ಸಿಡಿ ಲೇಡಿಯಿಂದ ಹೈಕೋರ್ಟಿಗೆ ಪತ್ರ: ಸಿದ್ದರಾಮಯ್ಯ ಮಹತ್ವದ ಪ್ರತಿಕ್ರಿಯೆ

ಬೆಂಗಳೂರು, ಮಾರ್ಚ್ 29: ಹಲವು ವಿಡಿಯೋಗಳನ್ನು ಬಿಡುಗಡೆ ಮಾಡಿರುವ ಸಿಡಿ ಸಂತ್ರಸ್ತೆ, ಇನ್ನೂ ಒಂದೆ ಹೆಜ್ಜೆ ಮುಂದೆ ಹೋಗಿ, ರಾಜ್ಯ ಉಚ್ಚ ನ್ಯಾಯಾಲಯದ, ನ್ಯಾಯಮೂರ್ತಿಯವರಿಗೆ ಪತ್ರವನ್ನು ಬರೆದಿದ್ದಾರೆ.

Recommended Video

      ಯಡಿಯೂರಪ್ಪನನ್ನು ತರಾಟೆಗೆ ತೆಗೆದುಕೊಂಡ ಸಿದ್ದರಾಮಯ್ಯ | Oneindia Kannada

      ಪತ್ರದಲ್ಲಿ ಹಲವಾರು ಅಂಶಗಳನ್ನು ಸಂತ್ರಸ್ತೆ ಬರೆದಿದ್ದು, ನನಗೆ ರಮೇಶ್ ಜಾರಕಿಹೊಳಿಯವರಿಂದ ಜೀವ ಬೆದರಿಕೆಯಿದೆ, ಸಾಕ್ಷ್ಯ ನಾಶ ಮುಂತಾದ ವಿಚಾರಗಳನ್ನು ಪ್ರಸ್ತಾವಿಸಿದ್ದಾರೆ. ಈ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮೂಲಕ ತಮ್ಮ ಪ್ರತಿಕ್ರಿಯೆಯನ್ನು ನೀಡಿದ್ದಾರೆ.

      "ಸಿಡಿ ಹಗರಣದ ಯುವತಿ ತನಗೆ ಪ್ರಾಣ ಭಯ ಇದೆ ಎಂದು ರಾಜ್ಯದ ಹೈಕೋರ್ಟ್ ಮುಖ್ಯನ್ಯಾಯಾಧೀಶರಿಗೆ ಬರೆದಿದ್ದಾರೆನ್ನಲಾದ ಪತ್ರ ಗಾಬರಿ ಹುಟ್ಟಿಸುವಂತಿದೆ. ಮುಖ್ಯಮಂತ್ರಿ @BSYBJP ಅವರೇ ರಾಜ್ಯದಲ್ಲಿ ನಿಮ್ಮ ಸರ್ಕಾರ ಅಸ್ತಿತ್ವದಲ್ಲಿದೆಯೇ"ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

      Jarkiholi Case, CD Lady Letter To High Court Chief Justice, Siddaramaiah Reaction

      "ಸಂತ್ರಸ್ತ ಯುವತಿ ಪ್ರಾರಂಭದ ಆಡಿಯೋದಲ್ಲಿ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದೆ ಎಂದು ಹೇಳಿದ್ದಳು, ಈಗ ತನಗೆ ಪ್ರಾಣಭಯ ಇದೆ ಎಂದು ಪತ್ರ ಬರೆದಿದ್ದಾಳೆ. ಆ ಯುವತಿಯ ಪ್ರಾಣಕ್ಕೇನಾದರೂ ಅಪಾಯ ಎದುರಾದರೆ ರಾಜ್ಯದ ಮುಖ್ಯಮಂತ್ರಿ @BSYBJP, ಗೃಹಸಚಿವ @BSBommai ಮತ್ತು ಇಡೀ @BJP4Karnataka ಸರ್ಕಾರವೇ ಹೊಣೆಯಾಗುತ್ತದೆ"ಎಂದು ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.

      "ಹೈಕೋರ್ಟ್ ಮುಖ್ಯನ್ಯಾಯಾಧೀಶರಿಗೆ ಸಂತ್ರಸ್ತೆ ಯುವತಿ ಬರೆದ ಪತ್ರದಲ್ಲಿ ಎಸ್.ಐ.ಟಿ ಮೇಲೆಯೇ ಅಪನಂಬಿಕೆ ವ್ಯಕ್ತಪಡಿಸಿರುವುದು ಮಾತ್ರವಲ್ಲ, ಅವರು ಸಾಕ್ಷ್ಯನಾಶ ಮಾಡುತ್ತಿದ್ದಾರೆ, ತನ್ನ ವಿರೋಧಿಗಳ ಜೊತೆ ಷಾಮೀಲಾಗಿದ್ದಾರೆ ಎಂದೆಲ್ಲ ಆರೋಪಿಸಿರುವುದು ಗಂಭೀರವಾದ ವಿಷಯ"ಎಂದು ಸಿದ್ದರಾಮಯ್ಯ ಟ್ವೀಟ್ ನಲ್ಲಿ ಹೇಳಿದ್ದಾರೆ.

      "ಸಂತ್ರಸ್ತ ಯುವತಿ ನಿರಂತರವಾಗಿ ವಿಡಿಯೋ, ಪತ್ರಗಳನ್ನು ಬಿಡುಗಡೆ ಮಾಡುತ್ತಿದ್ದರೆ, ರಾಜ್ಯದ @CMofKarnataka, @BSBommai ಮತ್ತು ಪೊಲೀಸರು ನಿರಂತರವಾಗಿ ಸಭೆ ನಡೆಸುತ್ತಿದ್ದಾರೆ. ಫಲಿತಾಂಶ ಏನು?"

      "ಸಿಡಿ ಬಹಿರಂಗಗೊಂಡು 27 ದಿನಗಳು ಕಳೆದರೂ ಹಗರಣದ ಕೇಂದ್ರ ವ್ಯಕ್ತಿಯಾದ ಸಂತ್ರಸ್ತ ಯುವತಿಯ ವಿಚಾರಣೆ ನಡೆಸಲು ಸಾಧ್ಯವಾಗದ ಪೊಲೀಸರ ವೈಫಲ್ಯಕ್ಕೆ ಯಾರು ಹೊಣೆ @BJP4Karnataka ? ಅವರ ಮೇಲೆ ಪ್ರಭಾವ ಬೀರುತ್ತಿರುವವರು ಯಾರು? ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಕುಸಿದು ಬಿದ್ದಿರುವುದಕ್ಕೆ ಬೇರೆ ಸಾಕ್ಷಿ ಬೇಕೇ?

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+