ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಡಿ ಪ್ರಕರಣ: ಮಹಾನಾಯಕನಾಗಲು ಹೋಗಿ ಜೈಲುಹಕ್ಕಿ ಖಳನಾಯಕನಾದ ಕಥೆ

|
Google Oneindia Kannada News

ಬೆಂಗಳೂರು, ಮಾರ್ಚ್ 30: ರಮೇಶ್ ಜಾರಕಿಹೊಳಿಯವರದ್ದು ಎನ್ನಲಾಗುತ್ತಿರುವ ಸಿಡಿ ಪ್ರಕರಣವನ್ನು ಸರಕಾರ ನಿಭಾಯಿಸುತ್ತಿರುವ ರೀತಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದರು.

ಈ ಬಗ್ಗೆ ಟ್ವೀಟ್ ಮಾಡಿದ್ದ ಸಿದ್ದರಾಮಯ್ಯ, "ಸಂತ್ರಸ್ತ ಯುವತಿ ಪ್ರಾರಂಭದ ಆಡಿಯೋದಲ್ಲಿ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದೆ ಎಂದು ಹೇಳಿದ್ದಳು, ಈಗ ತನಗೆ ಪ್ರಾಣಭಯ ಇದೆ ಎಂದು ಪತ್ರ ಬರೆದಿದ್ದಾಳೆ. ಆ ಯುವತಿಯ ಪ್ರಾಣಕ್ಕೇನಾದರೂ ಅಪಾಯ ಎದುರಾದರೆ ರಾಜ್ಯದ ಮುಖ್ಯಮಂತ್ರಿ @BSYBJP, ಗೃಹಸಚಿವ @BSBommai ಮತ್ತು ಇಡೀ @BJP4Karnataka ಸರ್ಕಾರವೇ ಹೊಣೆಯಾಗುತ್ತದೆ"ಎಂದು ಸಿದ್ದರಾಮಯ್ಯ ಎಚ್ಚರಿಸಿದ್ದರು.

ಸಿಡಿ ಲೇಡಿ ಬರೆದಿರುವ ಪತ್ರ ಗಾಬರಿ ಹುಟ್ಟಿಸುವಂತಿದೆ: ಸಿದ್ದರಾಮಯ್ಯಸಿಡಿ ಲೇಡಿ ಬರೆದಿರುವ ಪತ್ರ ಗಾಬರಿ ಹುಟ್ಟಿಸುವಂತಿದೆ: ಸಿದ್ದರಾಮಯ್ಯ

ಇದಕ್ಕೆ ಬಿಜೆಪಿ ತಿರುಗೇಟು ನೀಡಿರುವ ಬಿಜೆಪಿ ಸಿದ್ದರಾಮಯ್ಯನವರಲ್ಲಿ ಕೆಲವು ಪ್ರಶ್ನೆಗಳನ್ನು ಕೇಳಿದೆ. "ಸೆಕ್ಷನ್‌ ಸ್ಪೆಷಲಿಸ್ಟ್‌ @siddaramaiah, ಸಂತ್ರಸ್ಥ ಯುವತಿಯ ಪೋಷಕರು ನೇರವಾಗಿ ನಿಮ್ಮ ಕೆಪಿಸಿಸಿ ಅಧ್ಯಕ್ಷ @DKShivakumar ಅವರ ಮೇಲೆ ಬೊಟ್ಟು ಮಾಡಿ, ಸಂತ್ರಸ್ಥೆಯನ್ನು ಒತ್ತೆಯಾಗಿರಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಹೀಗಿರುವಾಗ ಯುವತಿಗೆ ಅಪಾಯ ಎದುರಾದರೆ ಕಾನೂನಿನ ಪ್ರಕಾರ ಡಿಕೆಶಿ ಅವರು ಹೊಣೆ ಅಲ್ಲವೇ?" ಎಂದು ಬಿಜೆಪಿ ಪ್ರಶ್ನಿಸಿದೆ.

Ramesh Jarkiholi CD: BJP Questions To Opposition Leader Siddaramaiah

"ನಿಮಗೆ ಈಗ ಜ್ಞಾನೋದಯವಾಗಿದ್ದೇ!? ಸದನದಲ್ಲಿ ಬಜೆಟ್‌ ಮೇಲಿನ ಚರ್ಚೆಯ ಸಮಯವನ್ನು ಅಪ್ರಸ್ತುತವಾದ ವಿಚಾರಕ್ಕೆ ಬಳಸಿಕೊಂಡು ಸದನದ ಅಮೂಲ್ಯ ಸಮಯ ವ್ಯರ್ಥ ಮಾಡುವಾಗ ಇದೆಲ್ಲಾ ನೆನಪಿರಲಿಲ್ಲವೇ? ಡಿಕೆಶಿ ಹೆಸರು ಬರುತ್ತಲೇ ವರಸೆ ಬದಲಾಯಿಸಿಬಿಟ್ಟಿರಿ!" ಎಂದು ಬಿಜೆಪಿ ಟ್ವೀಟ್ ಮಾಡಿದೆ.

"ನಿಮ್ಮ ನೇತೃತ್ವದಲ್ಲಿ ಸತ್ಯ ಶೋಧನಾ ಸಮಿತಿ ರಚನೆಯಾದರೆ ಒಂದೇ ಕಲ್ಲಿನಲ್ಲಿ ಎರಡು ಹಣ್ಣು ಕೆಡವಲು ಸಾಧ್ಯವಿದೆ. ಒಂದು, ಪ್ರಕರಣಕ್ಕೆ ತಾರ್ಕಿಕ ಅಂತ್ಯ ಸಿಗುತ್ತದೆ. ಇನ್ನೊಂದು,
@DKShivakumar ನಡೆಸಿದ ಷಡ್ಯಂತ್ರವನ್ನು ಸಾಬೀತುಪಡಿಸಬಹುದು. ಒಬ್ಬ ಪ್ರತಿಸ್ಪರ್ಧಿಯನ್ನು ಕೆಡವಿದ ಸಾಧನೆ ನಿಮ್ಮದಾಗಲಿದೆ. ಏನಂತೀರಿ?" ಎಂದು ಸಿದ್ದರಾಮಯ್ಯನವರನ್ನು ಬಿಜೆಪಿ ಪ್ರಶ್ನಿಸಿದೆ.

"ಉಪ ಚುನಾವಣೆಯಲ್ಲಿ ಸಿಡಿ ಪ್ರಕರಣ ಬಿಜೆಪಿಗೆ ವಿರುದ್ಧವಾಗಲಿದೆ''

Recommended Video

CD ಪ್ರಕರಣಕ್ಕೆ ಸಂಬಂಧಪಟ್ಟ ಹಾಗೆ ಕೇಂದ್ರ ಸಚಿವ ಹೇಳಿದ್ದು ಹೀಗೆ! | Oneindia Kannada

"ಒಬ್ಬ ಅಮಾಯಕ ಹೆಣ್ಣು ಮಗಳನ್ನು ತಮ್ಮ ಸ್ವಾರ್ಥ ರಾಜಕಾರಣಕ್ಕಾಗಿ ಬಳಸಿಕೊಂಡು ರಾಜ್ಯದ "ಮಹಾ ನಾಯಕ" ಆಗಲು ಹೊರಟ "ಜೈಲು ಹಕ್ಕಿ" ಇಂದು "ಖಳನಾಯಕ" ಆಗಿರುವುದು ಕಾಂಗ್ರೆಸ್ ಪಕ್ಷದ ನೈತಿಕ ದಿವಾಳಿತನಕ್ಕೆ ಸಾಕ್ಷಿ" ಎಂದು ಬಿಜೆಪಿ, ವಿರೋಧ ಪಕ್ಷದ ನಾಯಕರನ್ನು ಪ್ರಶ್ನಿಸಿದೆ.

English summary
Ramesh Jarkiholi CD: BJP Questions To Opposition Leader Siddaramaiah.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X