ಡಾ. ಮಂಜುನಾಥ್ ನಾಳೆ ಬಿಜೆಪಿ ಸೇರ್ಪಡೆ : ಈ ಕ್ಷೇತ್ರದಿಂದ ಸ್ಪರ್ಧೆ ಫಿಕ್ಸ್!
ಬೆಂಗಳೂರು, ಮಾರ್ಚ್ 13: ಲೋಕಸಭೆ ಚುನಾವಣೆ ಹಿನ್ನೆಲೆ ಬಿಜೆಪಿ ಹೈಕಮಾಂಡ್ ಟಿಕೆಟ್ ಹಂಚಿಕೆಯ ಸರ್ಕಸ್ ಜೋರಾಗಿದೆ. ಇತ್ತ ಕರ್ನಾಟಕ ಹಾಲಿ ಸಂಸದರಲ್ಲಿ ಹತ್ತು ಹೆಚ್ಚು ಜನರಿಗೆ ಟಿಕೆಟ್ ಕೈ ತಪ್ಪುವ ಆತಂಕ ಶುರುವಾಗಿದ್ದು, ಡಿ ಕೆ ಬದ್ರರ್ಸ್ ಗೆ ಠಕ್ಕರ್ ಕೊಡಲು ಕಮಲ-ದಳ ನಾಯಕರು ಮಾಸ್ಟರ್ ಪ್ಲಾನ್ ನಡೆಸಿದ್ದು, ಕೊನೆಗೂ ಮೊದಲ ಹಂತದಲ್ಲಿ ಯಶಸ್ವಿಯಾಗಿದ್ದಾರೆ.
ಜಯದೇವ ಹೃದ್ರೋಗ ಆಸ್ಪತ್ರೆಯ ಮಾಜಿ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಅವರು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದು ಖಚಿತವಾಗಿದೆ. ಈಗಾಗಲೇ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಅಳಿಯ ಡಾ ಮಂಜುನಾಥ್ ಅವರು ಕೆಲ ಬಿಜೆಪಿ ನಾಯಕರನ್ನು ಭೇಟಿಯಾಗುವ ಮೂಲಕ ಚುನಾವಣಾ ತಯಾರಿ ನಡೆಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಡಾ.ಸಿ.ಎನ್. ಮಂಜುನಾಥ್ ಸ್ಪರ್ಧಿಸುವುದು ಖಚಿತವಾಗಿದ್ದು, ಡಾ. ಮಂಜುನಾಥ್ ಅವರು ಬಿಜೆಪಿ ಸೇರ್ಪಡೆಗೆ ಮುಹೂರ್ತ ಸಹ ಫಿಕ್ಸ್ ಆಗಿದೆ. ಇಂದು (ಬುಧವಾರ) ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವ ಮಂಜುನಾಥ್ ಅವರು, ಮಾರ್ಚ್ 14 ರಂದು ಮಾಜಿ ಸಿಎಂ ಯಡಿಯೂರಪ್ಪ ಅವರು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ.
ನಾಳೆ ಜಯದೇವ ಹೃದ್ರೋಗ ಆಸ್ಪತ್ರೆಯ ಮಾಜಿ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಅವರು ಬಿಜೆಪಿ ಸೇರುವ ಮೂಲಕ ರಾಜಕೀಯ ಪ್ರವೇಶ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಮಲ್ಲೇಶ್ವರಂ ಕಚೇರಿಯಲ್ಲಿ ನಡೆಯಲಿರುವ ಪಕ್ಷ ಸೇರ್ಪಡೆ ಕಾರ್ಯಕ್ರಮದದಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್‌ದಾಸ್ ಅಗರ್ವಾಲ್, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭಾ ಪ್ರತಿಪಕ್ಷ ನಾಯಕ ಅಶೋಕ್ ಸೇರಿದಂತೆ ಪ್ರಮುಖ ನಾಯಕರ ಸಮ್ಮುಖದಲ್ಲಿ ಮಂಜುನಾಥ್ ಅವರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ.
ದಕ್ಷಿಣ ಭಾರತದಲ್ಲಿ ಕರ್ನಾಟಕವು ಬಿಜೆಪಿ ಪಾಲಿಗೆ ಅತಿ ದೊಡ್ಡ ರಾಜ್ಯವಾಗಿದ್ದು, ಕರ್ನಾಟಕದಲ್ಲಿ ಬಿಜೆಪಿ ಪರವಾದ ಅಲೆ ಇದೆ. ಈಗಾಗಲೇ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಇಲ್ಲಿ ಸೋಲು ಅನುಭವಿಸಿದ್ದು, ಲೋಕಸಭಾ ಚುನಾವಣೆ ಬಿಜೆಪಿಯ ಗೆಲುವು ಕಳೆದ ಎರಡು ಬಾರಿಯೂ ಮೂಲಕ ಸಾಬೀತಾಗಿದೆ. ಹೀಗಾಗಿ ಕಳೆದ ಬಾರಿ 25 + 1 ಸೀಟನ್ನು ಗೆದ್ದುಕೊಂಡಿದ್ದ ಬಿಜೆಪಿ ಈ ಬಾರಿ 28ಕ್ಕೆ 28 ಕ್ಷೇತ್ರವನ್ನೂ ಪಡೆಯಲು ಮಾಸ್ಟರ್ ಪ್ಲಾನ್ ಹಾಕಿಕೊಂಡಿದ್ದು, ಕಾಂಗ್ರೆಸ್ ಭದ್ರಕೋಟೆಯಾದ ಬೆಂಗಳೂರು ಗ್ರಾಮಾಂತರಕ್ಕೆ ಖ್ಯಾತ ಹೃದ್ರೋಗ ತಜ್ಞ ಡಾ. ಸಿ.ಎನ್. ಮಂಜುನಾಥ್ ಅವರನ್ನು ಕಣಕ್ಕೆ ಇಳಿಸಲು ತೀರ್ಮಾನಿಸಿದೆ.

ಈಗಾಗಲೇ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ವರಿಷ್ಠರಾದ ಹೆಚ್ ಡಿ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಜೊತೆಗೆ ಸಭೆ ನಡೆಸಿ ಅಂತಿಮವಾಗಿ ಡಾ. ಮಂಜುನಾಥ್ ಅವರನ್ನ ಕಣಕ್ಕಿಳಿಸಲು ತಿರ್ಮಾನವನ್ನ ಕೈಗೊಂಡಿದ್ದಾರೆ ಎನ್ನಲಾಗಿದೆ.












Click it and Unblock the Notifications