ಎಚ್ಡಿಕೆ ಕಾಡುತ್ತಿರುವ ಜಂತಕಲ್ ಕೇಸ್, ಹೈಕೋರ್ಟಿನಲ್ಲಿ ಮತ್ತೆ ವಿಚಾರಣೆ

Recommended Video

      ಎಚ್ ಡಿ ಕುಮಾರಸ್ವಾಮಿಗೆ ಮತ್ತೆ ಸಂಕಷ್ಟ | Oneindia Kannada

      ಬೆಂಗಳೂರು, ಫೆಬ್ರವರಿ 15 : ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಜಂತಕಲ್ ಅಕ್ರಮ ಗಣಿಗಾರಿಕೆ ಹಗರಣ ಮತ್ತೊಮ್ಮೆ ಕಾಡತೊಡಗಿದೆ. ಈ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ಮತ್ತೆ ಕೈಗೆತ್ತಿಕೊಳ್ಳಲಿದೆ. ಕುಮಾರಸ್ವಾಮಿ ಅವರಿಗೆ ಸಿಕ್ಕಿದ್ದ ತಾತ್ಕಾಲಿಕ ನೆಮ್ಮದಿ ಹಾಳುಗೆಡುವಂಥ ಸುದ್ದಿ ಬಂದಿದೆ.

      ಎಚ್ ಡಿ ಕುಮಾರಸ್ವಾಮಿ ಅವರು ಮೊದಲ ಬಾರಿ ಸಿಎಂ ಆಗಿದ್ದಾಗ ಜಂತಕಲ್ ಎಂಟರ್​ಪ್ರೈಸಸ್​ನ ಗಣಿ ಪರವಾನಗಿ ನವೀಕರಣ ವಿಚಾರವಾಗಿ ಅವ್ಯವಹಾರ ನಡೆಸಿದ್ದರು ಎಂದು ಆರೋಪಿಸಲಾಗಿದೆ. ಎಚ್.ಡಿ. ಕುಮಾರಸ್ವಾಮಿ ವಿರುದ್ಧದ ದೋಷಾರೋಪ ಪಟ್ಟಿಯನ್ನು ವಿಚಾರಣಾಧೀನ ನ್ಯಾಯಾಲಯಕ್ಕೆ ಸಲ್ಲಿಸಬೇಕು ಹಾಗೂ ಸಿಎಂ ವಿರುದ್ಧ ಲೋಕಾಯುಕ್ತ ವಿಶೇಷ ತನಿಖಾ ತಂಡ(ಎಸ್​ಐಟಿ) ತನಿಖೆ ಕೈಗೊಳ್ಳಬೇಕು ಎಂದು ಕೋರಿ ದಾವಣಗೆರೆ ಜಿಲ್ಲೆ ಚನ್ನಗಿರಿಯ ಸಾಮಾಜಿಕ ಕಾರ್ಯಕರ್ತ ಹರೀಶ ಹಳ್ಳಿ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಸಿಎಂ, ಕಾನೂನು ಇಲಾಖೆ ಕಾರ್ಯದರ್ಶಿ, ಲೋಕಾಯುಕ್ತ ರಿಜಿಸ್ಟ್ರಾರ್ ಅವರನ್ನು ಪ್ರತಿವಾದಿಗಳಾಗಿದ್ದು, ಅರ್ಜಿ ವಿಚಾರಣೆ ದಿನಾಂಕ ಇನ್ನು ನಿಗದಿಯಾಗಿಲ್ಲ.

      ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ ಜಂತಕಲ್ ಮೈನಿಂಗ್ ಕಂಪನಿ ವ್ಯವಸ್ಥಾಪಕ ನಿರ್ದೇಶಕರ ವಿರುದ್ಧ ದೂರು ದಾಖಲಾಗಿತ್ತು. ಪ್ರಕರಣ ರದ್ದುಗೊಳಿಸುವಂತೆ ಕುಮಾರಸ್ವಾಮಿ ಹೈಕೋರ್ಟ್ ಮೊರೆ ಹೋಗಿದ್ದರು. ಕೋರ್ಟ್ ಪ್ರಕರಣದ ರದ್ದು ಮಾಡಿತ್ತು. ಕುಮಾರಸ್ವಾಮಿ ಸೇರಿದಂತೆ ಎಲ್ಲಾ ಆರೋಪಿಗಳು ಪ್ರಕರಣದಲ್ಲಿ ಜಾಮೀನು ಪಡೆದಿದ್ದಾರೆ.

      ಏನಿದು ಜಂತಕಲ್ ಮೈನಿಂಗ್ ಪ್ರಕರಣ

      ಏನಿದು ಜಂತಕಲ್ ಮೈನಿಂಗ್ ಪ್ರಕರಣ

      ಏನಿದು ಪ್ರಕರಣ? : ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಹಿರೆ ಕಂದವಾಡಿ ಗ್ರಾಮದಲ್ಲಿ 21/8/2007 ರಿಂದ 14/2/2009ರ ತನಕ ನಡೆದಿದ್ದ ಗಣಿಗಾರಿಕೆ ಪ್ರಕರಣವಿದು. ಕುಮಾರಸ್ವಾಮಿ ಅವರು ಲಂಚ ಪಡೆದು ಗಣಿಗಾರಿಕೆಗೆ ಅನುಮತಿ ನೀಡಿದ್ದಾರೆ ಎಂಬುದು ಆರೋಪ. ಗಣಿಗಾರಿಕೆಗೆ ಅನುಮತಿ ನೀಡಿದ್ದಕ್ಕಾಗಿ ಜಂತಕಲ್ ಮೈನಿಂಗ್ ಕಂಪನಿ ವಿಶ್ವಭಾರತಿ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿಯಿಂದ ಅನಿತಾ ಕುಮಾರಸ್ವಾಮಿ ಅವರಿಗೆ ನಿವೇಶನ ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

      ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಪ್ರಕರಣ

      ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಪ್ರಕರಣ

      ದೂರುದಾರರು ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದರು. ಕೋರ್ಟ್ ಪ್ರಕರಣದ ಮರು ವಿಚಾರಣೆ ನಡೆಸಲು ಸೂಚನೆ ನೀಡಿತ್ತು. ಆದ್ದರಿಂದ, ಲೋಕಾಯುಕ್ತ ಎಸ್‌ಐಟಿ ತನಿಖೆ ನಡೆಸಿ ವರದಿ ನೀಡಿದೆ. ಕುಮಾರಸ್ವಾಮಿ ಸೇರಿದಂತೆ ಎಲ್ಲಾ ಆರೋಪಿಗಳು ಪ್ರಕರಣದಲ್ಲಿ ಜಾಮೀನು ಪಡೆದಿದ್ದಾರೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದ್ದರೂ ಅವರಿಗೆ ಅಕ್ರಮವಾಗಿ ಪರವಾನಗಿ ನೀಡಲಾಗಿತ್ತು ಎಂಬ ಆರೋಪವಿದೆ.

      2 ಪ್ರಕರಣಗಳು ವಿಚಾರಣಾ ಹಂತದಲ್ಲಿವೆ

      2 ಪ್ರಕರಣಗಳು ವಿಚಾರಣಾ ಹಂತದಲ್ಲಿವೆ

      ಎಚ್.ಡಿ. ಕುಮಾರಸ್ವಾಮಿ 2018ರ ವಿಧಾನಸಭೆ ಚುನಾವಣೆಗೆ ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಆಗ ಸಲ್ಲಿಸಿದ ನಾಮಪತ್ರದ ಜತೆಗೆ ಜಂತಕಲ್ ಮೈನಿಂಗ್ ಹಗರಣ ಸಂಬಂಧ ತಮ್ಮ ವಿರುದ್ಧ ಅಧೀನ ನ್ಯಾಯಾಲಯಗಳಲ್ಲಿ 2 ಪ್ರಕರಣಗಳು ವಿಚಾರಣಾ ಹಂತದಲ್ಲಿವೆ ಎಂಬುದಾಗಿ ಘೋಷಿಸಿಕೊಂಡಿದ್ದಾರೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ. ಈ ಪ್ರಕರಣಗಳು ಯಾವ ಹಂತದಲ್ಲಿವೆ ಎಂಬ ಮಾಹಿತಿ ಒದಗಿಸುವಂತೆ ಆರ್​ಟಿಐ ಕಾಯ್ದೆಯಡಿ ಲೋಕಾಯುಕ್ತ ರಿಜಿಸ್ಟ್ರಾರ್​ಗೆ ಅರ್ಜಿ ಸಲ್ಲಿಸಿದ್ದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

      ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿಲ್ಲ ಎಂದು ದೂರು

      ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿಲ್ಲ ಎಂದು ದೂರು

      ಆರೋಪಿ ಸ್ಥಾನದಲ್ಲಿರುವ ಕುಮಾರಸ್ವಾಮಿ ಅವರು ತಮ್ಮ ಪ್ರಭಾವ ಬೀರಿ ದೋಷಾರೋಪ ಪಟ್ಟಿ ಸಲ್ಲಿಕೆ ಆಗದಂತೆ ಮಾಡಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ. ಹೀಗಾಗಿ, ಸಿಎಂ ವಿರುದ್ಧ ತಕ್ಷಣ ಅಧೀನ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿ, ಕಾನೂನು ರೀತಿ ಕ್ರಮ ಜರುಗಿಸಲು ಲೋಕಾಯುಕ್ತ ಸಂಸ್ಥೆಗೆ ನಿರ್ದೇಶಿಸಬೇಕೆಂದು ಅರ್ಜಿದಾರರು ಕೋರಿದ್ದಾರೆ. ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು ಸಲ್ಲಿಸಿರುವ ಅಕ್ರಮ ಗಣಿಗಾರಿಕೆ ವರದಿಯಲ್ಲಿ ಉಲ್ಲೇಖಿಸಿದ್ದಾರೆ, ಇದೇ ವರದಿ ಆಧರಿಸಿ ವಕೀಲ ವಿನೋದ್ ಕುಮಾರ್ ಮತ್ತು ಸಾಮಾಜಿಕ ಹೋರಾಟಗಾರ ಟಿ.ಜೆ. ಅಬ್ರಾಹಂ ಅವರು ಲೋಕಾಯುಕ್ತಕ್ಕೆ ಖಾಸಗಿ ದೂರು ಸಲ್ಲಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

      ಎಚ್ಡಿಕೆ ವಿರುದ್ಧ ಲಂಚ ಪಡೆದ ಆರೋಪ

      ಎಚ್ಡಿಕೆ ವಿರುದ್ಧ ಲಂಚ ಪಡೆದ ಆರೋಪ

      ಜಂತಕಲ್ ಮೈನಿಂಗ್ ಕಂಪೆನಿಯಿಂದ ಕುಮಾರಸ್ವಾಮಿ 150 ಕೋಟಿ ಲಂಚ ಪಡೆದಿದ್ದಾರೆ ಎಂದು 2007ರಲ್ಲಿ ಜನಾರ್ದನ ರೆಡ್ಡಿ ಆರೋಪಿಸಿದ್ದರು. ಆ ಸಂದರ್ಭದಲ್ಲಿ ಈ ಪ್ರಕರಣದ ದೊಡ್ಡ ಮಟ್ಟಕ್ಕೆ ಸದ್ದು ಮಾಡಿತ್ತು. ಹಲವು ಏರಿಳಿತಗಳನ್ನು ಕಂಡ ಈ ಪ್ರಕರಣದ ಹಿಂದಿನ ವಿಚಾರಣೆಯಲ್ಲಿ ತಮಗೆ ಸಾಕ್ಷ್ಯಗಳನ್ನು ಒದಗಿಸಲು ಮೂರು ವಾರಗಳ ಕಾಲಾವಕಾಶ ಬೇಕು ಎಂದು ಜನಾರ್ದನ ರೆಡ್ಡಿ ಕೇಳಿಕೊಂಡಿದ್ದರು. ಎಸ್ ಐಟಿ ಮುಂದೆ ಎರಡು ಬಾರಿ ಹಾಜರಾದ ಗಾಲಿ ರೆಡ್ಡಿ ಅವರು ಸಾಕ್ಷ್ಯಗಳನ್ನು ನೀಡಿದ್ದಾಗಿ ಮಾಧ್ಯಮಗಳ ಮುಂದೆ ಹೇಳಿದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+