Karnataka Industry: ₹4,000 ಕೋಟಿ ಹೂಡಿಕೆ ಮಾಡಲಿವೆ ಜಪಾನ್ ಕಂಪನಿಗಳು: ಎಂಬಿ ಪಾಟೀಲ್

ಬೆಂಗಳೂರು, ಸೆಪ್ಟಂಬರ್ 15: ಕಳೆದ ವಾರ ತಾವು ಕೈಗೊಂಡ ಜಪಾನ್‌ ಭೇಟಿಯಿಂದಾಗಿ ಆ ದೇಶದ ವಿವಿಧ ಉದ್ಯಮಗಳು ಕರ್ನಾಟಕದ ರಾಜ್ಯದಲ್ಲಿ 4,000 ಕೋಟಿ ರೂಪಾಯಿಗಳಿಗೂ ಹೆಚ್ಚು ಬಂಡವಾಳ ಹೂಡಿಕೆ ಮಾಡುವುದು ಖಚಿತವಾಗಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಅವರು ಅಧಿಕೃತ ಮಾಹಿತಿ ನೀಡಿದ್ದಾರೆ.

ಜಪಾನ್‌ನಿಂದ ಮರಳಿ ಬಂದ ಸಚಿವ ಎಂಬಿ ಪಾಟೀಲ್ ಅವರು, ಸೋಮವಾರ ತಮ್ಮ ನಿವಾಸದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದರು. ಹೂಡಿಕೆ ಆಕರ್ಷಿಸುವ ದೃಷ್ಟಿಯಿಂದ ಜಪಾನ್‌ಗೆ ಇದು ತಮ್ಮ ಎರಡನೇ ಭೇಟಿಯಾಗಿದೆ. ಜಪಾನಿನ ಉದ್ಯಮಗಳ ಪ್ರಮುಖರು ಸಾಂಪ್ರದಾಯಿಕ ಆಲೋಚನೆ ಉಳ್ಳವರಾಗಿದ್ದಾರೆ. ಸಾಕಷ್ಟು ದೀರ್ಘವಾಗಿ ಯೋಚಿಸಿ ನಿರ್ಧಾರಕ್ಕೆ ಬರುತ್ತಾರೆ. ಇವತ್ತು ದೇಶದಲ್ಲಿರುವ ಜಪಾನಿ ಉದ್ದಿಮೆಗಳಲ್ಲಿ ಶೇಕಡ 50 ರಷ್ಟು ಕಂಪನಿಗಳು ಕರ್ನಾಟಕದಲ್ಲೇ ಇವೆ. ಹಿಂದೆ ತಾವು ಜಪಾನ್‌ ಮತ್ತು ದಕ್ಷಿಣ ಕೊರಿಯಾಗೆ ಭೇಟಿ ನೀಡಿದ್ದಾಗ 6,500 ಕೋಟಿ ರೂ. ಹೂಡಿಕೆಯನ್ನು ಸೆಳೆಯಲಾಗಿತ್ತು ಎಂದು ಅವರು ವಿವರಿಸಿದರು.

Japan Companies Ready to Invest Rs 4 000 Crore in Karnataka Says Minister MB Patil

ಈ ಬಾರಿಯ ಭೇಟಿಯಲ್ಲಿ ಹೋಂಡಾ ಮುಂತಾದ ಕಂಪನಿಗಳು ರಾಜ್ಯದಲ್ಲಿ ವಿಸ್ತರಣೆ, ಮುಕುಂದ್‌ ಸುಮಿ ಸ್ಟೀಲ್ಸ್‌ ಕಂಪನಿ ಜತೆ ಸಹಭಾಗಿತ್ವ ಮುಂತಾದ ವಿಚಾರ ಕುರಿತು ಚರ್ಚಿಸಲಾಗಿದೆ. ಏತನ್ಮಧ್ಯೆ, ಅಮೆರಿಕವು ಎಲೆಕ್ಟ್ರಾನಿಕ್‌ ಮತ್ತು ಫಾರ್ಮಾ ಉತ್ಪನ್ನಗಳನ್ನು ಬಿಟ್ಟು ಭಾರತದ ಉಳಿದ ಉತ್ಪನ್ನಗಳ ಮೇಲೆ ಶೇಕಡ 50ರಷ್ಟು ಆಮದು ಸುಂಕ ವಿಧಿಸಿದೆ. ಇದೊಂದು ಬಿಕ್ಕಟ್ಟನ್ನು ಸೃಷ್ಟಿಸಿದೆ. ಇಂತಹ ಸಂದರ್ಭದಲ್ಲಿ ಹೂಡಿಕೆದಾರರು ನಿರ್ಧಾರಕ್ಕೆ ಬರುವುದು ಕಷ್ಟವಾಗುತ್ತದೆ. ಆದರೂ ಈ ಸಲದ ಭೇಟಿಯಲ್ಲಿ 4,000 ಕೋಟಿ ರೂ. ಹರಿದು ಬರಲಿರುವುದು ಸಮಾಧಾನದ ಸಂಗತಿಯಾಗಿದೆ ಎಂದು ಅವರು ನುಡಿದಿದ್ದಾರೆ.

ಕೆಲವು ಕಂಪನಿಗಳು ರಾಜ್ಯದಲ್ಲಿ ಕಡಿಮೆ ಬಂಡವಾಳವನ್ನೇ ಹೂಡಬಹುದು. ಆದರೆ ಇವೆಲ್ಲವೂ ನಮ್ಮ ಕೈಗಾರಿಕಾ ಕಾರ್ಯ ಪರಿಸರದ ಮೌಲ್ಯವರ್ಧನೆ ಮಾಡುತ್ತವೆ. ಜೊತೆಗೆ, ಉದ್ದಿಮೆದಾರರು ಹೂಡಿಕೆಯ ವಿಚಾರಕ್ಕೆ ಬಂದಾಗ ಶಾಂತಿಯಿಂದ ಕೂಡಿರುವ ವಾತಾವರಣವನ್ನು ಇಷ್ಟಪಡುತ್ತಾರೆ. ಇದನ್ನು ಕೂಡ ಎಲ್ಲರೂ ಗಮನಕ್ಕೆ ತೆಗೆದುಕೊಳ್ಳಬೇಕು. ದೇಶದ ಯಾವ ಭಾಗದಲ್ಲೂ ಬಂಡವಾಳ ಹೂಡಿಕೆಗೆ ಪ್ರತಿಕೂಲ ಎನಿಸುವಂತಹ ಪರಿಸ್ಥಿತಿ ನಿರ್ಮಾಣವಾಗಬಾರದು ಎಂದು ಪಾಟೀಲ ಆಶಿಸಿದ್ದಾರೆ.

ಸೌರ ಕೋಶ ತಯಾರಿಸುವ ಘಟಕ

ಕರ್ನಾಟಕದಲ್ಲಿ ಅಂದಾಜು ₹882 ಕೋಟಿ ವೆಚ್ಚದಲ್ಲಿ ಸೌರ ಕೋಶ ತಯಾರಿಸುವ ಘಟಕ ಸಾಪಿಸುವುದನ್ನು ಜಪಾನಿನ ಹೊಸೊಡಾ ಹೋಲ್ಡಿಂಗ್ಸ್‌ ಖಚಿತಪಡಿಸಿದೆ. ʼತೋಂಗ್‌ ತರ್‌ ಎನರ್ಜಿ ಸೊಲುಷನ್ಸ್‌ (ಟಿಟಿಇಎಸ್‌) ಸಹಯೋಗದಲ್ಲಿ ಈ ಯೋಜನೆ ಕಾರ್ಯಗತಗೊಳ್ಳಲಿದೆ. ಆರಂಭದಲ್ಲಿ ಟಿಟಿಇಎಸ್ ಈ ಯೋಜನೆಗೆ ₹490 ಕೋಟಿ ವೆಚ್ಚ ಮಾಡಲು ನಿರ್ಧರಿಸಿತ್ತು. ಫೆಬ್ರುವರಿಯಲ್ಲಿ ನಡೆದಿದ್ದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಈ ಯೋಜನೆಯ ಒಪ್ಪಂದಕ್ಕೆ ಅಂಕಿತ ಹಾಕಲಾಗಿತ್ತು ಎಂದು ಅವರು ಇತ್ತೀಚೆಗೆ ಪ್ರಕಟಣೆಯಲ್ಲಿ ತಿಳಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+