• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಜಂತಕಲ್ ಅಕ್ರಮ ಗಣಿಗಾರಿಕೆ: ಮಾಜಿ ಮುಖ್ಯಮಂತ್ರಿ ಎಚ್ಡಿಕೆಗೆ ದೊಡ್ಡ ರಿಲೀಫ್!

|

ಬೆಂಗಳೂರು, ಆಗಸ್ಟ್ 29: ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರನ್ನು ಬಹುವಾಗಿ ಕಾಡುತ್ತಿದ್ದ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ದೊಡ್ಡ ನೆಮ್ಮದಿಯ ಸುದ್ದಿ ಸಿಕ್ಕಿದೆ.

ಜಂತಕಲ್ ಅಕ್ರಮ ಮೈನಿಂಗ್ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಕೈಗೊಂಡಿದ್ದ ವಿಶೇಷ ತನಿಖಾ ತಂಡ(ಎಸ್​ಐಟಿ) ಸಲ್ಲಿಸಿದ್ದ ಹೊಸ ಚಾರ್ಜ್​ಶೀಟ್​ ನಲ್ಲಿ ಎಚ್ ಡಿ ಕುಮಾರಸ್ವಾಮಿ ಅವರ ಹೆಸರು ಉಲ್ಲೇಖಿಸಿಲ್ಲ.

"ಜಂತಕಲ್ ಅಕ್ರಮ ಮೈನಿಂಗ್ ಪ್ರಕರಣದಲ್ಲಿ ಕುಮಾರಸ್ವಾಮಿ ಶಾಮೀಲಾಗಿದ್ದಾರೆ" ಎಂದು ಆರೋಪಿಸಲಾಗಿತ್ತು. ದಾವಣಗೆರೆ ಜಿಲ್ಲೆ ಚನ್ನಗಿರಿಯ ಸಾಮಾಜಿಕ ಕಾರ್ಯಕರ್ತ ಹರೀಶ ಹಳ್ಳಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಸಿಎಂ, ಕಾನೂನು ಇಲಾಖೆ ಕಾರ್ಯದರ್ಶಿ, ಲೋಕಾಯುಕ್ತ ರಿಜಿಸ್ಟ್ರಾರ್ ಅವರನ್ನು ಪ್ರತಿವಾದಿಗಳಾಗಿಸಲಾಗಿತ್ತು.

ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಐಪಿಸಿ ಸೆಕ್ಷನ್ 420, 465,467,468, 471 ಹಾಗೂ 120 (ಬಿ) ಮತ್ತು ಭ್ರಷ್ಟಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಆದರೆ, ಮಾಜಿ ಮುಖ್ಯಮಂತ್ರಿ ವಿರುದ್ಧ ಯಾವುದೇ ಸೂಕ್ತ ಸಾಕ್ಷ್ಯ ಸಿಗದ ಕಾರಣ ಅವರ ಹೆಸರನ್ನು ದೋಷರೋಪಣ ಪಟ್ಟಿಯಿಂದ ಹೊರಗಿಡಲಾಗಿದೆ.

ಎಚ್ಡಿಕೆ ಕಾಡುತ್ತಿರುವ ಜಂತಕಲ್ ಕೇಸ್, ಹೈಕೋರ್ಟಿನಲ್ಲಿ ಮತ್ತೆ ವಿಚಾರಣೆ

   ಜನಾರ್ಧನ ರೆಡ್ಡಿ ಹೊಸ ಟಾರ್ಗೆಟ್ ಎಚ್ ಡಿ ಕುಮಾರಸ್ವಾಮಿ Oneindia Kannada

   ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು ಸಲ್ಲಿಸಿರುವ ಅಕ್ರಮ ಗಣಿಗಾರಿಕೆ ವರದಿಯಲ್ಲಿ ಉಲ್ಲೇಖಿಸಿದ್ದಾರೆ, ಇದೇ ವರದಿ ಆಧರಿಸಿ ವಕೀಲ ವಿನೋದ್ ಕುಮಾರ್ ಮತ್ತು ಸಾಮಾಜಿಕ ಹೋರಾಟಗಾರ ಟಿ.ಜೆ. ಅಬ್ರಾಹಂ ಅವರು ಲೋಕಾಯುಕ್ತಕ್ಕೆ ಖಾಸಗಿ ದೂರು ಸಲ್ಲಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

   ಎಲ್ಲರಿಗೂ ಜಾಮೀನು ನೀಡಲಾಗಿದೆ

   ಎಲ್ಲರಿಗೂ ಜಾಮೀನು ನೀಡಲಾಗಿದೆ

   ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ ಜಂತಕಲ್ ಮೈನಿಂಗ್ ಕಂಪನಿ ವ್ಯವಸ್ಥಾಪಕ ನಿರ್ದೇಶಕರ ವಿರುದ್ಧ ದೂರು ದಾಖಲಾಗಿತ್ತು. ಪ್ರಕರಣ ರದ್ದುಗೊಳಿಸುವಂತೆ ಕುಮಾರಸ್ವಾಮಿ ಹೈಕೋರ್ಟ್ ಮೊರೆ ಹೋಗಿದ್ದರು. ಕೋರ್ಟ್ ಪ್ರಕರಣದ ರದ್ದು ಮಾಡಿತ್ತು. ಕುಮಾರಸ್ವಾಮಿ ಸೇರಿದಂತೆ ಎಲ್ಲಾ ಆರೋಪಿಗಳು ಪ್ರಕರಣದಲ್ಲಿ ಜಾಮೀನು ಪಡೆದಿದ್ದಾರೆ.

   ದೋಷಾರೋಪ ಪಟ್ಟಿ ಸಲ್ಲಿಕೆ

   ದೋಷಾರೋಪ ಪಟ್ಟಿ ಸಲ್ಲಿಕೆ

   ಆರೋಪಿ ಸ್ಥಾನದಲ್ಲಿರುವ ಕುಮಾರಸ್ವಾಮಿ ಅವರು ತಮ್ಮ ಪ್ರಭಾವ ಬೀರಿ ದೋಷಾರೋಪ ಪಟ್ಟಿ ಸಲ್ಲಿಕೆ ಆಗದಂತೆ ಮಾಡಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ. ಹೀಗಾಗಿ, ಸಿಎಂ ವಿರುದ್ಧ ತಕ್ಷಣ ಅಧೀನ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿ, ಕಾನೂನು ರೀತಿ ಕ್ರಮ ಜರುಗಿಸಲು ಲೋಕಾಯುಕ್ತ ಸಂಸ್ಥೆಗೆ ನಿರ್ದೇಶಿಸಬೇಕೆಂದು ಅರ್ಜಿದಾರರು ಕೋರಿದ್ದಾರೆ.

   ಕುಮಾರಸ್ವಾಮಿ 150 ಕೋಟಿ ಲಂಚ ಪಡೆದ ಆರೋಪ

   ಕುಮಾರಸ್ವಾಮಿ 150 ಕೋಟಿ ಲಂಚ ಪಡೆದ ಆರೋಪ

   ಜಂತಕಲ್ ಮೈನಿಂಗ್ ಕಂಪೆನಿಯಿಂದ ಕುಮಾರಸ್ವಾಮಿ 150 ಕೋಟಿ ಲಂಚ ಪಡೆದಿದ್ದಾರೆ ಎಂದು 2007ರಲ್ಲಿ ಜನಾರ್ದನ ರೆಡ್ಡಿ ಆರೋಪಿಸಿದ್ದರು. ಆ ಸಂದರ್ಭದಲ್ಲಿ ಈ ಪ್ರಕರಣದ ದೊಡ್ಡ ಮಟ್ಟಕ್ಕೆ ಸದ್ದು ಮಾಡಿತ್ತು. ಹಲವು ಏರಿಳಿತಗಳನ್ನು ಕಂಡ ಈ ಪ್ರಕರಣದ ಹಿಂದಿನ ವಿಚಾರಣೆಯಲ್ಲಿ ತಮಗೆ ಸಾಕ್ಷ್ಯಗಳನ್ನು ಒದಗಿಸಲು ಮೂರು ವಾರಗಳ ಕಾಲಾವಕಾಶ ಬೇಕು ಎಂದು ಜನಾರ್ದನ ರೆಡ್ಡಿ ಕೇಳಿಕೊಂಡಿದ್ದರು. ಎಸ್ ಐಟಿ ಮುಂದೆ ಎರಡು ಬಾರಿ ಹಾಜರಾದ ಗಾಲಿ ರೆಡ್ಡಿ ಅವರು ಸಾಕ್ಷ್ಯಗಳನ್ನು ನೀಡಿದ್ದಾಗಿ ಮಾಧ್ಯಮಗಳ ಮುಂದೆ ಹೇಳಿದರು.

   ಏನಿದು ಪ್ರಕರಣ?

   ಏನಿದು ಪ್ರಕರಣ?

   ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಹಿರೆ ಕಂದವಾಡಿ ಗ್ರಾಮದಲ್ಲಿ 21/8/2007 ರಿಂದ 14/2/2009ರ ತನಕ ನಡೆದಿದ್ದ ಗಣಿಗಾರಿಕೆ ಪ್ರಕರಣವಿದು. ಕುಮಾರಸ್ವಾಮಿ ಅವರು ಲಂಚ ಪಡೆದು ಗಣಿಗಾರಿಕೆಗೆ ಅನುಮತಿ ನೀಡಿದ್ದಾರೆ ಎಂಬುದು ಆರೋಪ. ಗಣಿಗಾರಿಕೆಗೆ ಅನುಮತಿ ನೀಡಿದ್ದಕ್ಕಾಗಿ ಜಂತಕಲ್ ಮೈನಿಂಗ್ ಕಂಪನಿ ವಿಶ್ವಭಾರತಿ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿಯಿಂದ ಅನಿತಾ ಕುಮಾರಸ್ವಾಮಿ ಅವರಿಗೆ ನಿವೇಶನ ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

   ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

   English summary
   Janthakal Mining Case: Former CM HD Kumaraswamy get big releif as latest Chargesheet filed by SIT doesn't mention Kumaraswamy's name.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X
   We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more