ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಾರಕಿಹೊಳಿ ಸಿಡಿ ಹಗರಣ: ಸಿಬಿಐ ತನಿಖೆಗೆ ವಹಿಸಲು ಸರ್ಕಾರ ಸಿದ್ಧತೆ

ರಮೇಶ್‌ ಜಾರಕಿಹೊಳಿ ಸಿಡಿ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವ ಕುರಿತು ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ.

|
Google Oneindia Kannada News

ಬೆಂಗಳೂರು, ಫೆಬ್ರವರಿ 3: ಕರ್ನಾಟಕದ ಆಡಳಿತಾರೂಢ ಬಿಜೆಪಿ ಮಾಜಿ ಸಚಿವ ಮತ್ತು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರ ಲೈಂಗಿಕ ಸಿಡಿ ಹಗರಣದ ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಹಸ್ತಾಂತರಿಸಲು ಸಿದ್ಧತೆ ನಡೆಸಿದೆ.

ಜಾರಕಿಹೊಳಿ ಸಿಡಿ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ.

Jarkiholi CD case: ಅಮಿತ್ ಶಾ ಭೇಟಿಗೆ ತೆರಳಿದ ರಮೇಶ್ ಜಾರಕಿಹೊಳಿ, ಸಿಡಿ ಪ್ರಕರಣ ಸಿಬಿಐಗೆ ಹಸ್ತಾತರಿಸಲು ಮನವಿ Jarkiholi CD case: ಅಮಿತ್ ಶಾ ಭೇಟಿಗೆ ತೆರಳಿದ ರಮೇಶ್ ಜಾರಕಿಹೊಳಿ, ಸಿಡಿ ಪ್ರಕರಣ ಸಿಬಿಐಗೆ ಹಸ್ತಾತರಿಸಲು ಮನವಿ

ಈ ಸಂಬಂಧ ರಮೇಶ್ ಜಾರಕಿಹೊಳಿ ಅವರು ನನ್ನನ್ನು ಭೇಟಿ ಮಾಡಿ ಸಾಕಷ್ಟು ಮಾಹಿತಿ ನೀಡಿದ್ದು, ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಮನವಿ ಮಾಡಿದ್ದಾರೆ. ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಬೇಕೇ ಅಥವಾ ಬೇಡವೇ ಎಂಬುದನ್ನು ಸಿಎಂ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ನಿರ್ಧರಿಸಲಾಗುವುದು ಎಂದರು.

Jarkiholi CD scam: karnataka Government prepare to hand over CBI probe

ಸಿಡಿ ಮೂಲಕ ಯಾರನ್ನಾದರೂ ಮಾನಹಾನಿ ಮಾಡುವುದು ತಪ್ಪು. ಯಾರೂ ಈ ಕೃತ್ಯ ಎಸಗಬಾರದು, ಮಾಡಿದರೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ ಎಂದು ಜ್ಞಾನೇಂದ್ರ ಹೇಳಿದರು. ಸೆಕ್ಸ್ ಸಿಡಿ ಹಗರಣದ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸುವಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತಲೇ ಇದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವರನ್ನು ಬಂಧಿಸುವಂತೆ ಜಾರಕಿಹೊಳಿ ಒತ್ತಾಯಿಸಿದ್ದರು.

ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್, ರಾಜ್ಯದ ನೂರಾರು ರಾಜಕಾರಣಿಗಳು, ಅಧಿಕಾರಿಗಳು ಮತ್ತು ಬೆಂಗಳೂರಿನಲ್ಲಿ ಉನ್ನತ ಅಧಿಕಾರಿಗಳು ಸಿಡಿ ಹಗರಣದಲ್ಲಿ ಸಿಕ್ಕಿಬಿದ್ದಿದ್ದಾರೆ. ನನ್ನ ಬಳಿ 120 ಪುರಾವೆಗಳಿವೆ, ನಾನು ಅವುಗಳನ್ನು ಇಲ್ಲಿ ಬಿಡುಗಡೆ ಮಾಡುತ್ತಿಲ್ಲ, ಈ ವಿಷಯವನ್ನು ಸಿಬಿಐ ತನಿಖೆ ನಡೆಸಬೇಕು ಎಂದು ಅವರು ಇತ್ತೀಚೆಗೆ ನಡೆಸಿದ್ದ ಪ್ರತಿಕಾಗೋಷ್ಠಿಯಲ್ಲಿ ಹೇಳಿದ್ದರು.

Jarkiholi CD scam: karnataka Government prepare to hand over CBI probe

ಶಿವಕುಮಾರ್ ಸಂಚು ರೂಪಿಸಿ ತನ್ನನ್ನು ಇಲ್ಲಿ ಸಿಲುಕಿಸಿ ರಾಜಕೀಯವಾಗಿ ಮುಗಿಸಲು ಆ ವಿಡಿಯೋ ಮಾಡಿದ್ದಾರೆ ಎಂದು ಜಾರಕಿಹೊಳಿ ಆರೋಪಿಸಿದ್ದಾರೆ. ಮಾರ್ಚ್ 2021 ರಲ್ಲಿ ಬಿಡುಗಡೆಯಾದ ಸೆಕ್ಸ್ ಸಿಡಿ ರಾಜ್ಯದಲ್ಲಿ ಭಾರೀ ವಿವಾದವನ್ನು ಸೃಷ್ಟಿಸಿತ್ತು. ಈ ಹಿನ್ನೆಲೆಯಲ್ಲಿ ಪಕ್ಷ ಹಾಗೂ ಸರ್ಕಾರಕ್ಕೆ ಮುಜುಗರವಾಗುವ ಹಿನ್ನೆಲೆಯಲ್ಲಿ ಕರ್ನಾಟಕದ ಆಡಳಿತಾರೂಢ ಬಿಜೆಪಿ ಜಾರಕಿಹೊಳಿ ಅವರನ್ನು ಸಂಪುಟದಿಂದ ಕೈಬಿಟ್ಟಿತ್ತು.

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ನಡೆಸಿದ ಆಪರೇಷನ್ ಕಮಲದಲ್ಲಿ ಜಾರಕಿಹೊಳಿ ಪ್ರಮುಖ ಪಾತ್ರ ವಹಿಸಿದ್ದರು. ಜೆಡಿಎಸ್ ಮತ್ತು ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರ್ಕಾರದ ಪತನದ ಮುಂಚೂಣಿಯಲ್ಲಿದ್ದರು. ಇದಕ್ಕೂ ಮುನ್ನ ಜಾರಕಿಹೊಳಿ ವಿರುದ್ಧದ ಅತ್ಯಾಚಾರ ಆರೋಪಗಳ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು ಪ್ರಕರಣದಲ್ಲಿ 'ಬಿ ರಿಪೋರ್ಟ್' ಸಲ್ಲಿಸಿದ್ದು, ಅವರ ವಿರುದ್ಧ ಮಾಡಿರುವ ಆರೋಪ ಅಥವಾ ಇತರ ಆರೋಪಗಳನ್ನು ಸಾಬೀತುಪಡಿಸಲು ಯಾವುದೇ ಪುರಾವೆಗಳಿಲ್ಲ ಎಂದು ಹೇಳಿದೆ. ಈಗ ಸದ್ಯ ಜಾರಕಿಹೊಳಿ ಅವರು ರಾಜ್ಯದಲ್ಲಿ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದಾರೆ.

English summary
Karnataka's ruling BJP is all set to hand over former minister and BJP MLA Ramesh Jarkiholi's sex CD scam case to the Central Bureau of Investigation (CBI).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X