆ. ಪಕ್ಷ ಸೇರಲು ಯಾವುದೇ ಷರತ್ತು ವಿಧಿಸಿಲ್ಲ. ಯಾವುದೇ ಹುದ್ದೆಯನ್ನು ಬಯಸಿಲ್ಲ. ನನ್ನ ಸಾಮರ್ಥ್ಯ ನೋಡಿ ನಾಯಕರು ಕೆಲಸವಹಿಸಿದರೆ ಅದನ್ನು ಮಾಡುತ್ತೇನೆ ಎಂದರು.

ದೇವರಿಗೆ ವಿಶೇಷ ಪೂಜೆ
ಮಲ್ಲೇಶ್ವರಂ ಬಿಜೆಪಿ ಕಚೇರಿಗೆ ಆಗಮಿಸುವ ಮುನ್ನ ಶಂಕರ ಬಿದರಿ ಅವರು ಪತ್ನು ಸಮೇತರಾಗಿ ಮಹಾಗಣಪತಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply












Click it and Unblock the Notifications