BJP candidates list: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡದಿರಲು ಇದೆ ಕಾರಣವೇ?

ಬೆಂಗಳೂರು, ಏಪ್ರಿಲ್. 10: ರಾಜ್ಯ ವಿಧಾನಸಭಾ ಚುನಾವಣೆಗೆ ಆಡಳಿತರೂಢ ಬಿಜೆಪಿ ಇನ್ನೂ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿಲ್ಲ. ಇದಕ್ಕೆ ಸಾಕಷ್ಟು ವಿಳಂಬವಾಗುತ್ತಿದ್ದು, ವಿಪಕ್ಷಗಳ ವ್ಯಂಗ್ಯಕ್ಕೆ ಗುರಿಯಾಗಬೇಕಾಗಿದೆ. ಇದರ ನಡುವೆಯೇ ಈಗ ಮತ್ತೊಮ್ಮೆ ಜಾತ್ಯಾತೀತ ಜನತಾದಳವೂ ಬಿಜೆಪಿ ಏಕೆ ಯಾಕೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿಲ್ಲ ಎಂಬುವುದಕ್ಕೆ ಸಾಕ್ಷಿ ಸಿಕ್ಕಿದೆ ಎಂದು ಲೇವಡಿ ಮಾಡಿದೆ.

ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೂ ಮೊದಲೇ ಬಿಜೆಪಿ ಕಚೇರಿಗೆ ಬಿಗಿ ಭದ್ರತೆ ಎಂಬ ಮಾಧ್ಯಮದ ವರದಿಯೊಂದರ ಸ್ಕ್ರೀನ್ ಶಾಟ್ ಹಂಚಿಕೊಂಡಿರುವ ಜೆಡಿಎಸ್, "ಈವರೆಗೂ ಕರ್ನಾಟಕ ಬಿಜೆಪಿ ಯಾಕೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿಲ್ಲ ಎಂಬುವುದಕ್ಕೆ ಸಾಕ್ಷಿ ಸಿಕ್ಕಿದೆ. 'ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೂ ಮೊದಲು ಕಚೇರಿಗೆ ಬಿಗಿ ಭದ್ರತೆ ಮಾಡಲಾಗಿದೆ' ಎಂದು ಮಾಧ್ಯಮಗಳು ವರದಿ ಮಾಡಿವೆ. ಅಧಿಕಾರ ಉಳಿಸಲು ರೌಡಿಗಳನ್ನು, ಕ್ರಿಮಿನಲ್‌ಗಳನ್ನು ಸಾಕಿಕೊಂಡಿದ್ದ ಬಿಜೆಪಿಗೆ ಅದುವೆ ತಲೆ ನೋವಾಗಿ ಪರಿಣಮಿಸಿದೆ" ಎಂದು ಜೆಡಿಎಸ್ ವ್ಯಂಗ್ಯವಾಡಿದೆ.

Janata Dal Secular Teases BJP Over Delaying its Candidates List

"ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಂಡಿದ್ದಲ್ಲದೆ, ಪ್ರಧಾನಿ ನರೇಂದ್ರ ಮೋದಿ ರೌಡಿಯೊಬ್ಬನಿಗೆ ಕೈಮುಗಿದಿದ್ದರು. ಇದೀಗ ಅವರ ಹೆಸರು ಹೇಳಿ ರೌಡಿಗಳು ಕೂಡಾ ಟಿಕೆಟ್ ಕೇಳುತ್ತಿರಬಹುದು. ಮೊದಲೆ ಕ್ರಿಮಿನಲ್‌ಗಳ ಪಕ್ಷ, ಇದೀಗ ಹೊಸ ಕ್ರಿಮಿನಲ್‌ಗಳ ಸೇರ್ಪಡೆಯಿಂದಾಗಿ, ಟಿಕೆಟ್ ಸಿಗದ ರೌಡಿಗಳ ಭಯದಿಂದ ಕಚೇರಿಗೆ ಬಿಗಿ ಭದ್ರತೆ ಮಾಡಿರಬಹುದು" ಎಂದು ಜೆಡಿಎಸ್ ಪಕ್ಷ ಬಿಜೆಪಿಯನ್ನು ಟೀಕಿಸಿದೆ.

"ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದಕ್ಕೂ ಮುನ್ನ ಪಕ್ಷದ ಕಚೇರಿಗೆ ನೂರಕ್ಕೂ ಹೆಚ್ಚು ಪೊಲೀಸರು ಇರುವ 2 ಕೆಎಸ್‌ಆರ್‌ಪಿ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ ಅಂದರೆ ಬಿಜೆಪಿ ಟಿಕೆಟ್ ಆಕಾಂಕ್ಷಿಗಳು ಎಷ್ಟೊಂದು ಡೇಂಜರ್ಸ್ ಆಗಿರಬೇಕಲ್ಲವೇ...? " ಎಂದು ಪಟ್ಟಿ ಬಿಡುಗಡೆಗು ಮುನ್ನ ಜಾತ್ಯಾತೀತ ಜನತಾದಳ ಬಿಜೆಪಿ ಕಾಲೆಳೆದಿದೆ.

ಎಐಎನ್‌ ಎಂಬ ಮಾಧ್ಯಮದ ವರದಿಯೊಂದರಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗು ಮೊದಲೇ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಗೆ ಬಿಗಿ ಪೊಲೀಸ್‌ ಬಂದೋಬಸ್ತ್ ನೀಡಲಾಗಿದೆ ಎಂದು ವರದಿಯಾಗಿದೆ. ಟಿಕೆಟ್ ಘೋಷಣೆ ಹಿನ್ನೆಲೆಯಲ್ಲಿ 100ಕ್ಕೂ ಹೆಚ್ಚು ಪೊಲೀಸರು ಇರುವ 2 ಕೆಎಸ್‌ಆರ್‌ಪಿ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ ಎನ್ನಲಾಗಿದೆ.

Janata Dal Secular Teases BJP Over Delaying its Candidates List

ಇದನ್ನೇ ವ್ಯಂಗ್ಯವಾಡಿರುವ ಜಾತ್ಯಾತೀತ ಜನತಾದಳ, ಕೆಎಸ್‌ಆರ್‌ಪಿ ತುಕಡಿಗಳನ್ನು ನಿಯೋಜನೆ ಮಾಡಬೇಕು ಎಂದರೆ ಬಿಜೆಪಿಯಲ್ಲಿನ ಟಿಕೆಟ್ ಆಕಾಂಕ್ಷಿಗಳು ಎಷ್ಟೊಂದು ಅಪಾಯಕಾರಿಗಳು ಆಗಿರಬೇಕಲ್ಲವೇ ಎಂದಿದೆ. ಈ ಹಿಂದೆ ಹಲವು ಮಂದಿ ರೌಡಿಗಳು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದ ಬಗ್ಗೆ ಸುದ್ದಿಯಾಗಿತ್ತು. ಆದರೆ,. ಟೀಕೆಗಳು ವ್ಯಕ್ತವಾದ ಹಿನ್ನೆಲೆ ಅವರ ಸದಸ್ಯತ್ವವನ್ನು ರದ್ದು ಮಾಡಲಾಗಿದೆ.

ಇನ್ನು, ದಿನ ದಿನಕ್ಕೂ ಕಂಗಂಟಾಗುತ್ತಿರುವ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಬಗ್ಗೆ ನವದೆಹಲಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದು, ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಏಪ್ರಿಲ್ 11 ಅಥವಾ 12 ರಂದು ಬಿಡುಗಡೆ ಮಾಡಲಾಗುವುದು. ಪಟ್ಟಿ ಅಂತಿಮಗೊಳಿಸುವ ಬಗ್ಗೆ ಯಾವುದೇ ಗೊಂದಲವಿಲ್ಲ ಎಂದು ಹೇಳಿದ್ದಾರೆ.

"ಬಹುಶಃ ಮೊದಲ ಪಟ್ಟಿಯನ್ನು ನಾಳೆ ಅಥವಾ ನಾಡಿದ್ದು(ಬುಧವಾರ) ಬಿಡುಗಡೆ ಮಾಡಲಾಗುವುದು. ಸೋಮವಾರ ಸಂಜೆ ಅದನ್ನು ಬಿಡುಗಡೆ ಮಾಡುವ ಸಾಧ್ಯತೆಯಿತ್ತು. ಆದರೆ ಹೆಚ್ಚಿನ ಚರ್ಚೆಗಳು ನಡೆಯಬೇಕಾಗಿರುವುದರಿಂದ ಮಂಗಳವಾರ ಅಥವಾ ಬುಧವಾರ ಬಿಡುಗಡೆ ಮಾಡಬಹುದು" ಎಂದು ಬಸವರಾಜ ಬೊಮ್ಮಾಯಿ ನವದೆಹಲಿಯಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಬಿಜೆಪಿ ಮೊದಲ ಪಟ್ಟಿಯಲ್ಲಿ 170 ರಿಂದ 180 ಅಭ್ಯರ್ಥಿಗಳಿರಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+