ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದಲ್ಲಿ ಮತ್ತೆ ಕೋವಿಡ್ ಮಾರ್ಗಸೂಚಿ ಬದಲಿಸಿ ರಾಜ್ಯ ಸರ್ಕಾರ ಆದೇಶ

|
Google Oneindia Kannada News

ಬೆಂಗಳೂರು, ಮೇ 2: ಕೊರೊನಾ ಲಾಕ್‌ಡೌನ್ ಮಾರ್ಗಸೂಚಿಯನ್ನು ಕರ್ನಾಟಕ ಸರ್ಕಾರ ಮತ್ತೆ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿದೆ. ಬೆಂಗಳೂರು ನಗರ ವ್ಯಾಪ್ತಿ ಹಾಗೂ ರಾಜ್ಯದಲ್ಲಿ ಬೆಳಿಗ್ಗೆ 6ರಿಂದ ಮಧ್ಯಾಹ್ನ 12ರವರೆಗೆ ದಿನಸಿ ಅಂಗಡಿಗಳನ್ನು ತೆರೆಯಲು ಅವಕಾಶ ಕಲ್ಪಿಸಿದೆ.

ಹಾಪ್‌ಕಾಮ್ಸ್, ಹಾಲಿನ ಬೂತ್, ತಳ್ಳುವ ಗಾಡಿಗಳಿಗೆ ಬೆಳಿಗ್ಗೆ 6ರಿಂದ ಸಂಜೆ 6ರವರೆಗೂ ವ್ಯಾಪಾರಕ್ಕೆ ಅವಕಾಶ ನೀಡಲಾಗಿದೆ. ಆದರೆ ಸಂತೆ ಮತ್ತು ಮಾರುಕಟ್ಟೆಗಳು ಸಂಪೂರ್ಣ ಬಂದ್ ಆಗಿಯೇ ಇರಲಿದ್ದು, ಅವುಗಳಿಗೆ ವಿನಾಯಿತಿ ನೀಡಿಲ್ಲ.

ಮಾರುಕಟ್ಟೆಯಲ್ಲಿ ಜನಸಂದಣಿ ತಪ್ಪಿಸಲು ರಾಜ್ಯ ಸರ್ಕಾರ ಈ ಹೊಸ ನಿರ್ಧಾರ ಕೈಗೊಂಡಿದ್ದು, ಅವಶ್ಯಕ ವಸ್ತುಗಳ ವ್ಯಾಪಾರ ವಹಿವಾಟು ನಡೆಸಲು ಅನುಮತಿ ನೀಡಲಾಗಿದೆ. ಕೋವಿಡ್ ಮಾರ್ಗಸೂಚಿಗಳನ್ನು ಪಾಲನೆ ಮಾಡಿ ವ್ಯಾಪಾರ ಮಾಡಬೇಕು ಎಂದು ತಿಳಿಸಲಾಗಿದೆ.

Janata Curfew: Karnataka Govt Extends Grocery Shop Opening Time Till 12pm In The State

ಎಪಿಎಂಸಿ ಹಾಗೂ ದಿನಸಿ ಅಂಗಡಿಗಳಿಗೆ ಸಮಯ ನಿಗದಿ ಮಾಡಿರುವ ಸರ್ಕಾರ, ಬೆಳಿಗ್ಗೆ 6ರಿಂದ ಮಧ್ಯಾಹ್ನ 12ರವರೆಗೆ ಮಾತ್ರ ಅವಕಾಶ ಕಲ್ಪಿಸಿದೆ. ಅಲ್ಲದೆ ವ್ಯಾಪಾರಿಗಳು ಮಾರುಕಟ್ಟೆ ದರದಲ್ಲಿ ಹಣ್ಣು, ತರಕಾರಿ ಮಾರಾಟ ಮಾಡಬೇಕು. ಹೆಚ್ಚಿನ ಬೆಲೆಗೆ ಮಾರಾಟ ಮಾಡಿದರೆ ಕ್ರಮ ಕೈಗೊಳ್ಳಲಾಗುವುದು ಎಂಬ ಷರತ್ತು ವಿಧಿಸಲಾಗಿದೆ.

ಈ ಆದೇಶ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ನಗರಗಳಿಗೂ ಅನ್ವಯವಾಗಲಿದೆ. ಇದರ ಉಸ್ತುವಾರಿಯನ್ನು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ನೀಡಲಾಗಿದೆ.

Janata Curfew: Karnataka Govt Extends Grocery Shop Opening Time Till 12pm In The State

ಬೆಂಗಳೂರಿನಲ್ಲಿ ಶನಿವಾರ ಒಂದೇ ದಿನ 19,353 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 7,76,093ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಶನಿವಾರ 162 ಜನರು ಮೃತಪಟ್ಟಿದ್ದು, ಇನ್ನೂ 2,70,993 ಸಕ್ರಿಯ ಸೋಂಕಿತರಿದ್ದಾರೆ.

English summary
Janata Curfew: Karnataka Government has revised the Corona Lockdown Guidelines, extends grocery shop opening time till 12pm.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X